Homeಮುಖಪುಟವಿಶ್ವ ಹಿಂದೂ ಪರಿಷತ್‌ ವೆಬ್ ಸೈಟ್ ಹ್ಯಾಕ್ ಮಾಡಿ ಮೋದಿ ವಿರುದ್ದ ಹೋರಾಡಲು ಕರೆಕೊಟ್ಟ ಹ್ಯಾಕರ್‌

ವಿಶ್ವ ಹಿಂದೂ ಪರಿಷತ್‌ ವೆಬ್ ಸೈಟ್ ಹ್ಯಾಕ್ ಮಾಡಿ ಮೋದಿ ವಿರುದ್ದ ಹೋರಾಡಲು ಕರೆಕೊಟ್ಟ ಹ್ಯಾಕರ್‌

ಹ್ಯಾಕರ್‌ಗಳು ವೆಬ್‌ಸೈಟ್‌ನಲ್ಲಿ "ಪ್ರಚೋದನಕಾರಿ" ಘೋಷಣೆಗಳನ್ನು ಪೋಸ್ಟ್ ಮಾಡಿರುವುದು ಆತಂಕದ ವಿಷಯವಾಗಿದೆ ಎಂದ ವಿಎಚ್‌ಪಿ ನಾಯಕ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಲಾಗಿದ್ದು, ಪ್ರಚೋದನಕಾರಿ ಸಂದೇಶಗಳನ್ನು ಮುಖಪುಟದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಅದರ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.

ವೆಬ್‌ಸೈಟ್ ಅನ್ನು ಬೆಳಿಗ್ಗೆ ಹ್ಯಾಕ್ ಮಾಡಲಾಗಿದ್ದು ಅದಕ್ಕಾಗಿ ವಿಎಚ್‌ಪಿಯ ಉನ್ನತ ನಾಯಕತ್ವವು ತಾತ್ಕಾಲಿಕವಾಗಿ ಸೈಟ್ ಅನ್ನು ಮುಚ್ಚಲು ನಿರ್ಧರಿಸಿದೆ. ಸೈಟ್‌ಗೆ ಲಾಗ್ ಇನ್ ಆದಾಗ ಅದು “ನಿರ್ವಹಣೆಯಲ್ಲಿದೆ” ಎಂದು ತೋರಿಸುತ್ತಿದೆ.

ಹ್ಯಾಕರ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಗೃಹ ಸಚಿವಾಲಯ (ಎಂಎಚ್‌ಎ) ಮತ್ತು ದೆಹಲಿ ಪೊಲೀಸ್ ಸೈಬರ್ ಸೆಲ್ ಅನ್ನು ಸಂಪರ್ಕಿಸಿದ್ದೇವೆ ಎಂದು ಕುಮಾರ್ ಹೇಳಿದ್ದಾರೆ.

ಹ್ಯಾಕರ್‌ಗಳು ವೆಬ್‌ಸೈಟ್‌ನಲ್ಲಿ “ಪ್ರಚೋದನಕಾರಿ” ಘೋಷಣೆಗಳನ್ನು ಪೋಸ್ಟ್ ಮಾಡಿರುವುದು ಆತಂಕದ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ವೆಬ್‌ಸೈಟ್‌ನಲ್ಲಿ “ಮುಸ್ಲಿಮರ ನರಮೇಧ ಬೇಡ, ಹಿಂದುತ್ವ ಬೇಡ, ದಲಿತರು ಮತ್ತು ಮುಸ್ಲಿಮರು ಮೋದಿ ಸರ್ಕಾರದ ವಿರುದ್ಧ ಹೋರಾಡಬೇಕು” ಎಂಬ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಇದು ಸಣ್ಣ ಘಟನೆಯಲ್ಲ. ಇದು ನಮ್ಮ ಬೆಂಬಲಿಗರನ್ನು ಮತ್ತು ಸದಸ್ಯರನ್ನು ಕೆರಳಿಸುವುದು. ಇದು ಕೋಮು ಗೊಂದಲವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

ಈ ಹಿಂದೆ 2013 ರಲ್ಲಿ, ವಿಎಚ್‌ಪಿ ಇದರ ಅಧಿಕೃತ ಫೇಸ್‌ಬುಕ್ ಪುಟವನ್ನು ಹ್ಯಾಕ್ ಮಾಡಲಾಗಿತ್ತು. ನಂತರ ಅದರ ನಾಯಕರು “ದುರುದ್ದೇಶಪೂರಿತ ಧಾರ್ಮಿಕ ಮತ್ತು ರಾಜಕೀಯ” ವಿಷಯಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.


ಓದಿ: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ನಮ್ಮ ಯೂಟ್ಯೂನ್ ಚಾನೆಲ್ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...