HomeಅಂಕಣಗಳುKarnataka against SIRSIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ ಸುಮಾರು ಒಂದು ಕೋಟಿಗೂ ಹೆಚ್ಚು ಮತದಾರರು ಬೆಂಗಳೂರಿನಲ್ಲೇ ಇದ್ದಾರೆ. ಆದರೆ, ಈ ಪರಿಷ್ಕರಣೆ ವೇಳೆ ರಾಜ್ಯಾದ್ಯಂತ ಪತ್ತೆಯಾಗಿರುವ ಒಟ್ಟು 84 ಲಕ್ಷ ಎಸ್​​ಡಿಡಿಒ (ASDDO – ಗೈರುಹಾಜರಿ, ಸ್ಥಳಾಂತರ, ಮೃತ, ನಕಲಿ ಮತ್ತು ಇತರೆ) ಮತದಾರರ ಪೈಕಿ ಸಿಂಹಪಾಲು ಅಂದರೆ ಬರೋಬ್ಬರಿ 36.75 ಲಕ್ಷ ಮತದಾರರು ಬೆಂಗಳೂರಿನಲ್ಲೇ ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇದು ರಾಜ್ಯದ ಒಟ್ಟು ಎಸ್​​ಡಿಡಿಒ ಮತದಾರರ ಪೈಕಿ ಶೇ 46.7 ರಷ್ಟಿದ್ದು, ಬೆಂಗಳೂರು ನಗರದಲ್ಲಿ 13.55 ಲಕ್ಷ, ಬೆಂಗಳೂರು ಉತ್ತರದಲ್ಲಿ 9 ಲಕ್ಷ, ದಕ್ಷಿಣದಲ್ಲಿ 9.35 ಲಕ್ಷ ಹಾಗೂ ಕೇಂದ್ರದಲ್ಲಿ 7.40 ಲಕ್ಷ ಮತದಾರರು ಈ ಪಟ್ಟಿಗೆ ಸೇರಿದ್ದಾರೆ. ಹೀಗೆ ಗುರುತಿಸಲ್ಪಟ್ಟ ಹೆಸರುಗಳು ಮುಂಬರುವ ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಡಲ್ಪಡುವ ಭೀತಿಯಲ್ಲಿದ್ದು, ಲಕ್ಷಾಂತರ ಕನ್ನಡಿಗರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳುವ ಅಪಾಯ ಎದುರಾಗಿದೆ.

ಇಂತಹ ತಾಂತ್ರಿಕ ಪ್ರಕ್ರಿಯೆಗಳ ನಡುವೆ ಸದ್ದಿಲ್ಲದೆ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ನಾಗರಿಕರ ಕಥೆಗಳು ಈಗ ಮನೆಮನೆಯಲ್ಲಿ ಕೇಳಿಬರುತ್ತಿವೆ. ಬೆಂಗಳೂರು ಕೇಂದ್ರ ವ್ಯಾಪ್ತಿಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ನಿವಾಸಿ, 48 ವರ್ಷದ ಸೈಯದ್ ಆಸಿಫ್ ಈ ಕುರಿತು ತಮ್ಮ ಅಳಲು ತೋಡಿಕೊಳ್ಳುತ್ತಾ,

“ನಾವು ಕಳೆದ 25 ವರ್ಷಗಳಿಂದ ಇದೇ ಗಲ್ಲಿಯಲ್ಲಿ, ಇದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ಕಳೆದ ಪ್ರತಿಯೊಂದು ಚುನಾವಣೆಯಲ್ಲೂ ಮತ ಚಲಾಯಿಸಿದ್ದೇವೆ. ಆದರೆ ದಿಢೀರನೆ ಅಧಿಕಾರಿಗಳು ಬಂದು ನಮ್ಮ ಹೆಸರನ್ನು ‘ಸ್ಥಳಾಂತರಗೊಂಡಿದ್ದಾರೆ’ (Shifted)ಎಂದು ಪಟ್ಟಿಯಲ್ಲಿ ಬರೆದುಕೊಂಡು ಹೋಗಿದ್ದಾರೆ. ನಾವು ಎಲ್ಲಿಗೂ ಹೋಗಿಲ್ಲ, ಇಲ್ಲೇ ಇದ್ದೇವೆ ಎಂದು ಬಿಎಲ್‌ಒಗೆ ದಾಖಲೆ ತೋರಿಸಿದರೂ ತಾಂತ್ರಿಕ ಕಾರಣ ಹೇಳಿ ಅಲೆದಾಡಿಸುತ್ತಿದ್ದಾರೆ. 2002ರ ಹಳೆಯ ದಾಖಲೆ ಮ್ಯಾಪ್ ಆಗಿಲ್ಲ ಎಂಬ ನೆಪವೊಡ್ಡಿ ನಮ್ಮಂತ  ಬಡವರನ್ನು  ಹೊರಟಿರುವುದು ಯಾವ ನ್ಯಾಯ?” ಎಂದು ಕಳವಳ ವ್ಯಕ್ತಪಡಿಸುತ್ತಾರೆ. ಆಸಿಫ್ ಅವರಂತೆಯೇ ಲಕ್ಷಾಂತರ ಮತದಾರರು ಈಗ ತಮಗರಿವಿಲ್ಲದಂತೆಯೇ ‘ಅದೃಶ್ಯ ಮತದಾರರಾಗಿ’ ಬದಲಾಗುವ ಅಪಾಯದಲ್ಲಿದ್ದಾರೆ.

ಮಹಾನಗರ ಬೆಂಗಳೂರಿನಲ್ಲಿ ಈ ಪ್ರಮಾಣದಲ್ಲಿ ಎಸ್​​ಡಿಡಿಒ ಪ್ರಕರಣಗಳು ಹೆಚ್ಚಾಗಲು ಹಾಗೂ ಪ್ರಕ್ರಿಯೆ ನಿಧಾನಗೊಳ್ಳಲು ಆಡಳಿತಾತ್ಮಕ ಗೊಂದಲಗಳೇ ಪ್ರಮುಖ ಕಾರಣವಾಗಿವೆ. ಮುಖ್ಯವಾಗಿ 2002ರ ಹಳೆಯ ಮತದಾರರ ದಾಖಲೆಗಳನ್ನು ಪತ್ತೆಹಚ್ಚುವಲ್ಲಿ ಎದುರಾಗುತ್ತಿರುವ ಸಮಸ್ಯೆ ಹಾಗೂ 2008ರ ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆಗಳ ಭೌಗೋಳಿಕ ವ್ಯಾಪ್ತಿ ಬದಲಾಗಿರುವುದು ಹಳೆಯ ದಾಖಲೆಗಳನ್ನು ಮ್ಯಾಪ್ ಮಾಡುವುದನ್ನು ಕಷ್ಟಕರವಾಗಿಸಿದೆ. ಜೊತೆಗೆ, ಮಹದೇವಪುರ ಸೇರಿದಂತೆ ಹಲವು ಕ್ಷೇತ್ರಗಳ ಕೆಲವು ಬೂತ್‌ಗಳಲ್ಲಿನ 2002ರ ಮತಪಟ್ಟಿಯ ವಿವರವನ್ನು‌ ಚುನಾವಣಾ ಆಯೋಗವು ವೆಬ್‌ಸೈಟ್‌ ನಲ್ಲಿಯೂ, ಬಿಎಲ್‌ಒಗಳಿಗೂ ಒದಗಿಸಿಲ್ಲ ಎಂದು ಹೇಳಲಾಗಿದೆ. ಆಯೋಗದ ಎಡವಟ್ಟಿನಿಂದ ಈಗ ಭಾರೀ ಪ್ರಮಾಣದ ಮತದಾರರು ತಮ್ಮ ಹೆಸರುಗಳನ್ನು ಕಳೆದುಕೊಳ್ಳುವ ಅಪಾಯವಿದೆ.

ಇದರ ಜೊತೆಗೆ ಬಿಬಿಎಂಪಿ/ಜಿಬಿಎ ವ್ಯಾಪ್ತಿಯಲ್ಲಿ ಸಲ್ಲಿಕೆಯಾಗಿರುವ ನಮೂನೆಗಳ ಡಿಜಿಟಲೀಕರಣವೂ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇಂದಿಗೂ ಸುಮಾರು 16.52 ಲಕ್ಷ ಫಾರಂಗಳು ಡಿಜಿಟಲೀಕರಣಗೊಳ್ಳದೆ ಬಾಕಿ ಉಳಿದಿವೆ. ಪ್ರಸ್ತುತ ಬೆಂಗಳೂರು ದಕ್ಷಿಣದಲ್ಲಿ ಶೇ 42.6, ಕೇಂದ್ರದಲ್ಲಿ ಶೇ 44.6, ಉತ್ತರದಲ್ಲಿ ಶೇ 46.2 ಹಾಗೂ ನಗರ ಭಾಗದಲ್ಲಿ ಶೇ 48.8ರಷ್ಟು ಮಾತ್ರ ಡಿಜಿಟಲೀಕರಣ ಪೂರ್ಣಗೊಂಡಿರುವುದು ಚುನಾವಣಾ ಆಯೋಗದ ಮಂದಗತಿಯ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತದೆ. ಇದಲ್ಲದೆ, ತಾಂತ್ರಿಕ‌ ವ್ಯತ್ಯಾಸ ಹಾಗೂ ಮ್ಯಾಪಿಂಗ್ ದೋಷಗಳ ಕಾರಣದಿಂದಾಗಿ ರಾಜ್ಯಾದ್ಯಂತ ಒಟ್ಟು 2 ಕೋಟಿ ಮತದಾರರ ಹೆಸರುಗಳನ್ನು ಆಯೋಗವು ಅಳಿಸಿ ಹಾಕುವ ಅಪಾಯವಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಗೊಂದಲಗಳ ನಡುವೆಯೂ ನಿಜವಾದ ಹಾಗೂ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡದಂತೆ ತಡೆಯಲು ಆಯೋಗಕ್ಕೆ ಆಗಸ್ಟ್ 8ರವರೆಗೆ ಕಾಲಾವಕಾಶವಿದೆ. ಗೈರುಹಾಜರಾಗಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ ಎಂದು ತಪ್ಪಾಗಿ ಗುರುತಿಸಲ್ಪಟ್ಟಿರುವ ನಿಜವಾದ ಮತದಾರರು ಕೂಡಲೇ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳನ್ನು (BLO) ಸಂಪರ್ಕಿಸಿ ಅಗತ್ಯ ಫಾರಂ ಸಲ್ಲಿಸಬೇಕಿದೆ.

2002ರ ಮಾಹಿತಿಯೊಂದಿಗೆ ಮ್ಯಾಪ್ ಆಗದಿದ್ದರೂ ಫಾರಂ ಸಲ್ಲಿಸಲು ಅವಕಾಶವಿದ್ದು, ಈಗಾಗಲೇ ಮ್ಯಾಪ್ ಆಗದ 29 ಲಕ್ಷಕ್ಕೂ ಹೆಚ್ಚು ಮತದಾರರು ಅರ್ಜಿ ಸಲ್ಲಿಸಿ ಕರಡು ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (BLA) ಮತ್ತು ನಾಗರಿಕ ಸಮಾಜದ ಸಂಘಟನೆಗಳು ಆಯೋಗ ಹಂಚಿಕೊಂಡಿರುವ ಎಸ್​​ಡಿಡಿಒ ಪಟ್ಟಿಯನ್ನು ಪರಿಶೀಲಿಸಿ, ತಳಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಯಾವುದೇ ಅರ್ಹ ನಾಗರಿಕನ ಮತದಾನದ ಹಕ್ಕು ಕಸಿದುಕೊಳ್ಳದಂತೆ ನೋಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...