Homeಚಳವಳಿಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಜನ್ಮದಿನ ಪ್ರಯುಕ್ತ ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮ

ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಜನ್ಮದಿನ ಪ್ರಯುಕ್ತ ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮ

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಏಪ್ರಿಲ್‌ 10ರಂದು ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೊರೆಸ್ವಾಮಿಯವರು ತಮ್ಮ ಬದುಕಿನ ಕೊನೆ ಕ್ಷಣದವರೆಗೂ ನಿರಂತರವಾಗಿ ಹೋರಾಟಕ್ಕಾಗಿ ಮೀಸಲಿಟ್ಟವರು. ಸಿಎಎ, ಎನ್‌ಆರ್‌ಸಿ ವಿರುದ್ದ ಪ್ರತಿ ವಾರ ಪ್ರತಿಭಟನೆ ನಡೆಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಅವರು ಬಡವರಿಗೆ ಭೂಮಿ ಮತ್ತು ವಸತಿಗಾಗಿ ಶ್ರಮಿಸಿದ್ದರು. ಆದರೆ ಅವರ ನಿಧನದ ನಂತರದ ಕರ್ನಾಟಕದಲ್ಲಿ ಅನಪೇಕ್ಷಿತ ಘಟನೆಗಳು ಜರುಗುತ್ತಿವೆ. ಹಾಗಾಗಿ ಪ್ರತಿಯೊಬ್ಬರ ಸ್ವಾತಂತ್ರ್ಯದ ರಕ್ಷಣೆಗಾಗಿ, ಮತ್ತು ಸಮಾಜದ ಸೌಹಾರ್ದತೆಯನ್ನು ಕಾಪಾಡುವುದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಚ್.ಎಸ್ ದೊರೆಸ್ವಾಮಿ ಜನ್ಮದಿನಾಚರಣಾ ಸಮಿತಿಯ ಸಂಚಾಲಕರಾದ ಜಗದೀಶ್ ಜಗನ್ ರಾವ್ ತಿಳಿಸಿದ್ದಾರೆ.

ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ. ತದನಂತರ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕದ ಮುಂದಿರುವ ಸವಾಲುಗಳನ್ನು ಎದುರಿಸುವ ಬಗೆ ಹೇಗೆ ಎಂಬುದರ ಕುರಿತು ಚರ್ಚೆ ಇರುತ್ತದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಮೈಕಲ್ ಫರ್ನಾಂಡೀಸ್, ಸಮಾಜವಾದಿಗಳಾದ ಜಿ.ವಿ ಸುಂದರ್, ಕೋದಂಡರಾಮಯ್ಯ, ವೆಂಕಟೇಶ್, ಹೋರಾಟಗಾರರಾದ ಸಿರಿಮನೆ ನಾಗರಾಜ್, ಪ್ರಕಾಶ್ ಕಮ್ಮರಡಿ, ವಿವೇಕ್ ಮುಂತಾದವರು ಭಾಗವಹಿಸಲಿದ್ದಾರೆ. ಅಲ್ಲದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯರು, ವಿವಿಧ ಸಂಘಟನೆಗಳ ಮುಖಂಡರು, ಮಾಹಿತಿ ಹಕ್ಕು ಕಾರ್ಯಕರ್ತರು, ಸಾಮಾಜಿಕ ಹೋರಾಟಗಾರರು, ಯುವಕ-ಯುವತಿಯರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಎಲ್ಲಾ ಸಮಾನ ಮನಸ್ಕರು ಉಪಸ್ಥಿತರಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ದೊರೆಸ್ವಾಮಿ ಮತ್ತು ಬಡಜನರ ಭೂಮಿ-ವಸತಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Veteran Freedom Fighter Dorai Swamyji was a Secular Democratic open heart very simple legend who’s always fight for every citizen’s right , It’s my great pleasure that I spend some un valuable days with them , my hearty Salutes with Proud to them always- —-

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...