HomeUncategorizedರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ – ಡಿವಿಎಸ್ ಗೆ ಎಚ್‍ಡಿಕೆ ಗುದ್ದು

ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ – ಡಿವಿಎಸ್ ಗೆ ಎಚ್‍ಡಿಕೆ ಗುದ್ದು

“ಮೇಕೆದಾಟು ಯೋಜನೆಯ ಡಿಪಿಆರ್ ಮಾತ್ರವಲ್ಲ ಕಾರ್ಯಸಾಧ್ಯತಾ ವರದಿಯನ್ನು ಸಹ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರವರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ”

- Advertisement -
- Advertisement -

| ನಾನುಗೌರಿ ಡೆಸ್ಕ್ |

ಮೇಕೆದಾಟು ಯೋಜನೆ ವಿಚಾರವಾಗಿ ಡಿಪಿಆರ್ ಸಿದ್ದಪಡಿಸಿಲ್ಲ ಎಂದು ಪತ್ರಿಕೆಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಸದಾನಂದಗೌಡರ ವಿರುದ್ಧ ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್‍ನಲ್ಲಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಡಿ.ವಿ ಸದಾನಂದಗೌಡರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿಯವರು “ಮೇಕೆದಾಟು ಯೋಜನೆಯ ಡಿಪಿಆರ್ ಮಾತ್ರವಲ್ಲ ಕಾರ್ಯಸಾಧ್ಯತಾ ವರದಿಯನ್ನು ಸಹ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರವರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ” ಎಂದಿದ್ದಾರೆ.

ನಿನ್ನೆ ಸದಾನಂದಗೌಡರು “ಮೇಕೆದಾಟು ಯೋಜನೆ ಜಾರಿಯಾದರೆ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ತೊಂದರೆ ತಪ್ಪುತ್ತದೆ. ಹಾಗಾಗಿ ಡಿಪಿಆರ್ ಸಿದ್ದಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ನಾನು ಮುಂಚೆಯೂ ರಾಜ್ಯದ ಪರ ಕೆಲಸ ಮಾಡಿದ್ದು ಈಗಲೂ ರಾಜ್ಯದ ಪರ ಕೆಲಸ ಮುಂದುವರೆಸುತ್ತೇನೆ. ಅಭಿವೃದ್ದಿಯ ವಿಷಯದಲ್ಲಿ ಯಾರೋಬ್ಬರು ರಾಜಕಾರಣ ಮಾಡಬಾರದು” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಪತ್ರಿಕೆಯ ತುಣುಕನ್ನು ಟ್ವಿಟ್ಟರ್ ನಲ್ಲಿ ಅಂಟಿಸಿ ನೊ ಪಾಲಿಟಿಕ್ಸ್ ಇನ್ ಡೆವಲಪ್‍ಮೆಂಟ್ ಎಂಬ ಶೀರ್ಷಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿಎಂ ಕುಮಾರಸ್ವಾಮಿಯವರು ಮೇಲಿನಂತೆ ಕಿಡಿಕಾರಿದ್ದು ಅಲ್ಲದೇ “ಸಬರ್ಬನ್ ರೈಲು ಯೋಜನೆಯ ಕುರಿತು ಕೇಂದ್ರ ಮಂತ್ರಿ ಪಿಯೂಶ್ ಗೋಯಲ್‍ರವರ ಜೊತೆ ಸಭೆ ನಡೆಸಿ ಕಾರ್ಯ ಸಾಧ್ಯಾತ ವರದಿಗೆ ಅನುಮೋದನೆ ನೀಡಿದ್ದೇವೆ. ರೈಲ್ವೇ ಸಚಿವಾಲಯದ ಮೇ 28ರ ಪತ್ರದಂತೆ ಎಸ್.ಪಿ.ವಿ ರಚನೆಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನಿಜವಾಗಿಯೂ ಕಾಳಜಿ ಇದ್ದರೆ ‘ರಾಜಕೀಯ ಬೇಡ’ ಎನ್ನುವ ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಟಾಂಗ್ ನೀಡಿದ್ದಾರೆ.

ಅಚ್ಚರಿಯ ರೀತಿಯಲ್ಲಿ ಡಿ.ಕೆ ಶಿವಕುಮಾರ್‍ರವರು ಡಿ.ಕೆ ಶಿವಕುಮಾರ್ ರವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ದಿ ಕೆಲಸ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...