Homeಕರ್ನಾಟಕಹಲಾಲ್ ಎಂದು ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಹಿಂದೆಯೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ...

ಹಲಾಲ್ ಎಂದು ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಹಿಂದೆಯೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ – ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವು ನೀತಿಗಳು ಮತ್ತು ನಿರ್ಧಾರಗಳ ಕುರಿತು ಸರ್ಕಾರವನ್ನು ರಚನಾತ್ಮಕವಾಗಿ ಪ್ರಶ್ನಿಸುತ್ತವೆ. ಆದರೆ, ನಮ್ಮ ಸರ್ಕಾರದ ಬಜೆಟ್‌ನಲ್ಲಿ ರಚನಾತ್ಮಕ ಟೀಕೆಗಳಿಗೆ ಅವಕಾಶವೇ ಇಲ್ಲದಿರುವಾಗ ರಾಜ್ಯದ ಬಿಜೆಪಿ ನಾಯಕರು ಹಲಾಲ್ ಬಜೆಟ್ ಎಂಬ ಟೊಳ್ಳು ಟೀಕೆಯ ಮೊರೆ ಹೋಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಸ್ಟಿರಿಯೋಟೈಪ್ ಟೀಕೆಯ ಮೂಲಕ ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಪ್ರಿಯಾಂಕ್ ಖರ್ಗೆ, ಅವರು ಮೌಲ್ಯಯುತ ರಾಜಕಾರಣಕ್ಕೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಬಜೆಟ್ ಬಗ್ಗೆ ಅರ್ಥಪೂರ್ಣ ಚರ್ಚೆ ಮಾಡಲು ಸಾಮರ್ಥ್ಯವಿಲ್ಲದ ಬಿಜೆಪಿಗೆ #HalalBudget ಕೊನೆಯ ಅಸ್ತ್ರವಾಗಿದೆ. ಹಿಂದೆ ಹೀಗೆಯೇ ಹಲಾಲ್, ಜಟ್ಕಾ ಕಟ್ ಎಂಬ ವಿಭಜನಾತ್ಮಕ ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಅಲ್ಲದೆ, ಬಿಜೆಪಿ ಪಕ್ಷವು ಬಣ ಬಡಿದಾಟದ ಹಲಾಲ್ ಕಟ್‌ನಿಂದಾಗಿ ಹಲವು ತುಂಡುಗಳಾಗಿದೆ. ಬಜೆಟ್ ಬಗ್ಗೆ ರಚನಾತ್ಮಕ ಟೀಕೆಗಳನ್ನು ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಚರ್ಚೆಗೆ ಮುಕ್ತವಾಗಿದ್ದು, ಉತ್ತರಿಸಲು ತಯಾರಿದ್ದೇವೆ. ಆದರೆ ಬಿಜೆಪಿ ಚರ್ಚೆಗೆ ಸಿದ್ದವಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಸಮಗ್ರ ಏಳಿಗೆಗೆ, ಆರ್ಥಿಕ ಸುಸ್ಥಿರತೆಗೆ, ಸಾಮಾಜಿಕ ಉನ್ನತಿಗೆ ನಮ್ಮ ಬಜೆಟ್ ಪೂರಕವಾಗಿರುವುದನ್ನು ಸಹಿಸದ ಬಿಜೆಪಿ ಸದಾ ಕನ್ನಡಿಗರನ್ನು ಅವಮಾನಿಸುವ ರಾಜಕಾರಣದಲ್ಲಿ ತೊಡಗಿರುವುದು ದುರಂತ. ಅರ್ಥಪೂರ್ಣ ಹೊಣೆಗಾರಿಕೆ ಪ್ರದರ್ಶಿಸಬೇಕಾದ ವಿರೋಧ ಪಕ್ಷವು ನೈತಿಕ ಹಾಗೂ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದಾಗ ರಾಜಕೀಯ ವ್ಯವಸ್ಥೆ ಮಾತ್ರವಲ್ಲ ಸಾಮಾಜಿಕ ಸ್ವಾಸ್ಥ್ಯವೂ ಕೆಡುತ್ತದೆ. ಇದಕ್ಕೆ ಬಿಜೆಪಿಯೇ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಈಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...