Homeಮುಖಪುಟಹಾದಿಯಾ ಅಕ್ರಮ ಬಂಧನದಲ್ಲಿಲ್ಲ: ತಂದೆ ಅಶೋಕನ್ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

ಹಾದಿಯಾ ಅಕ್ರಮ ಬಂಧನದಲ್ಲಿಲ್ಲ: ತಂದೆ ಅಶೋಕನ್ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕಳೆದ ತಿಂಗಳಿನಿಂದ ನನ್ನ ಮಗಳು ನಾಪತ್ತೆಯಾಗಿದ್ದು, ಆಕೆಯನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ಡಾ. ಹಾದಿಯಾ (ಅಖಿಲಾ) ಅವರ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕೇರಳ ಹೈಕೋರ್ಟ್ ಇಂದು(ಡಿ.15) ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ಸಿ.ಪ್ರದೀಪ್ ಕುಮಾರ್ ಅವರನ್ನೊಳಗೊಂಡ ಕೇರಳ ಹೈಕೋರ್ಟ್‌ ವಿಭಾಗೀಯ ಪೀಠವು, ಹಾದಿಯಾ ಯಾವುದೇ ಅಕ್ರಮ ಬಂಧನದಲ್ಲಿಲ್ಲ. ಆಕೆ ತನ್ನ ಜೀವನವನ್ನು ಮುಕ್ತವಾಗಿ ನಡೆಸುತ್ತಿದ್ದಾರೆ ಎಂದು ಹೇಳಿದ್ದು, ಹೀಗಾಗಿ ಆಕೆಯ ತಂದೆಯ ಹೇಬಿಯಸ್ ಕಾರ್ಪಸ್ ಅರ್ಜಿ ಮುಂದುವರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಹಾದಿಯಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಹೇಳಿಕೆಯನ್ನು ಆಧರಿಸಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. “ತಾನು ಗಂಡನಿಂದ ವಿಚ್ಛೇದನ ಪಡೆದು ಮತ್ತೆ ಮದುವೆಯಾಗಿದ್ದೇನೆ. ಪ್ರಸ್ತುತ ತಿರುವನಂತಪುರದಲ್ಲಿ ವಾಸಿಸುತ್ತಿದ್ದೇನೆ ಎಂದು ಹಾದಿಯಾ ತಿಳಿಸಿದ್ದಾಗಿ ನ್ಯಾಯಾಲಯ ಹೇಳಿದೆ. ತಾನು ಪೋಷಕರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ತೋರಿಸಲು ಕರೆ ದಾಖಲೆಗಳ ಪುರಾವೆಯನ್ನು ಹಾದಿಯಾ ಸಲ್ಲಿಸಿದ್ದಾರೆ. ಇದಲ್ಲದೆ, ಆಕೆ ತನ್ನ ಪ್ರಸ್ತುತ ವಿಳಾಸದ ವಿವರ ಮತ್ತು ಸಂಪರ್ಕ ವಿವರಗಳನ್ನು ಕೂಡ ನೀಡಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

“ನನ್ನ ಮಗಳು ಹಾದಿಯಾಳನ್ನು ಆಕೆಯ ಪತಿ ಶಫಿನ್ ಜಹಾನ್ ಮತ್ತು ಇತರರು ಅಕ್ರಮವಾಗಿ ಬಂಧಿಸಿಟ್ಟಿದ್ದಾರೆ” ಎಂದು ಆರೋಪಿಸಿ ಹಾದಿಯಾ ತಂದೆ ಅಶೋಕನ್ ದೂರು ನೀಡಿದ್ದರು.

“ಕಳೆದ ಒಂದು ತಿಂಗಳಿನಿಂದ ನನ್ನ ಮಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಆಕೆ ಮಲಪ್ಪುರಂನಲ್ಲಿ ನಡೆಸುತ್ತಿದ್ದ ಹೊಮಿಯೋ ಕ್ಲೀನಿಕ್ ಕೂಡ ಬಾಗಿಲು ಮುಚ್ಚಿದೆ”. ಹಾಗಾಗಿ ಆಕೆಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಹೇಬಿಯಸ್ ಕಾರ್ಪಸ್ ರಿಟ್ ಹೊರಡಿಸಲು ಅಶೋಕನ್ ಕೋರಿದ್ದರು.

ಅಶೋಕನ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣ ಸಂಬಂಧ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೇಳಿತ್ತು.

ಯಾರು ಈ ಹಾದಿಯಾ?

2016ರಲ್ಲಿ ಹೋಮಿಯೋಪಥಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಹಿಂದೂ ಹುಡುಗಿ ಹಾದಿಯಾ(ಅಖಿಲಾ ಅಶೋಕ್), ಶಫೀನ್ ಜಹಾನ್ ಎಂಬಾತನ್ನು ಪ್ರೀತಿಸಿ, ಇಸ್ಲಾಮ್‌ಗೆ ಮತಾಂತರಗೊಂಡು ಮದುವೆಯಾಗಿದ್ದರು. ಹಾದಿಯಾಳ ಪೋಷಕರು ಇದೊಂದು ‘ಲವ್ ಜಿಹಾದ್ ಕೇಸ್’ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಹಾದಿಯಾಳ ವಿವಾಹವನ್ನು ಅಮಾನ್ಯಗೊಳಿಸಿ ಆಕೆಯನ್ನು ಪೋಷಕರ ಸುಪರ್ದಿಗೆ ಒಪ್ಪಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹಾದಿಯಾ ಪತಿ ಶಫೀನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಮೂಲಕ ಈ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಹಾದಿಯಾ ಮತ್ತು ಆಕೆಯ ಪತಿಯ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಅವರ ಮದುವೆಯನ್ನು ಊರ್ಜಿತಗೊಳಿಸಿತ್ತು. ಹಾದಿಯಾಗೆ ಆಕೆಯ ಇಚ್ಚೆಯಂತೆ ಬಾಳಬಹುದು ಎಂದಿತ್ತು.

ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾದ ಹಾದಿಯಾ

ಕಳೆದ ಕೆಲ ದಿನಗಳ ಹಿಂದೆ ತನ್ನ ಪತಿ ಶಫೀನ್ ಜಹಾನ್‌ಗೆ ವಿಚ್ಚೇದನ ಕೊಟ್ಟು ಹಾದಿಯಾ ಮುಸ್ಲಿಂ ವ್ಯಕ್ತಿಯನ್ನೇ ಎರಡನೇ ಮದುವೆಯಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಪತಿ ಶಫೀನ್ ಜಹಾನ್ ಮತ್ತು ಇತರರು ಬಂಧಿಸಿಟ್ಟಿದ್ದಾರೆ ಎಂದು ತಂದೆ ಅಶೋಕನ್ ದೂರು ನೀಡಿದ್ದರು. ಇದೀಗ ನ್ಯಾಯಾಲಯಕ್ಕೆ ಹಾದಿಯಾ ಕೊಟ್ಟ ಹೇಳಿಕೆಯಲ್ಲಿ ಆಕೆ ಮೊದಲ ಪತಿಗೆ ವಿಚ್ಚೇದನ ಕೊಟ್ಟು ಎರಡನೇ ಮದುವೆಯಾಗಿರುವುದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: 24 ಗಂಟೆಯೊಳಗೆ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡುವಂತೆ ಡಿ. ರೂಪಾಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...