Homeಮುಖಪುಟಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ ಕಕ್ಕಾಬಿಕ್ಕಿಯಾಗಿದ್ದು ವರದಿಯಾಗಿತ್ತು. ಇದೀಗ, ಮತ್ತೆ ಅಂತದ್ಧೇ ಘಟನೆ ನಡೆದಿದೆ.

ಭಾನುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶ ಆಯೋಜಿಸಿತ್ತು. ಪ್ರಚಾರದಲ್ಲಿ ಭಾಗಿಯಾಗಿದ್ದ ಮೋದಿ ಅವರು ಅಬ್ಬರದ ಭಾಷಣ ಮಾಡಲು ಮುಂದಾಗಿದ್ದರು. ಈ ವೇಳೆ, ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮೋದಿ ಅವರು ಭಾಷಣದ ಮಧ್ಯೆ ತಡವರಿಸಿದ್ದಾರೆ. ಭಾಷಣವನ್ನು ಸುಮಾರು 30 ಸೆಕೆಂಡ್‌ಗಳ ಕಾಲ ನಿಲ್ಲಿಸಿದ್ದು, ಟೆಲಿಪ್ರಾಂಪ್ಟರ್ ಪುನರಾರಂಭವಾದ ಬಳಿಕ ಮತ್ತೆ ಭಾಷಣ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳ ಸಮಯದಲ್ಲಿ ಟೆಲಿಪ್ರಾಂಪ್ಟರ್‌ ಅನ್ನು ಬಳಸುತ್ತಾರೆ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ದೆಹಲಿಯಲ್ಲಿ ಬಿಜೆಪಿಯಂತೆ ಮೋದಿಜಿ ಅವರ ಟೆಲಿಪ್ರಾಂಪ್ಟರ್ ಕೂಡ ವಿಫಲವಾಗಿದೆ…” ಎಎಪಿ ಲೇವಡಿ ಮಾಡಿದೆ.

ಈ ಹಿಂದೆ, 2022ರ ಜನವರಿ 18ರಂದು world economy forum ಆಯೋಜಿಸಿದ್ದ ದಾವೂಸ್ ಅಜೆಂಡಾ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಿದ್ದರು. ಆ ವೇಳೆಯೂ ಶೃಂಗಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತ್ತು. ಆಗಲೂ ಭಾಷಣ ಮಾಡುವಾಗ ಮೋದಿ ತಬ್ಬಿಬ್ಬಾಗಿದ್ದರು.

ಆ ವೇಳೆ, ಮೋದಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಬಳಕೆದಾರರು, ಪ್ರಧಾನ ಮಂತ್ರಿ ಮೋದಿಯವರು ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗ ಅವರ ಸುತ್ತಲೂ ಕಾಣುವ ಗಾಜಿನ ಫಲಕವು ಬುಲೆಟ್ ಪ್ರೂಫ್ ಗ್ಲಾಸ್ ಎಂದು ಹಲವರು ಭಾವಿಸುತ್ತಾರೆ. ಆದರೆ, ಅದು ವಾಸ್ತವವಾಗಿ ಟೆಲಿಪ್ರಾಂಪ್ಟರ್ ಆಗಿದೆ ಎಂದು ಹೇಳಿದ್ದಾರೆ.

“ಟೆಲಿಪ್ರಾಂಪ್ಟರ್ ಸಹಾಯದಿಂದ ಯಾವುದೇ ಸಮಸ್ಯೆಯಿಲ್ಲದೆ ಪ್ರಧಾನಿ ಭಾಷಣ ಮಾಡುತ್ತಾರೆ. ಅವರ ಭಾಷಣದ ವೇಗವನ್ನು ನಿರ್ವಾಹಕರು ನಿಯಂತ್ರಿಸುತ್ತಾರೆ. ಆದರೆ, ಆ ಟೆಲಿಪ್ರಾಂಪ್ಟರ್ ಕಾಣದಂತೆ ವಿಡಿಯೋಗ್ರಫರ್‌ಗಳು ಚಿತ್ರೀಕರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಅದಾದ ಬಳಿಕ, 2022ರ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದ ವೇಳೆ ಮೋದಿ ಅವರು ಟೆಲಿಪ್ರಾಂಪ್ಟರ್‌ಅನ್ನು ಬಳಸದೆ, ಭಾಷಣದ ಪ್ರಿಂಟ್‌ಔಟ್‌ ತೆಗೆದ ಪೇಪರ್‌ ಬಳಸಿಕೊಂಡು ಭಾಷಣ ಮಾಡಿದ್ದರು. ಇದೀಗ, ಮತ್ತೆ ಟೆಲಿಪ್ರಾಂಪ್ಟರ್ ಬಳಸಿದ್ದು, ಯಡವಟ್ಟು ಮಾಡಿಕೊಂಡಿದ್ದಾರೆ. ಹಾಗಾಗಿ ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ.

ಇದನ್ನೂಓದಿ:  ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...