Homeಅಂತರಾಷ್ಟ್ರೀಯಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ 'ವಿದಾಯ ಚಿತ್ರ' ಬಿಡುಗಡೆ

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

- Advertisement -
- Advertisement -

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ.

1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ.

ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು ಬಾಂಬ್ ದಾಳಿಯಿಂದ ಪತನವಾದ ಬಳಿಕ, ಅರಾದ್ ನನ್ನು ಅಮಲ್ ಮೂವ್‌ಮೆಂಟ್ ಕೈಗೆ ಸಿಕ್ಕು ಹಿಜ್ಬುಲ್ಲಾ ಗೆ ಹಸ್ತಾಂತರ ಮಾಡಲಾಗಿತ್ತು. ಅರಾದ್ ಜೀವಿತದ ಬಗ್ಗೆ ನಿರ್ಣಾಯಕ ಪುರಾವೆ ಸಿಕ್ಕಿಲ್ಲದಿದ್ದರೂ, ಆತ ಮೃತಪಟ್ಟಿದ್ದಾರೆ ಎಂದು ನಂಬಲಾಗಿದೆ. ಹಮಾಸ್ ಇದೀಗ ಅದೇ ನಾಮಧೇಯವನ್ನು ಬಳಸಿ ಇಸ್ರೇಲಿ ಒತ್ತೆಯಾಳುಗಳ ಭವಿಷ್ಯದ ಬಗ್ಗೆ ಗಂಭೀರ ಸಂದೇಶ ಕಳುಹಿಸಿದೆ.

“ನೆತನ್ಯಾಹು ಅವರ ನಿರಾಕರಣೆ ಮತ್ತು ಝಮೀರ್ ಅವರ ಶರಣಾಗತಿಯಿಂದಾಗಿ, ಗಾಝಾ ನಗರದಲ್ಲಿ ಸೈನಿಕ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ ವಿದಾಯ ಚಿತ್ರ” ಎಂದು ಫೋಟೋದೊಂದಿಗೆ ಹಮಾಸ್ ಪ್ರಕಟಣೆ ನೀಡಿದೆ.

ಈ ಮೂಲಕ ಹಮಾಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಲ್ಲಾ ಒಪ್ಪಂದಗಳನ್ನು ತಿರಸ್ಕರಿಸಿರುವುದನ್ನು ಹಾಗೂ ಸೇನಾ ಮುಖ್ಯಸ್ಥ ಇಯಾಲ್ ಝಮೀರ್ ನೇತೃತ್ವದಲ್ಲಿ ದಾಳಿಗಳು ತೀವ್ರಗೊಂಡಿರುವುದನ್ನು ಉಲ್ಲೇಖಿಸಿದೆ.

ಇಸ್ರೇಲ್ ಅಧಿಕಾರಿಗಳ ಪ್ರಕಾರ ಗಾಝಾದಲ್ಲಿ ಒತ್ತೆಯಾಳಾಗಿರುವವರಲ್ಲಿ ಸುಮಾರು 20 ಮಂದಿ ಜೀವಂತವಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಖ್ಯೆ 20ಕ್ಕಿಂತ ಕಡಿಮೆಯಾಗಿರಬಹುದು ಎಂದು ಹೇಳಿದ್ದಾರೆ.

ನೆತನ್ಯಾಹು ಮತ್ತು ಟ್ರಂಪ್ ಇಬ್ಬರೂ, ಎಲ್ಲಾ ಜೀವಂತ ಮತ್ತು ಮೃತಪಟ್ಟ ಒತ್ತೆಯಾಳುಗಳನ್ನು ಮರಳಿ ತರಲಾಗುವುದು ಹಾಗೂ ಹಮಾಸ್ ಅನ್ನು ಸಂಪೂರ್ಣವಾಗಿ ನಾಶಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ವಾಯು ಹಾಗೂ ಪದಾತಿ ದಳದ ದಾಳಿಗಳು ಬಂಧಿತರ ಜೀವಕ್ಕೆ ನೇರ ಅಪಾಯವಾಗುತ್ತದೆ ಎಂದು ಹಮಾಸ್ ಪುನಃ ಎಚ್ಚರಿಸಿದೆ. ಅವರ ಪ್ರಕಾರ, ಕೆಲ ಒತ್ತೆಯಾಳುಗಳು ಈಗಾಗಲೇ ಇಸ್ರೇಲಿನ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ‘ಒತ್ತೆಯಾಳುಗಳು ಗಾಝಾ ನಗರದ ವಿವಿಧ ಪ್ರದೇಶಗಳಲ್ಲಿದ್ದಾರೆ’ ಎಂದು ಹಮಾಸ್ ತಿಳಿಸಿದೆ.

ಹಮಾಸ್ ಪ್ರಕಟಣೆಯ ನಂತರ ಇಸ್ರೇಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಲಕ್ಷಾಂತರ ಜನರು ಮತ್ತೆ ಟೆಲ್ ಅವೀವ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಯುದ್ಧವನ್ನು ಕೊನೆಗೊಳಿಸಿ, ಒತ್ತೆಯಾಳುಗಳನ್ನು ತಕ್ಷಣ ಮತ್ತು ಸುರಕ್ಷಿತವಾಗಿ ಹಿಂತಿರುಗಿಸುವಂತೆ ಒತ್ತಾಯಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಹಮಾಸ್ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಆ ದೃಶ್ಯಗಳಲ್ಲಿ ದುರ್ಬಲ ಸ್ಥಿತಿಯಲ್ಲಿದ್ದ ಬಂಧಿತರಲ್ಲಿ ಒಬ್ಬನು ತನ್ನದೇ ಸಮಾಧಿಯನ್ನು ತೋಡುತ್ತಿರುವುದಾಗಿ ತೋರಿಸಲಾಗಿತ್ತು. ಈ ದೃಶ್ಯಗಳು ಬಂಧಿತರ ಕುಟುಂಬಗಳಲ್ಲಿಯೂ, ಇಸ್ರೇಲಿ ಸರ್ಕಾರದಲ್ಲಿಯೂ ಹಾಗೂ ಅಮೆರಿಕ ಸೇರಿದಂತೆ ಇಸ್ರೇಲ್ ಮಿತ್ರ ರಾಷ್ಟ್ರಗಳಲ್ಲಿಯೂ ಆಕ್ರೋಶ ಹುಟ್ಟಿಸಿತ್ತು.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದ ನಂತರದಿಂದ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕನಿಷ್ಠ 65,208 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದಾರೆ ಮತ್ತು 1,66,271 ಮಂದಿ ಗಾಯಗೊಂಡಿದ್ದಾರೆ. ಮಾರ್ಚ್ 18ರಂದು ಇಸ್ರೇಲ್ ಹಮಾಸ್ ಜೊತೆಗಿನ ಕದನ ವಿರಾಮವನ್ನು ಮುರಿದ ನಂತರದಿಂದಲೇ 12,653 ಜನರು ಮೃತಪಟ್ಟು, 54,230 ಮಂದಿ ಗಾಯಗೊಂಡಿದ್ದಾರೆ.

‘ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ..’; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...