Homeಮುಖಪುಟಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

- Advertisement -
- Advertisement -

ಭಾರತೀಯ ತಿನಿಸುಗಳ ಅತಿ ದೊಡ್ಡ ರಫ್ತದಾರ ಬ್ರಾಂಡ್ ಆದ ಹಲ್ದಿರಾಮ್ಸ್ (Haldiram’s) ಕಂಪನಿ ಟ್ವಿಟರ್‌ನಲ್ಲಿ ಸಾಕಷ್ಟು ಚರ್ಚೆಗೊಳಗಾಗುತ್ತಿದೆ. ಉಪ್ಪಿನ ಕಾಯಿ ಪ್ಯಾಕೆಟ್ ಮೇಲೆ ಉರ್ದು ಭಾಷೆ ಏಕೆ ಬಳಸಿದ್ದಿರಿ ಎಂದು ಮೈಕ್ ಹಿಡಿದು ಪ್ರಶ್ನಿಸಿದ ಸುದರ್ಶನ್ ಟಿವಿ ಪತ್ರಕರ್ತೆಯನ್ನು ಹಲ್ದಿರಾಮ್ಸ್ ಉದ್ಯೋಗಿಯೊಬ್ಬರು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಿಗರು ಆ ಉದ್ಯೋಗಿಯ ಧೈರ್ಯವನ್ನು ಮೆಚ್ಚಿ ಪೋಸ್ಟ್ ಹಾಕುತ್ತಿದ್ದಾರೆ.

ಹಲ್ದಿರಾಮ್ಸ್ ಮಳಿಗೆಯಲ್ಲಿ ಬಲಪಂಥೀಯ ಬೆಂಬಲಿಗ ಮಾಧ್ಯಮವಾದ ಸುದರ್ಶನ್ ಟಿವಿಯ ನಿರೂಪಕಿ ತಿಂಡಿ ಪ್ಯಾಕೆಟ್‌ಗಳ ಮೇಲೆ ಉರ್ದು ಏಕೆ ಬರೆದಿದ್ದೀರಿ ಎಂದು ಕೂಗಾಡಿದ್ದಾರೆ. ಅದಕ್ಕೆ ಉದ್ಯೋಗಿಯೊಬ್ಬರು ಮೇಡಂ ನಿಮಗೆ ತಿಂಡಿ ಬೇಕಾದರೆ ಕೊಂಡುಕೊಳ್ಳಿ, ಇಲ್ಲವಾದರೆ ಇಲ್ಲಿಂದ ಹೊರಡಿ ಎಂದು ತಾಕೀತು ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಉದ್ಯೋಗಿಯು “ತಿಂಡಿ ಪ್ಯಾಕೆಟ್ ಮೇಲೆ ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಸಹ ಬರೆಯಲಾಗಿದೆ. ನೀವು ಏಕೆ ಒಂದು ಭಾಷೆಯನ್ನು ನೋಡಿ ಮಾತನಾಡುತ್ತೀರಿ? ನಿಮ್ಮ ಇಂತಹ ತಂತ್ರಗಳನ್ನು ನಾವು ಪುರಸ್ಕರಿಸುವುದಿಲ್ಲ, ಇಲ್ಲಿಂದ ಹೊರಡಿ” ಎಂದು ಖಡಕ್ ಆಗಿ ಹೇಳಿದ್ದಾರೆ.

ಉರ್ದುವಿನಲ್ಲಿ ಬರೆಯುವ ಮೂಲಕ ನವರಾತ್ರಿ ಸಮಯದಲ್ಲಿ ಉಪವಾಸವಿರುದ ಹಿಂದೂಗಳಿಗೆ ಅವಮಾನ ಮಾಡಲಾಗುತ್ತಿದೆ. ಇದರಿಂದ ನೀವು ಏನನ್ನಾದರೂ ಮುಚ್ಚಿಡಲು ಬಯಸುತ್ತಿರುವಿರೆ? ಇದರಲ್ಲಿ ದನದ ಮಾಂಸ ಬಳಸಿದ್ದೀರಾ ಎಂದು ಪತ್ರಕರ್ತೆ ಪದೇ ಪದೇ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಉದ್ಯೋಗಿ. “ನೀವು ಏನು ಬೇಕಾದರೂ ಭಾವಿಸಿ. ನಿಮ್ಮ ಮೈಕ್ ತೆಗೆದು ಏನಾದರೂ ವಿಚಾರಿಸುವುದಿದ್ದರೆ ನನ್ನ ಬಳಿ ಕೇಳಿ. ಅದು ಬಿಟ್ಟು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸಬೇಡಿ. ನಿಮ್ಮೊಂದಿಗೆ ನಾನು ಮಾತನಾಡುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋವನ್ನು ಬಹಳಷ್ಟು ಜನರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅಲ್ಲಿರುವುದು ಉರ್ದು ಭಾಷೆಯಲ್ಲ, ಅದು ಅರೇಬಿಕ್ ಆಗಿದೆ. ಹಲ್ದಿರಾಮ್ಸ್‌ನ ಹಲವಾರು ಉತ್ಪನ್ನಗಳು ಮುಸ್ಲಿಂ ಜನಸಂಖ್ಯೆ ಹೆಚ್ಚು ಇರುವ ಗಲ್ಫ್ ದೇಶಗಳಿಗೆ ರಫ್ತು ಆಗುವುದರಿಂದ ಆ ಭಾಷೆಯಲ್ಲಿಯೂ ಸಹ ಮುದ್ರಿಸಲಾಗಿದೆ. ಇದರಿಂದ ಸುದರ್ಶನ್ ಟಿವಿಗೇನು ಕಷ್ಟ? ನಮ್ಮ ಭಾರತದ ನೋಟಿನಲ್ಲಿ ಉರ್ದು ಬಳಸಲಾಗಿದೆ, ರೈಲ್ವೆ ನಿಲ್ದಾಣಗಳಲ್ಲಿ ಉರ್ದು ಇರುತ್ತದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸುದರ್ಶನ್ ಟಿವಿಯು ತನ್ನ ಇಸ್ಲಾಮೋಫೋಬಿಯಾ ಕಾರಣಕ್ಕೆ ಕೆಲ ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿತ್ತು. ಯುಪಿಎಸ್‌ಸಿ ಜಿಹಾದ್ ಎಂಬ ಹೆಸರಿನಲ್ಲಿ ಮುಸ್ಲಿಮರ ವಿರುದ್ಧ ಹಲವಾರು ವರದಿಗಳನ್ನು ಪ್ರಸಾರ ಮಾಡಿತ್ತು. ನ್ಯಾಯಾಧೀಶರು ಈ ಚಾನೆಲ್ ಉಗ್ರವಾದವನ್ನು ಪ್ರಸಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮುಸ್ಲಿಮರು ಸರ್ಕಾರಿ ಇಲಾಖೆಗಳಿಗೆ ನುಸುಳುತ್ತಿದ್ದಾರೆ ಎಂದು ಟಿವಿ ವರದಿ ಮಾಡಿದ್ದನ್ನು ಅಳಿಸುಹಾಕುವಂತೆ ಮತ್ತು ನಿಲ್ಲಿಸುವಂತೆ ಸುಪ್ರೀಂ ಸೂಚಿಸಿತ್ತು. ಒಂದು ಎಪಿಸೋಡ್ ನೋಡುವುದಲ್ಲಿಯೇ ನನಗ ಬಹಳ ಬೇಸರವಾಗಿತ್ತು. ಇನ್ನೊಂದು ಸಮುದಾಯದ ಮೇಲೆ ಆರೋಪಿಸುವುದನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಡಿ.ವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...