Homeಕರ್ನಾಟಕದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದ ಯತ್ನಾಳ್: ಕ್ರಮಕ್ಕೆ ಆಗ್ರಹಿಸಿದ ತಬು ರಾವ್

ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದ ಯತ್ನಾಳ್: ಕ್ರಮಕ್ಕೆ ಆಗ್ರಹಿಸಿದ ತಬು ರಾವ್

- Advertisement -
- Advertisement -

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ ಕಿಡಿಕಾರಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ಎನ್‌ಐಎ ತಂಡ ವಿಚಾರಣೆಗೆ ಒಳಪಡಿಸಿದೆ ಎಂದು ನಿನ್ನೆ(ಏ.5) ವರದಿಯಾಗಿತ್ತು.

ಈ ಬೆನ್ನಲ್ಲೇ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದ ಸಚಿವ ದಿನೇಶ್ ಗುಂಡೂರಾವ್, “ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು” ಎಂದಿದ್ದರು.

ಈ ಕುರಿತು ಇಂದು ಮಾಧ್ಯವರ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್ ” ಹೆಚ್ಚು ಕಡಿಮೆ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶದ ವಿರುದ್ದ ಹೇಳಿಕೆ ಕೊಡುವುದು ಗುಂಡೂರಾವ್‌ಗೆ ಚಟ ಆಗಿಬಿಟ್ಟಿದೆ” ಎಂದಿದ್ದಾರೆ.

ಯತ್ನಾಳ್ ಹೇಳಿಕೆ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ” ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಯತ್ನಾಳ್ ಅವರ ಹೇಳಿಕೆಯು ಅವಹೇಳನಕಾರಿ ಮತ್ತು ಮಾನಹಾನಿಕರವಾಗಿದೆ. ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು. ಹಾಗಂತ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಭಾರತೀಯ ಚುನಾವಣಾ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಲಿದೆಯಾ? ಪ್ರಧಾನಿ ಮೋದಿ, ಜೆಪಿ ನಡ್ಡಾ ಅವರು ಈ ವಾಡಿಕೆಯ ತಪ್ಪಿತಸ್ಥನ ವಿರುದ್ದ ಕ್ರಮ ಕೈಗೊಳ್ಳುತ್ತಾರಾ? ಎಂದು ಪ್ರಶ್ನಿಸಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ತಬು ರಾವ್ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ”ಇದು ತುಂಬಾ ದೂರು ಹೋಗಿದೆ. ಕೆಟ್ಟ ರಾಜಕೀಯಕ್ಕಾಗಿ ಕುಟುಂಬದ ಸದಸ್ಯರನ್ನು ಎಳೆದು ತರುವುದು ಕಡಿಮೆ. ಆದರೆ, ಧರ್ಮದ ಆಧಾರದ ಮೇಲೆ ಮಹಿಳೆಯ ದೇಶ ಪ್ರೇಮವನ್ನು ಪ್ರಶ್ನಿಸುವುದು..ಯತ್ನಾಳ್ ಈಗಾಗಲೇ ಕೊಚ್ಚೆಯಲ್ಲಿ ಬಿದ್ದಾಗಿದೆ. ಅವರಿಗೆ ಇನ್ನೂ ಅವಮಾನಕರವಾದದ್ದು ಏನೂ ಇಲ್ಲ. ನಾವು ನಿಮ್ಮ ಜೊತೆಗಿದ್ದೇವೆ ತಬು ಮೇಡಂ, ಅವರನ್ನು ನ್ಯಾಯಾಲಯಕ್ಕೆ ಎಳೆದು ತನ್ನಿ” ಎಂದಿದ್ದಾರೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಿದ ಎನ್‌ಐಎ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...