Homeಕರ್ನಾಟಕಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು ಉಪಕುಲಪತಿ 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಸಹ-ಪ್ರಾಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಉಪ ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರಿಗೆ ವಿಶ್ವವಿದ್ಯಾಲಯವು ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಸಂದಾಯ ಮಾಡದೆ ಕೋಟ್ಯಾಂತರ ರೂ ಬಾಕಿಯಿಟ್ಟಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಭಡ್ತಿ ನೀಡಲು ಲಂಚ, ಪಿಂಚಣಿಯಿಂದ ಕಮೀಷನ್‌ ಹಾಗೂ ಬೇಕಾಬಿಟ್ಟಿ ನೇಮಕಾತಿ ನಡೆಸುತ್ತಿದ್ದಾರೆ ಎಂದು ಅಲ್ಲಿನ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಕೂಡಾ ಆರೋಪಿಸಿದ್ದಾರೆ.

“ಕನ್ನಡ ವಿಶ್ವವಿದ್ಯಾಲಯ ಹಂಪಿ” ರಾಜ್ಯದ ಹಂಪಿಯಲ್ಲಿರುವ ಸಂಶೋಧನಾ ಆಧಾರಿತ ಸಾರ್ವಜನಿಕ ವಿಶ್ವವಿದ್ಯಾಲಯವಾಗಿದೆ. ಇದನ್ನು 1991 ರಲ್ಲಿ ಕರ್ನಾಟಕ ಸರ್ಕಾರವು ಕನ್ನಡ ವಿಶ್ವವಿದ್ಯಾಲಯ ಕಾಯಿದೆ-1991 ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿಪಡಿಸುವ ಮತ್ತು ಕರ್ನಾಟಕದ ಜಾನಪದ ಸಾಹಿತ್ಯ, ಸಂಪ್ರದಾಯಗಳು, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಅಲ್ಲಿಂದ ಇತ್ತೀಚೆಗಿನವರೆಗೂ ವಿದ್ಯಾಲಯವು ಹಲವಾರು ಗಮನಾರ್ಹ ಸಂಶೋಧನೆಗಳನ್ನು, ಕೆಲಸವನ್ನು ಮಾಡಿದೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಆದರೆ ಇತ್ತೀಚೆಗಿನ ವರ್ಷಗಳಲ್ಲಿ ವಿಶ್ವವಿದ್ಯಾಲಯ ಪ್ರಕಟಿಸುತ್ತಿದ್ದ ಪ್ರಕಟಣೆಗಳು ನಿಂತು ಹೋಗಿದೆ ಎಂದು ವಿದ್ಯಾಲಯದ ಅಧ್ಯಾಪಕರ ಸಂಘ ಆರೋಪಿಸಿದೆ. ಜೊತೆಗೆ ನ್ಯಾಕ್‌ ಮಾನ್ಯತೆಯಲ್ಲಿ ‘ಎ’  ಶ್ರೇಣಿಯಲ್ಲಿದ್ದ ವಿಶ್ವವಿದ್ಯಾಲಯ ಈಗ ‘ಬಿ’ ಶ್ರೇಣಿಗೆ ತಲುಪಿದ್ದು, ದೂರಶಿಕ್ಷಣ ನಿರ್ದೇಶನಾಲಯವು ಮಾನ್ಯತೆ ಕಳೆದುಕೊಂಡಿದೆ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ.

ಜೊತೆಗೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ಸೇರಿದಂತೆ ಕೋಟ್ಯಾಂತರ ರೂಗಳ ಸವಲತ್ತನ್ನು ಸಂದಾಯ ಮಾಡಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕರೇ ಆರೋಪಿಸಿದ್ದು ರಾಜ್ಯಪಾಲರಿಗೆ ಪತ್ರವನ್ನೂ ಬರೆದಿದ್ದಾರೆ.

ಇಷ್ಟೇ ಅಲ್ಲದೆ, ವಿದ್ಯಾಲಯದ ಸಹ-ಪ್ರಾಧ್ಯಾಪಕರಾಗಿರುವ ಡಾ. ಎಂ. ಮಲ್ಲಿಕಾರ್ಜುನಗೌಡ ಅವರು ಕುಲಪತಿಯ ಸ.ಚಿ. ರಮೇಶ ಅವರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಕುಲಪತಿ ರಮೇಶ್ ಅವರು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರಾಧ್ಯಾಪಕ ಹುದ್ದೆಗೆ ಮುಂಬಡ್ತಿ ನೀಡಲು 6 ಲಕ್ಷ ರೂ. ಲಂಚ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇಷ್ಟೇ ಅಲ್ಲದೆ, ನಿಯಮಗಳನ್ನು ಪಾಲಿಸದೆ, ಮೀಸಲಾತಿಯನ್ನು ಉಲ್ಲಂಘಿಸಿ ಒಂದೇ ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕಗೊಳಸಲು ವಿಸಿ ಮತ್ತು ಕಾನೂನು ಘಟಕದ ಸಂಚಾಲಕರೊಬ್ಬರು ಹುನ್ನಾರ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನಗೌಡ ಅವರು ಆರೋಪಿಸಿದ್ದಾರೆ. ಅದರ ಬಗ್ಗೆ ತಕರಾರು ತೆಗೆದಿರುವುದಕ್ಕೆ ಮತ್ತು ಸಿಎಎಸ್ ಮುಂಬಡ್ತಿಗೆ ಲಂಚ ಕೇಳುವುದನ್ನು ಪ್ರಶ್ನಿಸಿದ ನಂತರ ತನ್ನನ್ನು ವಿಶ್ವವಿದ್ಯಾಲಯದಿಂದ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ವಿಶ್ವವಿದ್ಯಾಲಯದಲ್ಲಿನ ಎಸ್‌ ಸಿ, ಎಸ್‌ ಟಿ, ಒಬಿಸಿ ಮತ್ತು ಇತರೆ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮಿಂದಲೂ ಪ್ರಾಧ್ಯಾಪಕರು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಪತ್ರ ಚಳುವಳಿ ನಡೆಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 9 ತಿಂಗಳಿಂದ ವೇತನ ಸಿಗದೆ ಸಂಕಷ್ಟದಲ್ಲಿ ಹಂಪಿ ವಿವಿ ನೌಕರರು: ವಿಶೇಷ ವರದಿ

ಸಂಶೋಧನಾ ವಿದ್ಯಾರ್ಥಿಗಳು ಹೇಳುವಂತೆ ಅವರ ವಿದ್ಯಾರ್ಥಿ ವೇತನಕ್ಕೆ ಸಹಿ ನೀಡುವುದಕ್ಕೆ ಕೂಡಾ ಲಂಚ ಪಡೆಯಲಾಗುತ್ತಿದ್ದು, ಅವುಗಳಲ್ಲೂ ಪರ್ಸಂಟೇಜ್ ಕೇಳಲಾಗುತ್ತಿದೆ. ಜೊತೆಗೆ ಏಕಾಏಕಿ ತಮ್ಮ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡುವುದನ್ನು ಕೂಡಾ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

“ಖರೀದಿ ಮತ್ತು ಇತರೆ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪ್ರಸಾರಾಂಗದ ಪ್ರಕಟಣೆಗಳು ನಿಂತು ಹೋಗಿದೆ. ಜೊತೆಗೆ ವಿವಿಯ ಭೂಮಿಯನ್ನೂ ಒತ್ತುವರಿ ಮಾಡಲಾಗುತ್ತಿದೆ. ಡಿ.ಲಿಟ್‌ ಪದವಿಗಳನ್ನು ಹಣಕ್ಕಾಗಿ ಮಾರಾಟ ಮಾಡಲಾಗುತ್ತಿದೆ” ಎಂದು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆರೋಪಿಸಿದ್ದಾರೆ.

ಈ ಎಲ್ಲಾ ವಿವಾದಗಳ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಸ.ಚಿ. ರಮೇಶ ಅವರು, “ಪ್ರಾಧ್ಯಾಪಕರ ನಿವೃತ್ತಿ ಪಿಂಚಣಿ ನೀಡಲು ಸರ್ಕಾರದಿಂದ ಅನುದಾನ ಬಂದಿಲ್ಲ, ಹಾಗಾಗಿ ಅವುಗಳನ್ನು ನೀಡಿಲ್ಲ. ಅನುದಾನದ ಕುರಿತು ಸರ್ಕಾರಕ್ಕೆ ಹತ್ತಾರು ಬಾರಿ ಪತ್ರ ಬರೆದಿದ್ದೇನೆ. ಉಳಿದಂತೆ ಲಂಚ ಆರೋಪಕ್ಕೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಲಾಗುತ್ತಿದೆ. ಮಾಡುತ್ತಿರುವ ಆರೋಪಗಳಿಗೆ ಸರಿಯಾದ ಸಾಕ್ಷಿ, ಆಧಾರಗಳನ್ನು ಕೊಟ್ಟರೆ ತಪ್ಪಿತಸ್ಥ ನಾನೇ ಆದರೂ ನನಗೆ ಶಿಕ್ಷೆ ಆಗಲಿ. ಈ ಆರೋಪಗಳ ಬಗ್ಗೆ ಈಗಾಗಲೇ ವಿದ್ಯಾಲಯದ ಸಿಂಡಿಕೇಟ್‌ಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಹಣಕಾಸು ಅಧಿಕಾರಿ ರಮೇಶ್ ನಾಯಕ್ ಮಾತನಾಡಿ, “ಪಿಂಚಣಿ ಯಾರಿಗೂ ನಿಂತಿಲ್ಲ, ಕೊಡಲಾಗುತ್ತಿದೆ. ಮಹಾಲೆಕ್ಕಪಾಲರು ನೇಮಕಾತಿ ಸಮಸ್ಯೆಗಳನ್ನು ಮುಂದಿಟ್ಟು ಇಬ್ಬರದು ತಡೆ ಹಿಡಿದಿದ್ದಾರೆ. ಇನ್ನು ಪಿಂಚಣಿ ಸೌಲಭ್ಯಗಳು ಟೆಕ್ನಿಕಲ್ ಸಮಸ್ಯೆಯಿಂದ ಉಳಿದುಕೊಂಡಿವೆ. ಕೆಲವರು 7ನೇ ವೇತನ ಆಯೋಗದ ಪ್ರಕಾರ ರಜೆಗಳಿಕೆ ಕೇಳುತ್ತಿದ್ದಾರೆ. ಆದರೆ ಅದಕ್ಕೆ ಪಿಂಚಣಿ ನಿಯಮಗಳು ವಿರುದ್ಧವಾಗಿವೆ. ಇನ್ನು ಕೆಲವರಿಗೆ ತಾವು ನಿವೃತ್ತರಾದ ವಿವಿಯಲ್ಲಿ ಗಳಿಕೆ ರಜೆ ತೆಗೆದುಕೊಳ್ಳಬೇಕು. ನಾವು ಇಲ್ಲಿ ಕೊಡಲು ಸಾಧ್ಯವಿಲ್ಲ. ಈ ರೀತಿಯಾಗಿ ಸಮಸ್ಯೆಗಳಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...