HomeUncategorized"ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ": ತೀಸ್ತಾ ಸೆಟಲ್ವಾಡ್

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

- Advertisement -
- Advertisement -

ಬೆಂಗಳೂರು: “ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ” ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅಭಿಪ್ರಾಯಪಟ್ಟರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮೇ 26, 2026ರಂದು ಆಯೋಜಿಸಲಾಗಿದ್ದ ‘ಎಚ್.ಎಸ್. ದೊರೆಸ್ವಾಮಿ ಅವರಿಗೆ ಕರ್ನಾಟಕದ ಗೌರವಾರ್ಪಣೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ದೊರೆಸ್ವಾಮಿ ಅವರಿಗೆ ಕೇವಲ 25 ವರ್ಷ ವಯಸ್ಸು. ಅಂದಿನಿಂದ ಆರಂಭಿಸಿ ನೂರು ವರ್ಷ ದಾಟಿದ ಮೇಲೂ ಅವರು ಸಮಾಜಕ್ಕಾಗಿ ನಿರಂತರವಾಗಿ ಹೋರಾಡುತ್ತಲೇ ಬದುಕಿದರು. ಅವರು ಏಕಕಾಲದಲ್ಲಿ ಗಾಂಧಿವಾದಿಯೂ ಆಗಿದ್ದರು, ಕಮ್ಯುನಿಸ್ಟ್ ಸಿದ್ಧಾಂತವನ್ನೂ ಅಪ್ಪಿಕೊಂಡಿದ್ದರು ಎಂದರು. 

ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಅವರು ಅತ್ಯಂತ ತೀವ್ರ ಸ್ವರೂಪದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಬ್ರಿಟಿಷರ ವಿರುದ್ಧದ ಹೋರಾಟಕ್ಕಾಗಿ ಅವರು ಬಾಂಬುಗಳನ್ನು ಸಿದ್ಧಪಡಿಸುತ್ತಿದ್ದರು. ಆದರೆ, ಆ ಬಾಂಬುಗಳನ್ನು ಅವರು ಯಾರನ್ನೂ ಕೊಲ್ಲಲು ಬಳಸಲಿಲ್ಲ; ಬದಲಿಗೆ ಬ್ರಿಟಿಷ್ ಸರ್ಕಾರದ ಪ್ರಮುಖ ದಾಖಲೆಗಳನ್ನು ನಾಶಪಡಿಸಲು ಬಳಸುತ್ತಿದ್ದರು. ಈ ಕಾರಣಕ್ಕಾಗಿ ಅವರು ಜೈಲು ಶಿಕ್ಷೆಯನ್ನು ಸಹ ಅನುಭವಿಸಿದ್ದರು” ಎಂದು ತೀಸ್ತಾ ಸೆಟಲ್ವಾಡ್ ಸ್ಮರಿಸಿದರು.

ಮುಂದುವರಿದು, ಗಿರಣಿ ಕಾರ್ಮಿಕರ ಹಕ್ಕುಗಳಿಗಾಗಿ ಕಾಮ್ರೇಡ್ ಶಂಕರ್ ಅವರ ಜೊತೆಗೂಡಿ ದೊರೆಸ್ವಾಮಿ ಅವರು ನಡೆಸಿದ ಹೋರಾಟಗಳನ್ನು ತೀಸ್ತಾ ನೆನಪಿಸಿಕೊಂಡರು.

“ಮಹಾತ್ಮ ಗಾಂಧೀಜಿಯವರ ಹತ್ಯೆಯ ಕುರಿತು ದೊರೆಸ್ವಾಮಿ ಅವರು ಮಹತ್ವದ ಲೇಖನವೊಂದನ್ನು ಬರೆದಿದ್ದರು. ಗಾಂಧಿ ಹತ್ಯೆಗೂ ಮುನ್ನ ನಾಥೂರಾಂ ಗೋಡ್ಸೆ ಕರ್ನಾಟಕಕ್ಕೆ ಬಂದಿದ್ದ ಹಾಗೂ ಈ ಭೀಕರ ಹತ್ಯೆಯ ಸಂಚು ಕರ್ನಾಟಕದಲ್ಲೇ ರೂಪಿತವಾಗಿತ್ತು ಎಂಬ ಆಘಾತಕಾರಿ ವಿಷಯಗಳನ್ನು ಅವರು ಆ ಲೇಖನದಲ್ಲಿ ಸವಿವರವಾಗಿ ಪ್ರಸ್ತಾಪಿಸಿದ್ದರು” ಎಂದು ತೀಸ್ತಾ ಸೆಟಲ್ವಾಡ್ ತಿಳಿಸಿದರು.

“ದೊರೆಸ್ವಾಮಿ ಅವರು ತಮ್ಮ ಇಳಿವಯಸ್ಸಿನಲ್ಲೂ ಕರ್ನಾಟಕದಲ್ಲಿ ನಡೆದ ಭೂ ವಂಚಿತರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಭಾಷಣ ಮಾಡಿದ್ದು ನನಗೆ ಇಂದಿಗೂ ನೆನಪಿದೆ. ರಾಜ್ಯದ ಕನಿಷ್ಠ ಒಂದು ಲಕ್ಷ ಹೆಕ್ಟೇರ್ ಭೂಮಿಯನ್ನು ಬಡವರಿಗೆ ಹಂಚಿಕೆ ಮಾಡಬೇಕು ಎಂದು ಅವರು ಪ್ರಬಲವಾಗಿ ಆಗ್ರಹಿಸುತ್ತಿದ್ದರು. ಸರ್ಕಾರಿ ಜಾಗ ಎಂದರೆ ಅದು ಜನರ ಜಾಗ ಎಂಬ ಗಟ್ಟಿ ನಿಲುವು ಅವರದಾಗಿತ್ತು” ಎಂದ ಅವರು, ದೊರೆಸ್ವಾಮಿ ಅವರ ನೆನಪಿನಲ್ಲಿ ಸ್ಮಾರಕ ಭವನ ನಿರ್ಮಾಣವಾಗಬೇಕು ಎಂಬ ಟ್ರಸ್ಟಿನ ಹಕ್ಕೊತ್ತಾಯವನ್ನು ಬೆಂಬಲಿಸಿದರು. ಆ ಭವನವು ಮುಂದಿನ ದಿನಗಳಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಬೇಕು ಎಂದು ಆಶಿಸಿದರು.

ಕರ್ನಾಟಕದ ನಾಗರಿಕ ಸಮಾಜದ ಜಾಗೃತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ತೀಸ್ತಾ, “ಬಾಬಾಬುಡನ್‌ಗಿರಿ ವಿವಾದ ಇರಬಹುದು, ಹಿಜಾಬ್ ವಿಚಾರ ಇರಬಹುದು ಅಥವಾ ಅಲ್ಪಸಂಖ್ಯಾತರ ಮೇಲಿನ ದಾಳಿಗಳೇ ಇರಬಹುದು; ಕರ್ನಾಟಕದ ನಾಗರಿಕ ಸಮಾಜವು ಪ್ರತಿಯೊಂದು ಅನ್ಯಾಯದ ವಿರುದ್ಧವೂ ಸದಾ ದನಿ ಎತ್ತುತ್ತಾ ಬಂದಿದೆ. ಈ ಸಮಾಜವು ಜನರ ಮೂಲಭೂತ ಹಕ್ಕುಗಳಿಗಾಗಿಯೂ ಇದೇ ರೀತಿ ದನಿ ಎತ್ತುವ ಅಗತ್ಯವಿದೆ” ಎಂದರು.

ಇದೇ ವೇಳೆ ಕರ್ನಾಟಕದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತದ ವೈಖರಿ ನಮಗೆ ಅಚ್ಚರಿ ಮೂಡಿಸುತ್ತಿದೆ. ಇಲ್ಲಿ ಜಾತ್ಯತೀತ ಸರ್ಕಾರ ಅಧಿಕಾರದಲ್ಲಿದೆ ಎಂದು ನಾವು ಭಾವಿಸಿದ್ದೆವು. ಆದರೆ, ಇಲ್ಲಿ ಪ್ಯಾಲೆಸ್ತಿನ್ ಪರ ಹೋರಾಟ ನಡೆಸಲು ಅವಕಾಶ ನೀಡದಿರಲು ಕಾರಣವೇನು? ದ್ವೇಷ ಭಾಷಣಗಳನ್ನು ತಡೆಯಲು ಮತ್ತು ಅಲ್ಪಸಂಖ್ಯಾತರ ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಏಕೆ ಮುಂದಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ನನಗೆ ಇಂದಿಗೂ ನೆನಪಿದೆ. ತಾವು ನೀಡಿದ ಭರವಸೆಯಂತೆ ಅವರು ಎರಡು ಪ್ರಮುಖ ಕಾಯ್ದೆಗಳನ್ನು ಹಿಂಪಡೆಯಲೇಬೇಕು. ಮೊದಲನೆಯದಾಗಿ ಜಾನುವಾರು ಹತ್ಯೆ ಪ್ರತಿಬಂಧಕ ತಿದ್ದುಪಡಿ ಕಾಯ್ದೆ ಹಾಗೂ ಎರಡನೆಯದಾಗಿ ಮತಾಂತರ ನಿಷೇಧ ಕಾಯ್ದೆ. ಪ್ರಣಾಳಿಕೆಯಲ್ಲಿ ಈ ಆಶ್ವಾಸನೆ ನೀಡಲಾಗಿದ್ದರೂ, ಇದುವರೆಗೆ ಅದು ಕಾರ್ಯರೂಪಕ್ಕೆ ಬಂದಿಲ್ಲ. ಇದರ ಜೊತೆಗೆ, ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು. ಕಳೆದ ಎರಡು ತಿಂಗಳುಗಳಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಹಲವು ಸಭೆಗಳನ್ನು ನಡೆಸಿ ದನಿ ಎತ್ತಿದ್ದಾರೆ; ಅವರ ಎಲ್ಲಾ ಹಕ್ಕೊತ್ತಾಯಗಳು ನ್ಯಾಯಯುತವಾಗಿವೆ ಎಂದು ಅವರು ಬೆಂಬಲಿಸಿದರು.

ದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಎಸ್‌ಐಆರ್ (SIR) ಪ್ರಕ್ರಿಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ತೀಸ್ತಾ ಸೆಟಲ್ವಾಡ್, “ಭಾರತದಲ್ಲಿ ಪ್ರಸ್ತುತ ಎಸ್‌ಐಆರ್ ಮೂಲಕ ನಾಗರಿಕರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಇದು ಸಂಪೂರ್ಣವಾಗಿ ಕಾನೂನುಬಾಹಿರ ಹಾಗೂ ಸಂವಿಧಾನ ವಿರೋಧಿ ಪ್ರಕ್ರಿಯೆಯಾಗಿದ್ದು, ಹತ್ತಾರು ದೋಷಗಳಿಂದ ಕೂಡಿದೆ. ಭಾರತದ ಪ್ರಜೆಯಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂಬ ವಾದ ಸರಿಯೇ. ಆದರೆ, ಅದಕ್ಕಾಗಿ ನಾಗರಿಕತ್ವವನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು ಇದರೊಂದಿಗೆ ಬೆಸೆಯುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯ ಪಾರದರ್ಶಕತೆಯ ಬಗ್ಗೆ ಒತ್ತಿ ಹೇಳಿದ ಅವರು, “ಮತದಾರರ ಪಟ್ಟಿಯು ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳಲ್ಲಿ ಸಾರ್ವಜನಿಕ ಪರಿಶೀಲನೆಗೆ ಒಳಗಾಗಬೇಕು. ಮತದಾರರ ಪಟ್ಟಿಯನ್ನು ಎಲ್ಲರಿಗೂ ಓದಲು ಸುಲಭವಾಗುವಂತಹ (Readable Format) ಮಾದರಿಯಲ್ಲಿ ನೀಡಬೇಕು. ಕಳೆದ ಚುನಾವಣೆಯಲ್ಲಿ ಸುಮಾರು 99 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ ಮತಗಳ ಅಂತರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಮತಗಳನ್ನು ಆಯಾ ಕ್ಷೇತ್ರಗಳ ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಕೇವಲ ಅಲ್ಪಸಂಖ್ಯಾತರಷ್ಟೇ ಅಲ್ಲದೆ, ಎಲ್ಲಾ ಧರ್ಮಗಳ ಜನರ ಮತಗಳೂ ಇದರಿಂದ ಕಣ್ಮರೆಯಾಗಿವೆ ಎಂದರು.  

ಅಲ್ಪಸಂಖ್ಯಾತರನ್ನು ಮತದಾನದ ಪ್ರಕ್ರಿಯೆಯಿಂದ ಹೊರಗಿಟ್ಟರೆ ಏನಾಗುತ್ತದೆ ಎಂದು ಕೆಲವರು ಬೇಜವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಆಲೋಚನೆಯಾಗಿದ್ದು, ಇದರ ವಿರುದ್ಧ ಇಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಬೇಕಿದೆ” ಎಂದು ಕರೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...