Homeಮುಖಪುಟಮಧ್ಯಪ್ರದೇಶ: ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಚೌಹಾಣ್ ವಿರುದ್ಧ ನಟನಿಗೆ ಕಣಕ್ಕಿಳಿಸಿದ ಕಾಂಗ್ರೆಸ್

ಮಧ್ಯಪ್ರದೇಶ: ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಚೌಹಾಣ್ ವಿರುದ್ಧ ನಟನಿಗೆ ಕಣಕ್ಕಿಳಿಸಿದ ಕಾಂಗ್ರೆಸ್

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ತನ್ನ 144 ಅಭ್ಯರ್ಥಿಗಳ  ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ.

ಆನಂದ್ ಸಾಗರ್ ಅವರ 2008 ರ ದೂರದರ್ಶನ ಕಾರ್ಯಕ್ರಮ ರಾಮಾಯಣದಲ್ಲಿ ಹನುಮಾನ್ ಪಾತ್ರಕ್ಕಾಗಿ  ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದಾರೆ.

ವಿಕ್ರಮ್ ಮಸ್ತಲ್ ಕಾಂಗ್ರೆಸ್‌ನಿಂದ ಮತ್ತು ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿ ಪಕ್ಷದಿಂದ ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇದೇ ಜುಲೈನಲ್ಲಿ ಮಸ್ತಲ್ ಕಾಂಗ್ರೆಸ್ ಸೇರಿದ್ದರು. ನಟ ವಿಕ್ರಮ್ ಮಸ್ತಲ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಉಪಸ್ಥಿತರಿದ್ದರು.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಪ್ರಕಟಿಸಿದೆ.

ಮಧ್ಯಪ್ರದೇಶದಲ್ಲಿ ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ  ಕಮಲ್ ನಾಥ್ ಅವರನ್ನು ಕಣಕ್ಕಿಳಿಸಲಾಗಿದೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ಅವರನ್ನು ರಘೀಗತ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಮಾಜಿ ರಾಜ್ಯಸಭಾ ಸದಸ್ಯೆ ವಿಜಯ್ ಲಕ್ಷ್ಮಿ ಸಾಧೋ ಅವರನ್ನು ಮಹೇಶ್ವರ್-ಎಸ್‌ಸಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಜಿ ಕ್ಯಾಬಿನೆಟ್ ಸಚಿವ ಜಿತು ಪಟ್ವಾರಿ ಅವರನ್ನು ರಾವು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಮೊದಲ ಪಟ್ಟಿಯಲ್ಲಿ ಸಾಮಾನ್ಯ ವರ್ಗದಿಂದ 47, ಒಬಿಸಿ ವರ್ಗದಿಂದ 39, ಎಸ್‌ಟಿ ವರ್ಗದಿಂದ 30, ಎಸ್‌ಸಿ ವರ್ಗದಿಂದ 22, ಓರ್ವ ಮುಸ್ಲಿಂ ಮತ್ತು 19 ಮಹಿಳೆಯರು ಸೇರಿದ್ದಾರೆ. ಅರವತ್ತೈದು ಅಭ್ಯರ್ಥಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ.

ಬಿಜೆಪಿ ಈಗಾಗಲೇ ಮಧ್ಯಪ್ರದೇಶದ ಅರ್ಧದಷ್ಟು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 230 ಸ್ಥಾನಗಳ ಪೈಕಿ 136 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಿಗೆ ನ.17 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿ.3 ರಂದು ಫಲಿತಾಂಶ ಪ್ರಕಟವಾಗಲಿದೆ.

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಕೂಡ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಕನಿಷ್ಠ ನಾಲ್ವರು ಬಿಜೆಪಿಯ ಮಾಜಿ ನಾಯಕರಿಗೆ ಟಿಕೆಟ್‌ ನೀಡಲಾಗಿದೆ. ದಾಟಿಯಾ ಕ್ಷೇತ್ರದಲ್ಲಿ ಅವಧೇಶ್ ನಾಯಕ್, ಮುಂಗೋಲಿ ಕ್ಷೇತ್ರದಲ್ಲಿ ಯದ್ವೇಂದ್ರ ಸಿಂಗ್‌ಗೆ ಟಿಕೆಟ್‌ ನೀಡಲಾಗಿದೆ ಇದಲ್ಲದೆ ಬಿಜೆಪಿಯ ಮಾಜಿ ಸಂಸದ ಬೋಧ್ ಸಿಂಗ್ ಭಗತ್‌ ಮತ್ತು ನೀರಜ್ ಶರ್ಮಾ ಅವರಿಗೆ ಟಿಕೆಟ್‌ ನೀಡಲಾಗಿದೆ.

ಇದನ್ನು ಓದಿ: ಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪ| ತಾನು ನಿರ್ದೋಷಿ ಎಂದ ಬ್ರಿಜ್ ಭೂಷಣ್ ಸಿಂಗ್: ವಿಚಾರಣಾ ಹಂತ...

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದು ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಂಗಳವಾರ...