Homeಮುಖಪುಟಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

ಹಮ್ದರ್ದ್ ರೂಹ್ ಅಫ್ಜಾ ಗುರಿಯಾಗಿಸಿ ಹೇಳಿಕೆ ನೀಡಲ್ಲ: ದೆಹಲಿ ಹೈಕೋರ್ಟ್‌ಗೆ ರಾಮದೇವ್ ಭರವಸೆ

- Advertisement -
- Advertisement -

ಆಹಾರ ಕಂಪನಿ ಹಮ್ದರ್ದ್‌ನ ಪಾನೀಯ ‘ರೂಹ್ ಅಫ್ಜಾ’ವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವುದಿಲ್ಲ ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಪ್ರಕಟಿಸುವುದಿಲ್ಲ ಎಂದು ಪತಂಜಲಿ ಆಯುರ್ವೇದ ಸಹ-ಸಂಸ್ಥಾಪಕ ರಾಮದೇವ್ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ. ಹಮ್ದರ್ದ್ ರೂಹ್ ಅಫ್ಜಾ

ರಾಮದೇವ್ ತಮ್ಮ ಭರವಸೆಯನ್ನು ದಾಖಲಿಸಲು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಗುರುವಾರ, ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಪೀಠಕ್ಕೆ ಹಮ್ದರ್ದ್ ಬಗ್ಗೆ ಕೋಮುವಾದಿ ಹೇಳಿಕೆ ನೀಡಿ ಮತ್ತೊಂದು ವೀಡಿಯೊವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಲಾಗಿತ್ತು.

ಹಮ್ದರ್ದ್‌ ಕಂಪನಿಯನ್ನು ಗುರಿಯಾಗಿಸಿಕೊಂಡು ಹೊಸ ವೀಡಿಯೊವನ್ನು ಪ್ರಕಟಿಸಿದ್ದಕ್ಕಾಗಿ ನ್ಯಾಯಾಲಯವು ರಾಮದೇವ್‌ಗೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ದಿನದ ಹಿಂದೆಯಷ್ಟೆ ಎಚ್ಚರಿಕೆ ನೀಡಿತ್ತು. ಅದಾಗಿ ಒಂದು ದಿನದ ನಂತರ ಕೋರ್ಟ್‌ನಲ್ಲಿ ರಾಮ್‌ದೇವ್ ಮೇಲಿನ ಹೇಳಿಕೆ ನೀಡಿದ್ದಾರೆ.

ಹಮ್ದರ್ದ್‌ನ ಪಾನೀಯ ‘ರೂಹ್ ಅಫ್ಜಾ’ವನ್ನು “ಶರಬತ್ ಜಿಹಾದ್” ಅನ್ನು ಸಂಘಟಿಸಲು ಬಳಸಲಾಗುತ್ತಿದೆ ಎಂದು ರಾಮದೇವ್ ಹೇಳಿಕೊಂಡ ಜಾಹೀರಾತುಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ಏಪ್ರಿಲ್ 22 ರಂದು ಆದೇಶಿಸಿತ್ತು.

ಗುರುವಾರದಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಪೀಠಕ್ಕೆ ಹಮ್ದರ್ದ್ ಬಗ್ಗೆ ಕೋಮುವಾದಿ ಹೇಳಿಕೆ ನೀಡಿ ಮತ್ತೊಂದು ವೀಡಿಯೊವನ್ನು ಪ್ರಕಟಿಸಿದ್ದಾರೆ ಎಂದು ತಿಳಿಸಲಾಯಿತು. ಈ ವೇಳೆ ನ್ಯಾಯಾಲಯವು ರಾಮದೇವ್‌ಗೆ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿ ಅವರನ್ನು ಸಮನ್ಸ್ ಮಾಡುವುದಾಗಿ ಪೀಠ ಹೇಳಿದೆ.

“ರಾಮ್‌ ದೇವ್‌ ತನ್ನದೇ ಆದ ಜಗತ್ತಿನಲ್ಲಿ ಇದ್ದು, ಅವರು ಯಾರ ಮಾತನ್ನೂ ಕೇಳುತ್ತಿಲ್ಲ” ಎಂದು ನ್ಯಾಯಮೂರ್ತಿ ಬನ್ಸಾಲ್ ಕಿಡಿಕಾರಿದ್ದಾರೆ ಎಂದು ಲೈವ್ ಲಾ ಉಲ್ಲೇಖಿಸಿದೆ. ಹೊಸ ವೀಡಿಯೊದ ಆಕ್ಷೇಪಾರ್ಹ ಭಾಗಗಳನ್ನು 24 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕಲು ರಾಮದೇವ್ ಅವರ ವಕೀಲರು ಒಪ್ಪಿಕೊಂಡಿದ್ದರು.

ಏಪ್ರಿಲ್ 22 ರಂದು, ಹಮ್ದರ್ದ್ ಬಗ್ಗೆ ರಾಮದೇವ್ ಅವರ ಹೇಳಿಕೆ “ಸಮರ್ಥನೀಯವಲ್ಲ” ಎಂದು ಹೈಕೋರ್ಟ್ ಹೇಳಿತ್ತು.

ಏಪ್ರಿಲ್ 3 ರಂದು ಪತಂಜಲಿ ಉತ್ಪನ್ನದ ಜಾಹೀರಾತು ನೀಡುತ್ತಿದ್ದಾಗ, ರಾಮದೇವ್, ಹಮ್ದರ್ದ್ ಅವರ ಹೆಸರನ್ನು ಉಲ್ಲೇಖಿಸದೆ, ಕಂಪನಿಯು ಪಾನೀಯ ಮಾರಾಟದಿಂದ ಬಂದ ಹಣವನ್ನು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ಹೇಳಿಕೊಂಡಿದ್ದರು. ಅವರು ಇದನ್ನು “ಶರ್ಬತ್ ಜಿಹಾದ್” ಎಂದು ಬಣ್ಣಿಸಿದ್ದರು.

ಹಮ್ದರ್ದ್ ವೀಡಿಯೊವನ್ನು ತೆಗೆದುಹಾಕುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಸಮಯದಲ್ಲಿ ರಾಮದೇವ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಯಾವುದೇ ಕಂಪನಿಯ ಹೆಸರನ್ನು ಹೆಸರಿಸಿಲ್ಲ ಎಂದು ಹೇಳಿದ್ದರು. ನ್ಯಾಯಾಲಯವು ಮೇ 9 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ. ಹಮ್ದರ್ದ್ ರೂಹ್ ಅಫ್ಜಾ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...