Homeಮುಖಪುಟರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

- Advertisement -
- Advertisement -

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. “ಇದು ತಾರತಮ್ಯವನ್ನು ಸೃಷ್ಟಿಸುತ್ತದೆ, ವಿಭಿನ್ನ ಧಾರ್ಮಿಕ ಪದ್ಧತಿಗಳನ್ನು ಅನುಸರಿಸುವ ಪ್ರಯಾಣಿಕರ ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ದೂರುದಾರರು ವಾದಿಸಿದ್ದಾರೆ ಎಮದು ‘ದಿ ಅಬ್ಸರ್ವರ್ ಪೋಸ್ಟ್’ ವರದಿ ಮಾಡಿದೆ.

ನವೆಂಬರ್ 24 ರ ಎನ್‌ಎಚ್‌ಆರ್‌ಸಿಯ ವಿಚಾರಣೆಯ ಪ್ರಕಾರ, ಆರೋಪಗಳು ಪ್ರಾಥಮಿಕವಾಗಿ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹೇಳಿದೆ. ಭೋಪಾಲ್‌ನ ಸುನಿಲ್ ಅಹಿರ್ವಾರ್ ಸಲ್ಲಿಸಿದ ದೂರಿನಲ್ಲಿ, ಈ ಪದ್ಧತಿಯು ಸಾಂಪ್ರದಾಯಿಕವಾಗಿ ಮಾಂಸ ವ್ಯಾಪಾರದಲ್ಲಿ ಕೆಲಸ ಮಾಡುವ ಹಿಂದೂ ದಲಿತ ಸಮುದಾಯಗಳ ಜೀವನೋಪಾಯಕ್ಕೆ ಹಾನಿ ಮಾಡುತ್ತದೆ ಎಂದು ಹೇಳಲಾಗಿದೆ. ಮಾಂಸ ಸಂಸ್ಕರಣೆಯ ಒಂದೇ ವಿಧಾನವನ್ನು ಬೆಂಬಲಿಸುವ ಮೂಲಕ ಇದು ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂ ಮತ್ತು ಸಿಖ್ ಪ್ರಯಾಣಿಕರಿಗೆ ಅವರ ಧಾರ್ಮಿಕ ನಂಬಿಕೆಗಳಿಗೆ ಹೊಂದಿಕೆಯಾಗುವ ಆಹಾರ ಆಯ್ಕೆಗಳಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಇದು ನಮ್ಮ ಸಮಾನತೆ, ತಾರತಮ್ಯವಿಲ್ಲದಿರುವಿಕೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಘನತೆಯ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದಾರೆ. “ಇದು ಸಂವಿಧಾನದ 14, 15, 19(1)(ಜಿ), 21 ಮತ್ತು 25 ನೇ ವಿಧಿಗಳನ್ನು ಉಲ್ಲಂಘಿಸುತ್ತದೆ” ಎಂದು ಅವರು ತಮ್ಮ ವಾದವನ್ನು ಬೆಂಬಲಿಸಲು ಸುಪ್ರೀಂ ಕೋರ್ಟ್‌ನ ಹಲವಾರು ತೀರ್ಪುಗಳನ್ನು ಉಲ್ಲೇಖಿಸಿದರು.

ಸದಸ್ಯ ಪ್ರಿಯಾಂಕ್ ಕನೂಂಗೊ ನೇತೃತ್ವದ ಎನ್‌ಎಚ್‌ಆರ್‌ಸಿ ಪೀಠವು ದೂರುದಾರನ ಕಳವಳಗಳನ್ನು ಒಪ್ಪಿಕೊಂಡಿದೆ. ರೈಲ್ವೆ ಮಂಡಳಿಯ ಅಧ್ಯಕ್ಷರಿಗೆ ನೋಟಿಸ್ ನೀಡುವಂತೆ ತನ್ನ ರಿಜಿಸ್ಟ್ರಿಗೆ ನಿರ್ದೇಶಿಸಿತು. ಆರೋಪಗಳನ್ನು ತನಿಖೆ ಮಾಡಿ ಎರಡು ವಾರಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ರೈಲ್ವೆಗೆ ಸೂಚಿಸಲಾಗಿದೆ. “ರೈಲ್ವೆಯು ಸರ್ಕಾರಿ ಸಂಸ್ಥೆಯಾಗಿರುವುದರಿಂದ, ಸಂವಿಧಾನದ ಜಾತ್ಯತೀತ ಮನೋಭಾವದ ಪ್ರಕಾರ ಎಲ್ಲಾ ಧಾರ್ಮಿಕ ನಂಬಿಕೆಗಳ ಆಹಾರದ ಆಯ್ಕೆಯ ಹಕ್ಕನ್ನು ಗೌರವಿಸಬೇಕು” ಎಂದು ಆಯೋಗ ಹೇಳಿದೆ.

ಹಲಾಲ್ ಮಾಂಸವನ್ನು ಮಾತ್ರ ಮಾರಾಟ ಮಾಡುವುದು ಹಿಂದೂ ಪರಿಶಿಷ್ಟ ಜಾತಿ ಸಮುದಾಯಗಳು ಮತ್ತು ಇತರ ಮುಸ್ಲಿಮೇತರ ಗುಂಪುಗಳ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಎನ್‌ಎಚ್‌ಆರ್‌ಸಿ ಗಮನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...