Homeಮುಖಪುಟಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ಆರೋಪಿಯು ಭಾರತೀಯ ಯುದ್ಧ ವಿಮಾನ ಮತ್ತು ಅವುಗಳ ಉತ್ಪಾದನಾ ಘಟಕದ ಗೌಪ್ಯ ಮಾಹಿತಿಯನ್ನು ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ISI ಗೆ ಒದಗಿಸುತ್ತಿದ್ದ

- Advertisement -
- Advertisement -

ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ISI) ಏಜೆನ್ಸಿಗೆ ಭಾರತೀಯ ಯುದ್ಧ ವಿಮಾನಗಳ ರಹಸ್ಯ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಇಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನ ಉದ್ಯೋಗಿಯನ್ನು ಬಂಧಿಸಿದೆ.

“ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ನಾಸಿಕ್ ಘಟಕವು ISI ಜೊತೆ ನಿರಂತರ ಸಂಪರ್ಕದಲ್ಲಿದ್ದ ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ಪಡೆದಿತ್ತು. ದೀಪಕ್ ಶಿರ್ಸತ್ ಎಂಬ ವ್ಯಕ್ತಿಯು ಭಾರತೀಯ ಯುದ್ಧ ವಿಮಾನ ಮತ್ತು ಅವುಗಳ ಉತ್ಪಾದನಾ ಘಟಕದ ಬಗ್ಗೆಗಿನ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನದ ಪತ್ತೇದಾರಿ ಸಂಸ್ಥೆಗೆ ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಒದಗಿಸುತ್ತಿದ್ದ” ಎಂದು ಡಿಸಿಪಿ ವಿನಯ್ ರಾಥೋಡ್ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ISI ಏಜೆಂಟ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಂಧಿಸಿದ NIA

ನಾಸಿಕ್ ಬಳಿಯ ಓಜರ್‌ನಲ್ಲಿರುವ HAL ವಿಮಾನ ಉತ್ಪಾದನಾ ಘಟಕ, ವಾಯುನೆಲೆ ಮತ್ತು ಉತ್ಪಾದನಾ ಘಟಕದೊಳಗಿನ ನಿಷೇಧಿತ ಪ್ರದೇಶಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಹಾಯಕ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ 41 ವರ್ಷದ ದೀಪಕ್ ಶಿರ್ಸತ್‌ ವಿರುದ್ಧ ’ಅಧಿಕೃತ ರಹಸ್ಯ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯಿಂದ ಮೂರು ಮೊಬೈಲ್ ಹ್ಯಾಂಡ್‌ಸೆಟ್‌ಗಳು, ಐದು ಸಿಮ್ ಕಾರ್ಡ್‌ಗಳು ಮತ್ತು ಎರಡು ಮೆಮೊರಿ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

HAL ‌ನ ವಿಮಾನ ಉತ್ಪಾದಕ ಘಟಕವೂ ನಾಸಿಕ್‌ನಿಂದ 24 ಕಿ.ಮೀ ಮತ್ತು ಮುಂಬೈನಿಂದ 200 ಕಿ.ಮೀ ದೂರದ ಓಜಾರ್‌ನಲ್ಲಿದೆ.

ಮಿಗ್ -21FL ವಿಮಾನ ಮತ್ತು K-13 ಕ್ಷಿಪಣಿಗಳ ಪರವಾನಗಿ ತಯಾರಿಕೆಗಾಗಿ 1964 ರಲ್ಲಿ ಸ್ಥಾಪನೆಯಾದ ಈ ಘಟಕವೂ ಮಿಗ್ -21M, ಮಿಗ್ -21BSI, ಮಿಗ್ -27M ಮತ್ತು ಅತ್ಯಾಧುನಿಕ ಸು-30 MKI ಫೈಟರ್ ಜೆಟ್ ಮುಂತಾದ ಮಿಗ್ ವಿಮಾನಗಳನ್ನೂ ತಯಾರಿಸುತ್ತದೆ.

ಈ ಘಟಕವು ಮಿಗ್ ಸರಣಿಯ ವಿಮಾನದ ಕೂಲಂಕುಷ ಪರೀಕ್ಷೆ ಮತ್ತು ಸು -30MKI ವಿಮಾನಗಳ ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆ (RHO) ಅನ್ನು ಸಹ ನಿರ್ವಹಿಸುತ್ತದೆ.

ಇದನ್ನೂ ಓದಿ: ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...