HomeUncategorizedಇಸ್ರೇಲ್-ಹಮಾಸ್‌ ಕದನ ವಿರಾಮ: 13 ಒತ್ತೆಯಾಳುಗಳ ಬಿಡುಗಡೆ

ಇಸ್ರೇಲ್-ಹಮಾಸ್‌ ಕದನ ವಿರಾಮ: 13 ಒತ್ತೆಯಾಳುಗಳ ಬಿಡುಗಡೆ

- Advertisement -
- Advertisement -

ಇಸ್ರೇಲ್‌-ಹಮಾಸ್‌ ನಡುವಿನ ನಾಲ್ಕು ದಿನಗಳ ಯುದ್ಧ ವಿರಾಮ ಇಂದಿನಿಂದ ಪ್ರಾರಂಭಗೊಂಡಿದೆ. ಒಪ್ಪಂದಂತೆ ಇಂದು ಮೊದಲ ಬ್ಯಾಚ್‌ನಲ್ಲಿ 13 ಒತ್ತೆಯಾಳುಗಳು ಮತ್ತು ಪ್ಯಾಲೆಸ್ತೀನ್ ಯುದ್ಧ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಧ್ಯವರ್ತಿ ಕತಾರ್ ಹೇಳಿದೆ.

ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭಗೊಂಡು 49 ದಿನಗಳ ಬಳಿಕ ಮೊದಲ ಬಾರಿಗೆ ಕದನ ವಿರಾಮ ಘೋಷಿಸಲಾಗಿದೆ. ಯುಎಸ್‌ ಮತ್ತು ಕತಾರ್ ದೇಶಗಳು ಇಸ್ರೇಲ್‌-ಹಮಾಸ್‌ ನಡುವೆ ಮಧ್ಯವರ್ತಿಗಳಾಗಿ ಮಾತುಕತೆ ನಡೆಸಿ ಕದನ ವಿರಾಮ ಒಪ್ಪಂದ ಮಾಡಿಸಿದೆ.

ಕತಾರ್‌ನ ವಿದೇಶಾಂಗ ಸಚಿವಾಲಯದ ಪ್ರಕಾರ, ಕದನ ವಿರಾಮವು ಇಂದು ಬೆಳಿಗ್ಗೆ 10:30ಕ್ಕೆ ಪ್ರಾರಂಭವಾಗಲಿದೆ. ಆದರೆ, ಒತ್ತೆಯಾಳುಗಳ ಮೊದಲ ಗುಂಪನ್ನು ಹಮಾಸ್ ಸಂಜೆ 7:30ರ ಸುಮಾರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಮೊದಲ ಬ್ಯಾಚ್‌ನಲ್ಲಿ ಹಮಾಸ್‌ 13 ಮಹಿಳೆಯರು ಮತ್ತು ಅವರ ಮಕ್ಕಳನ್ನು ಬಿಡುಗಡೆ ಮಾಡಲಿದೆ.  ಒಪ್ಪಂದದ ಪ್ರಕಾರ ಯುದ್ಧ ವಿರಾಮದ ನಾಲ್ಕು ದಿನಗಳಲ್ಲಿ ಒಟ್ಟು 50 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ 150 ಪ್ಯಾಲೇಸ್ತೀನಿಯನ್ ಯುದ್ಧ ಕೈದಿಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಬಿಡುಗಡೆಯಾಗಲಿರುವ ಒತ್ತೆಯಾಳುಗಳ ಪಟ್ಟಿ ಸ್ವೀಕರಿಸಿದ ಬಳಿಕ ಅವರ ಕುಟುಂಬಸ್ಥರನ್ನು ಸಂಪರ್ಕಿಸಲಾಗುವುದು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ.

ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನ್ ಕೈದಿಗಳನ್ನೂ ಶುಕ್ರವಾರ ಬಿಡುಗಡೆ ಮಾಡಲಾಗುವುದು ಎಂದು ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೇದ್ ಅಲ್ ಅನ್ಸಾರಿ ಹೇಳಿದ್ದಾರೆ. ಆದರೆ, ಎಷ್ಟು ಮಂದಿಯನ್ನು ಎಂದು ಅವರು ಖಚಿತವಾಗಿ ಮಾಹಿತಿ ನೀಡಿಲ್ಲ.

ಇದನ್ನೂ ಓದಿ : ಉ. ಪ್ರದೇಶದ ಗೋಹತ್ಯೆ ತಡೆ ಕಾಯ್ದೆ ಗೋಮಾಂಸ ಸಾಗಾಟ ನಿಷೇಧಿಸಿಲ್ಲ: ಅಲಹಾಬಾದ್ ಹೈಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...