Homeಮುಖಪುಟ‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ...

‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ವಾಗ್ದಾಳಿ

ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿಯು ಆಗಿರುವ ಅವರು ಹೇಳಿದ್ದಾರೆ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಬಿಜೆಪಿ ಮೌನ ವಹಿಸಿದ್ದರೂ, ಪಕ್ಷದ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತ ಕುಮಾರ್ ಅವರು ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡಿದ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದು, ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದಿ ಪ್ರಿಂಟ್ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು,“ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ. ಯಾವುದೇ ಸರ್ಕಾರವಿರಲಿ ಅಪರಾಧಿಗಳಿಗೆ ಈ ರೀತಿಯ ಕ್ಷಮಾದಾನ ನೀಡುವುದನ್ನು ಹೇಗೆ ಅನುಮತಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುಜರಾತ್ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಪ್ರಕರಣದಲ್ಲಿ ಅಪರಾಧಿಗಳಾಗಿರುವ ಜನರನ್ನು ಗಲ್ಲಿಗೇರಿಸಬೇಕು” ಎಂದು ಶಾಂತ ಕುಮಾರ್ ಅವರು ಆಗ್ರಹಿಸಿದ್ದಾರೆ. ಅಪರಾಧಿಗಳಿಗೆ ನೀಡಲಾದ ಕ್ಷಮಾದಾನವನ್ನು ‘‘ರದ್ದುಮಾಡಲು” ತಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

“ಅವರು ಮಾಡಿದ ಅಪರಾಧಕ್ಕಾಗಿ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಅತ್ಯಾಚಾರ ಮತ್ತು ಕೊಲೆಗಾಗಿ ಮಾಡಿದ್ದಕ್ಕಾಗಿ ಅವರ ಶಿಕ್ಷೆಯನ್ನು ಉಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಈ ಮೂಲಕ ಅವರು ಘೋರ ಅಪರಾಧಗಳನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಇಂತಹ ಘೋರ ಅಪರಾಧಗಳ ಹೊರತಾಗಿಯೂ, ಅವರನ್ನು ಗಲ್ಲಿಗೇರಿಸಲಾಗಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ. ಈಗ ಗುಜರಾತ್ ಸರ್ಕಾರ ವಿಶೇಷ ನಿಬಂಧನೆಯನ್ನು ಬಳಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ ಎಂದು ತಿಳಿದ ನಂತರ ನನಗೆ ಆಶ್ಚರ್ಯವಾಗಿದೆ. ದೇಶ ಸ್ವಾತಂತ್ರ್ಯಗೊಂಡು 75 ವರ್ಷವಾಗಿದ್ದರೂ, ಮಹಿಳೆಯರು ಮತ್ತು ಹುಡುಗಿಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಬಿಜೆಪಿ ಸರ್ಕಾರವು ಸ್ವಾತಂತ್ರ್ಯ ದಿನದಂದು ತನ್ನ ಕ್ಷಮಾದಾನ ನೀತಿಯಡಿಯಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ನಂತರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ 11 ಅಪರಾಧಿಗಳು ಗೋದ್ರಾ ಉಪ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿಲ್ಲ ಎಂದ ಸುಪ್ರೀಂ!

ಈ ಅಪರಾಧಿಗಳಿಗೆ 2002 ರಲ್ಲಿ ಗುಜರಾತ್ ಕೋಮುಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಹಲವು ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ರಾಜ್ಯದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿಯಿರುವ ವೇಳೆ ಈ ಕ್ಷಮಾದಾನ ನೀಡಲಾಗಿದೆ.

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ಆಗಸ್ಟ್ 17 ರಂದು ತನ್ನ ಕಚೇರಿಯಲ್ಲಿ ಅಪರಾಧಿಗಳನ್ನು ಹೂಮಾಲೆಯೊಂದಿಗೆ ಸ್ವಾಗತಿಸಿದ ನಂತರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತು. ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ “ಪೊಳ್ಳು ಪ್ರತಿಪಾದನೆ” ಮಾಡಿದಕ್ಕಾಗಿ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಇಷ್ಟಾದರೂ ಈ ಬಗ್ಗೆ ಬಿಜೆಪಿ ಮೌನ ವಹಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಕನ್ನಡ “ಲೋಕ” ಲಡಾಯಿ; ಕೇಸರಿಪಡೆಯ ಕಲಹ ಕಾಂಗ್ರೆಸ್‌ಗೆ ವರವಾದೀತೆ?

0
ಉತ್ತರ ಕನ್ನಡದ ಅಷ್ಟೂ ಎಂಟು ವಿಧಾನಸಭಾ ಕ್ಷೇತ್ರಗಳ ಜತೆ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಕಿತ್ತೂರು ಸೇರಿಸಿ ರಚಿಸಲಾಗಿರುವ "ಉತ್ತರ ಕನ್ನಡ ಲೋಕಸಭಾ ಕ್ಷೇತ್ರ" ವಿಭಿನ್ನತೆ, ವೈವಿಧ್ಯತೆಗಳ ವಿಶಿಷ್ಟ ಸೀಮೆ. ಭೋರ್ಗರೆವ ಅರಬ್ಬೀ...