Homeಮುಖಪುಟಹಲ್ದ್ವಾನಿ 'ಶುದ್ಧೀಕರಣ' ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು ‘ಶುದ್ಧೀಕರಣ’ ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನೊಂದಿಗೆ ಗುರುತಿಸಿಕೊಂಡಿರುವ ವಿನೋದ್ ಕುಮಾರ್ ಆರ್ಯ ಮತ್ತು ಅಮಿತ್ ಕುಮಾರ್ ನೀಡಿದ ದೂರಿನ ಮೇರೆಗೆ ಹಲ್ದ್ವಾನಿ ಕೋತ್ವಾಲಿಯಲ್ಲಿ ಪ್ರಕರಣ ದಾಖಲಾಗಿದೆ.

ಶುದ್ದೀಕರಣ ಘಟನೆಯ ಕುರಿತು ಪ್ರತಿಕ್ರಿಯಿಸುವಾಗ ರಾಹುಲ್ ಗಾಂಧಿಯವರು ಪರಿಶಿಷ್ಟ ಜಾತಿ ಸಮುದಾಯವನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಮತ್ತು 299 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(q) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಆರೋಪಗಳು ಇನ್ನೂ ಸಾಬೀತಾಗಿಲ್ಲ ಮತ್ತು ಈ ವಿಷಯವು ಪ್ರಸ್ತುತ ತನಿಖೆಯ ಹಂತದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಲ್ ಆಫೀಸರ್ (ವೃತ್ತ ನಿರೀಕ್ಷಕ) ಅಮಿತ್ ಕುಮಾರ್ ಸೈನಿ ಅವರಿಗೆ ಒಪ್ಪಿಸಲಾಗಿದೆ.

ನೈನಿತಾಲ್‌ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್‌ಎಸ್‌ಪಿ) ಮಂಜುನಾಥ್ ಟಿ. ಸಿ. ಅವರು, “ರಾಹುಲ್ ಗಾಂಧಿಯವರ ಹೇಳಿಕೆಗಳು ಮತ್ತು ಪತ್ರಿಕಾಗೋಷ್ಠಿಯು ತಮಗೆ ಮತ್ತು ತಮ್ಮ ದಲಿತ ಸಮುದಾಯದ ಸದಸ್ಯರಿಗೆ ನೋವುಂಟು ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಹೇಳಿಕೆಗಳನ್ನು ನೀಡುವ ಮುನ್ನ ದಲಿತ ಸಮುದಾಯದ ಸದಸ್ಯರಿಂದ ಯಾವುದೇ ಮಾಹಿತಿ ಅಥವಾ ವಿವರಣೆಯನ್ನು ಪಡೆದಿರಲಿಲ್ಲ ಎಂದೂ ಅವರು ಆರೋಪಿಸಿದ್ದಾರೆ.

ಈ ವಿವಾದವು ಆಗಸ್ಟ್ 8 ರಂದು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ್‍ಯಾಲಿಗೆ ಸಂಬಂಧಿಸಿದ್ದಾಗಿದೆ. ಈ ರ್‍ಯಾಲಿಯನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ್ದರು.

ಈ ಕಾರ್ಯಕ್ರಮದ ನಂತರ, ಹಿಂದುತ್ವ ಸಂಘಟನೆಯೊಂದರ ಸದಸ್ಯರು ಆ ಸ್ಥಳದಲ್ಲಿ “ಶುದ್ಧೀಕರಣ ಯಜ್ಞ” ಅಥವಾ ಶುದ್ಧೀಕರಣದ ವಿಧಿವಿಧಾನವನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ವಿರುದ್ಧ ದೂರು ನೀಡಿರುವ ಅಮಿತ್ ಕುಮಾರ್ ಅವರು ಶುದ್ದೀಕರಣವು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಡಿಲ್ಲ ಎಂದು ಪ್ರತಿಪಾದಿಸಿದ್ದಾರೆ. ರ್‍ಯಾಲಿಯ ನಂತರ ಮೈದಾನದಲ್ಲಿ ಕಸವನ್ನು ಹಾಗೆಯೇ ಬಿಟ್ಟು ಹೋಗಿದ್ದರಿಂದ, ತಮ್ಮ ಸಂಸ್ಥೆಯು ಸ್ವಚ್ಛತಾ ಅಭಿಯಾನ ಮತ್ತು ಶುದ್ಧೀಕರಣ ಸಮಾರಂಭವನ್ನು ಹಮ್ಮಿಕೊಂಡಿತ್ತು ಎಂದು ಅವರು ತಿಳಿಸಿದ್ದಾರೆ.

“ರಾಹುಲ್ ಗಾಂಧಿ ಅವರು ಶುದ್ಧೀಕರಣ ಕಾರ್ಯಕ್ರಮದ ಬಗ್ಗೆ ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ,” ಎಂದು ಕುಮಾರ್ ಆರೋಪಿಸಿದ್ದಾರೆ. “ನಾವು ಸಮುದಾಯದ ಸದಸ್ಯರೊಂದಿಗೆ ಸೇರಿ ನಿಷ್ಪಕ್ಷಪಾತ ತನಿಖೆ ಮತ್ತು ಕಾನೂನು ಕ್ರಮಕ್ಕೆ ಆಗ್ರಹಿಸಿ ದೂರನ್ನು ಸಲ್ಲಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಬೆಳವಣಿಗೆಯು ರಾಜಕೀಯ ವಾಕ್ಸಮರವನ್ನು ಮತ್ತಷ್ಟು ತೀವ್ರಗೊಳಿಸಿದೆ. ದಲಿತ ಸಮುದಾಯಕ್ಕೆ ಸೇರಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುದ್ದೀಕರಣದ ಮೂಲಕ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಉತ್ತರಾಖಂಡದ ಕಾಂಗ್ರೆಸ್ ಮುಖ್ಯ ವಕ್ತಾರೆ ಗರಿಮಾ ಮಹರಾ ದಸೌನಿ ಅವರು, ಆಡಳಿತಾರೂಢ ಬಿಜೆಪಿ ಈ ವಿಷಯವನ್ನು ವಿರೋಧ ಪಕ್ಷದ ವಿರುದ್ಧವೇ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ. ಈ ಸಂಬಂಧ ಕ್ರಮ ಕೈಗೊಳ್ಳುವುದು ಬಿಟ್ಟು, ಕಾಂಗ್ರೆಸ್ ನಾಯಕರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ” ಎಂದು ದಸೌನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...