Homeಮುಖಪುಟಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

ಹಲಾಲ್ ಉತ್ಪನ್ನಗಳ ನಿಷೇಧ: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂಕೋರ್ಟ್‌ ನೊಟೀಸ್‌

- Advertisement -
- Advertisement -

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ವಿವರಣೆ ಕೋರಿ ಸುಪ್ರೀಂಕೋರ್ಟ್‌ ನೊಟೀಸ್‌ ಜಾರಿಗೊಳಿಸಿದೆ.

ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಜಮಿಯತ್ ಉಲಮಾ-ಎ-ಮಹಾರಾಷ್ಟ್ರ ಸಂಘಟನೆ, ಉತ್ತರಪ್ರದೇಶ ಸರಕಾರ ಹಲಾಲ್‌ ಉತ್ಪನ್ನಗಳ ಮಾರಾಟ, ತಯಾರಿಕೆ, ಸಂಗ್ರಹಣೆ  ನಿಷೇಧಿಸಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಹಲಾಲ್-ಪ್ರಮಾಣೀಕೃತ ಉತ್ಪನ್ನಗಳ ಕುರಿತು ನವೆಂಬರ್ 18ರಂದು ಉತ್ತರಪ್ರದೇಶ ಸರಕಾರ ಆದೇಶಿಸಿತ್ತು. ಆದೇಶವು ವಿವಾದಕ್ಕೆ ಕಾರಣವಾಗಿತ್ತು. ಹಲಾಲ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ರಾಜ್ಯಾದ್ಯಂತ ಮಾಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲಾಲ್‌ ಉತ್ಪನ್ನಗಳ ನಿಷೇಧವು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಚಿಲ್ಲರೆ ವ್ಯಾಪಾರಿಗಳಿಗೆ ಗೊಂದಲವನ್ನು ಉಂಟುಮಾಡುವ ಮತ್ತು ಕಾನೂನುಬದ್ಧ ವ್ಯಾಪಾರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿತ್ತು.

ನಾವು ಆರ್ಟಿಕಲ್ 32 ರ ಅಡಿಯಲ್ಲಿ ಅದನ್ನು ಏಕೆ ಪರಿಗಣಿಸಬೇಕು? ಎಂದು ವಿಚಾರಣೆಯ ಆರಂಭದಲ್ಲಿ ನ್ಯಾಯಮೂರ್ತಿ ಗವಾಯಿ ಅವರು ಹಲಾಲ್ ಇಂಡಿಯಾವನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್ ಅವರಿಗೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು ಹಲಾಲ್ ನಿಷೇಧದಿಂದಾಗುವ ವ್ಯಾಪಾರ ಮತ್ತು ವಾಣಿಜ್ಯದ ಮೇಲೆ ಅದರ ಪ್ರಭಾವವನ್ನು ಉಲ್ಲೇಖಿಸಿದ್ದಾರೆ. ಒಂದು ನಿರ್ದಿಷ್ಟ ಆದೇಶವನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ, ಆ ತಡೆಯಾಜ್ಞೆಯು ದೇಶಾದ್ಯಂತ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ಸ್ವರೂಪದ ಅಧಿಸೂಚನೆಯನ್ನು ನೀಡಬಹುದೇ ಮತ್ತು ಎರಡನೆಯದಾಗಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳ ಘಟಕಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಬಹುದೇ ಎಂಬುದರ ಕುರಿತು ನಿಮ್ಮ ಗಮನವು ಅಗತ್ಯವಿದೆ ಎಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಜಮಿಯತ್ ಉಲಮಾ-ಎ-ಮಹಾರಾಷ್ಟ್ರವನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಜು ರಾಮಚಂದ್ರನ್ ಅವರು ಉತ್ತರ ಪ್ರದೇಶ ಸರಕಾರದ ನಿಷೇಧ ಆದೇಶವು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾದಿಸಿದರು.

ಆರ್ಟಿಕಲ್ 32 ರ ಅಡಿಯಲ್ಲಿ ಅರ್ಜಿಗಳನ್ನು ಪರಿಗಣಿಸಲು ಆರಂಭದಲ್ಲಿ ಕೋರ್ಟ್‌ ಮುಂದಾಗದಿದ್ದರೂ, ಪೀಠವು ಅಂತಿಮವಾಗಿ ನೋಟಿಸ್ ನೀಡಲು ನಿರ್ಧರಿಸಿತು. ನ್ಯಾಯಮೂರ್ತಿ ಗವಾಯಿ ಅವರು ಈ ಬಗ್ಗೆ ಉತ್ತರಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದ್ದಾರೆ.  ಆದರೆ ಆದೇಶಕ್ಕೆ ತಡೆ ನೀಡಲು ಕೋರ್ಟ್‌ ನಿರಾಕರಿಸಿದೆ, ಅಂತಹ ಮನವಿಯನ್ನು ಮುಂದಕ್ಕೆ ಪರಿಗಣಿಸಲಾಗುವುದು ಎಂದು ಪೀಠವು ಹೇಳಿದೆ.

ಏನಿದು ಆದೇಶ?

ಉತ್ತರಪ್ರದೇಶ ಸರ್ಕಾರ ಹಲಾಲ್ ಟ್ಯಾಗ್ ಹೊಂದಿರುವ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನ.18ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳು ಈ ನಿರ್ಬಂಧಗಳಿಗೆ ಒಳಪಟ್ಟಿರುವುದಿಲ್ಲ.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಲಾಗಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಸೆಕ್ಷನ್ 29ರಲ್ಲಿ ನೀಡಲಾದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಮಾತ್ರ ಇರುತ್ತದೆ. ಅವರು ಕಾಯಿದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಮಾನದಂಡಗಳನ್ನು ಪರಿಶೀಲಿಸುತ್ತಾರೆ ಎಂದು ಆದೇಶದಲ್ಲಿ ಹೇಳಲಾಗಿತ್ತು.

ಇದಲ್ಲದೆ ಚಿಲ್ಲರೆ ಮಾರಾಟಗಾರರಿಗೆ ನಕಲಿ ಹಲಾಲ್ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮಾರಾಟವನ್ನು ಹೆಚ್ಚಿಸಲು ಜನರ ಧಾರ್ಮಿಕ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಂಪನಿ ಮತ್ತು ಇತರ ಕೆಲವು ಸಂಸ್ಥೆಗಳ ವಿರುದ್ಧ ಲಕ್ನೋ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು. ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಜಮಿಯತ್ ಉಲ್ಲೆಮಾ ಹಿಂದ್ ಹಲಾಲ್ ಟ್ರಸ್ಟ್,  ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿ ಕೆಲವು ಸಂಸ್ಥೆಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

ಇದನ್ನು ಓದಿ: ಪಶ್ಚಿಮ ಬಂಗಾಳ: ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿ; ಮೂವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...