Homeಕರ್ನಾಟಕಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ

ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ

- Advertisement -
- Advertisement -

 

ಕಾಂಗ್ರೆಸ್ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಕಾರಣಕರ್ತರು ಎನ್ನಲಾಗಿದ್ದ ಎಚ್‌. ವಿಶ್ವನಾಥ್ ಹಾಗೂ ಸಿ. ಪಿ. ಯೊಗೇಶ್ವರ್ ಸೇರಿದಂತೆ ಐವರನ್ನು ವಿಧಾನ ಪರಿಷತ್ತಿಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದೆ.

ರಾಜ್ಯ ಸರ್ಕಾರದ ಈ ಶಿಫಾರಸ್ಸಿಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ.‌ ಸಿನಿಮಾ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್, ಸಾಹಿತ್ಯ ಕ್ಷೇತ್ರದಿಂದ ವಿಶ್ವನಾಥ್, ಸಮಾಜ ಸೇವಾ ಕ್ಷೇತ್ರದಿಂದ ಭಾರತಿ ಶೆಟ್ಟಿ, ಬುಡಕಟ್ಟು ಕ್ಷೇತ್ರದಿಂದ ಶಾಂತಾರಾಮ್ ಸಿದ್ದಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಡಾ.ತಳವಾರ್ ಸಾಬಣ್ಣ ಅವರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ.

ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪನವರ ಸೂಚನೆಯಂತೆ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್, ಸಿ.ಪಿ. ಯೋಗೇಶ್ವರ್ ಅವರನ್ನು ಬಿಜೆಪಿ ಕೈಮಾಂಡ್​​​ ಪರಿಷತ್​​ಗೆ ನಾಮನಿರ್ದೇಶನ ಮಾಡಿದೆ ಎನ್ನಲಾಗಿದೆ.

2018ರ ಸಾರ್ವತ್ರಿಕ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರಕಾರದ ಪತನದ ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದರು.

ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್. ವಿಶ್ವನಾಥ್ ಪರಾಭವಗೊಂಡಿದ್ದರು. ಈಗ ವಿಧಾನಪರಿಷತ್ ಪ್ರವೇಶಿಸುವ ಮೂಲಕ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ರಾಜ್ಯಪಾಲ ವಜುಭಾಯಿ ಮೊದಲಿಗೆ ಭಾರತೀ ಶೆಟ್ಟಿ, ಸಿ. ಪಿ. ಯೋಗೀಶ್ವರ್  ಹಾಗೂ ಎಚ್. ವಿಶ್ವನಾಥ್ ನೇಮಕಕ್ಕೆ ಅನುಮೋದನೆ ನೀಡಲು ಒಪ್ಪಿಗೆ ನೀಡಿರಲಿಲ್ಲ ಎನ್ನಲಾಗಿದ್ದು, ನಂತರ ಇಂದು ಬೆಳಿಗ್ಗೆ ರಾಜಭವನಕ್ಕೆ ಭೇಟಿನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರ ಜೊತೆ ಚೆರ್ಚಿಸಿ ರಾಜಕೀಯ ವ್ಯಕ್ತಿಗಳ ನೇಮಕಕ್ಕೂ ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

ರಾಜ್ಯದ ವಿಧಾನಪರಿಷತ್​ನಲ್ಲಿ ಒಟ್ಟು 11 ಸ್ಥಾನಗಳನ್ನ ರಾಜ್ಯಪಾಲರೇ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಪ್ರಸ್ತುತ ಐದು ಸ್ಥಾನಗಳು ಖಾಲಿ ಇದ್ದವು.


ಓದಿ: ರಾಜ್ಯಸಭೆ ಚುನಾವಣೆ: ಬಿಜೆಪಿ ಬೇಗುದಿ, ಕಾಂಗ್ರೆಸ್ ಒಳಾಟ ಮತ್ತು ಜೆಡಿಎಸ್‍ನಲ್ಲಿ ಎಲ್ಲವೂ ಮಾಮೂಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...