Homeಮುಖಪುಟಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

ಹಿಜ್ಬುಲ್ಲಾ ಬೆನ್ನಲ್ಲೇ ನಾವೂ ಕದನ ವಿರಾಮಕ್ಕೆ ಸಿದ್ದ ಎಂದ ಹಮಾಸ್

- Advertisement -
- Advertisement -

ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ನಾವೂ ಕದನ ವಿರಾಮಕ್ಕೆ ಸಿದ್ದ ಎಂದು ಗಾಝಾದ ಹಮಾಸ್ ಹೇಳಿರುವುದಾಗಿ ವರದಿಯಾಗಿದೆ.

“ನಾವು ಕದನ ವಿರಾಮಕ್ಕೆ ಮತ್ತು ಒತ್ತೆಯಾಳುಗಳ ಬಿಡುಗಡೆಗೆ ಸಿದ್ದ” ಎಂದು ಮಧ್ಯವರ್ತಿಗಳಾದ ಈಜಿಪ್ಟ್, ಕತಾರ್ ಮತ್ತು ತುರ್ಕಿಗೆ ಹಮಾಸ್ ಹೇಳಿರುವುದಾಗಿ ಅದರ ಮುಖ್ಯಸ್ಥರನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾದ ಮೇಲಿನ ಆಕ್ರಮಣವನ್ನು ಇಸ್ರೇಲ್ ನಿಲ್ಲಿಸಬೇಕು ಎಂಬುವುದು ಹಮಾಸ್‌ನ ಆಗ್ರವಾದರೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂಬುವುದು ಇಸ್ರೇಲ್‌ನ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಒಮ್ಮತಕ್ಕೆ ಬಂದು, ಕಳೆದ ಒಂದು ವರ್ಷದ ಅವಧಿಯಲ್ಲಿ ಒಮ್ಮೆ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಮತ್ತೆ ಆಕ್ರಮಣ ಮುಂದುವರೆದಿದೆ.

ಕಳೆದ 13 ತಿಂಗಳ ಇಸ್ರೇಲ್‌ ಆಕ್ರಮಣದಲ್ಲಿ ಬಲಿಯಾದ ಗಾಝಾ ನಾಗರಿಕರ ಸಂಖ್ಯೆ ನಿನ್ನೆಗೆ (ನ.26) 44,249ಕ್ಕೆ ತಲುಪಿದೆ. 104,746 ಜನರು ಗಾಯಗೊಂಡಿದ್ದಾರೆ ಎಂದು ಹಮಾಸ್ ಆರೋಗ್ಯ ಇಲಾಖೆ ಹೇಳಿದೆ.

ಲೆಬನಾನ್‌ನಲ್ಲಿ ಸಂಭ್ರಮ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆ ಲೆಬನಾನ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗಳನ್ನು ತೊರೆದು ದೂರ ಹೋಗಿದ್ದ ಜನರು ವಾಹನಗಳಲ್ಲಿ ದಕ್ಷಿಣ ಲೆಬನಾನ್‌ನತ್ತ ಆಗಮಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೈರೂತ್‌ ನಗರದಲ್ಲಿ ಜನರು ಗುಂಪುಗೂಡಿ, ಹಾಡು ಹಾಡಿ ಸಂಭ್ರಮಾಚರಣೆ ಮಾಡಿರುವ ವಿಡಿಯೋಗಳು ಹರಿದಾಡುತ್ತಿವೆ.

ಆದರೆ, ಇಸ್ರೇಲ್ ಸೇನೆ ನಾವಿರುವ ಪ್ರದೇಶಗಳಿಗೆ ಈಗ ಬರಬೇಡಿ ಎಂಬ ಎಚ್ಚರಿಕೆಯನ್ನು ನೀಡಿದೆ. ಮತ್ತೊಂದೆಡೆ ಇಸ್ರೇಲ್ ಸೇನೆ ಹೋದ ಬಳಿಕ, ನಾವು ತಂಡಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಕದನ ವಿರಾಮಕ್ಕೆ ಸ್ವಾಗತ

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕದನ ವಿರಾಮವನ್ನು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ಇರಾನ್, ಈಜಿಪ್ಟ್‌, ಚೀನಾ, ಬ್ರಿಟನ್ ದೇಶಗಳು ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಕದನ ವಿರಾಮ | ಇಸ್ರೇಲ್-ಹಿಜ್ಬುಲ್ಲಾ ಪ್ರತಿಕ್ರಿಯೆ

ಕದನ ವಿರಾಮದ ಕುರಿತು ಇಸ್ರೇಲ್ ಮತ್ತು ಹಿಜ್ಬುಲ್ಲಾ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.
ಹಿಜ್ಬುಲ್ಲಾ ತಾತ್ವಿಕವಾಗಿ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿದ್ದರೂ, ಅದು ಇನ್ನೂ ಅಂತಿಮ ಒಪ್ಪಂದವನ್ನು ಪರಿಶೀಲಿಸಬೇಕಾಗಿದೆ. ಲೆಬನಾನ್‌ನ ಸಾರ್ವಭೌಮತ್ವ ಉಲ್ಲಂಘಿಸುವ ಯಾವುದೇ ಅಂಶ ಒಪ್ಪಂದದಲ್ಲಿ ಇದ್ದರೂ, ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹಿಜ್ಬುಲ್ಲಾದ ಹಿರಿಯ ಅಧಿಕಾರಿ ಮಹಮೂದ್ ಕಮಾತಿ ಹೇಳಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕದನ ವಿರಾಮ ಘೋಷಣೆಯಾದರೂ, ಹಿಜ್ಬುಲ್ಲಾ ಉತ್ತರ ಇಸ್ರೇಲ್‌ ಮೇಲೆ ರಾಕೆಟ್ ದಾಳಿ ಮುಂದುವರೆಸಿದೆ. ಉತ್ತರ ಇಸ್ರೇಲ್‌ನಲ್ಲಿ ವಾಯುದಾಳಿಯ ಸೈರನ್ ಮೊಳಗುತ್ತಿದೆ. ಕದನ ವಿರಾಮದ ಸುದ್ದಿಯ ನಡುವೆ ಉದ್ವಿಗ್ನತೆ ಉಲ್ಬಣಗೊಂಡಿದೆ.

ಮತ್ತೊಂದಡೆ, ಹಿಜ್ಬುಲ್ಲಾ ಕದನ ವಿರಾಮವನ್ನು ಉಲ್ಲಂಘಿಸಿದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭಿಸಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಹಿಜ್ಬುಲ್ಲಾ ಶಸ್ತ್ರಾಸ್ತ್ರ, ಮದ್ದುಗುಡ್ಡು, ರಾಕೆಟ್ ಬಳಸಿದರೆ ತಕ್ಕ ಉತ್ತರ ನೀಡುತ್ತೇವೆ ಎಂದಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ, ಕದನ ವಿರಾಮದ ನಡುವೆಯೂ ಇಸ್ರೇಲ್ ದಾಳಿ ಮುಂದುವರೆಸಿದೆ. ದಕ್ಷಿಣ ಬೈರುತ್‌ನ ದಹಿಯೆಹ್ ಪ್ರದೇಶ 20 ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದೆ.

ಇದನ್ನೂ ಓದಿ : ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...