Homeಕರ್ನಾಟಕಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ 2024ರ ದಸರಾ ಉದ್ಘಾಟನೆ - ಸಿದ್ದರಾಮಯ್ಯ ಘೋಷಣೆ

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ 2024ರ ದಸರಾ ಉದ್ಘಾಟನೆ – ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು 2024ರ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಮೈಸೂರಿನಲ್ಲಿ ಹೇಳಿದ್ದಾರೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ,”ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ.” ಎಂದು ಹೇಳಿದ್ದಾರೆ.

ಅಲ್ಲದೆ, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

“ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...