Homeಮುಖಪುಟಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆರಗೋಡಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಧ್ವಜಸ್ಥಂಬದಲ್ಲಿ, ನಿಯಮ ಮೀರಿ ಹನುಮಧ್ವಜ ಹಾರಿಸಿದ್ದನ್ನು ಅಧಿಕಾರಿಗಳು ತೆರವುಗೊಳಿಸಿದ್ದರು. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಕೇಸರಿ ಭಾವುಟ ಹಾರಿಸಿ ವಿವಾದ ಹುಟ್ಟುಹಾಕಿದ್ದಾರೆ.

ಹನುಮಧ್ವಜ ತೆರವುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ನಾಯಕರು ಕೆರಗೋಡಿಗೆ ಲಗ್ಗೆ ಇಟ್ಟಿದ್ದು, ಗೌರಿ ಶಂಕರ ಸೇವಾ ಟ್ರಸ್ಟ್ ಕಾರ್ಯಕರ್ತರು ಮತ್ತು ಹಿಂದುತ್ವ ಕಾರ್ಯಕರ್ತರು ಮಂಡ್ಯವನ್ನು ಪ್ರಕ್ಷುಬ್ಧಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಧ್ವಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ನಡೆಗೆ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಸದ್ಯಕ್ಕೆ ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಫೆ.9ರಂದು ಮಂಡ್ಯ ನಗರ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ಕೊಟ್ಟಿದ್ದು, ಜನರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ ಘೋಷಣೆ ಮಾಡಿರುವುದರಿಂದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾನುವಾರ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ-ಜೆಡಿಎಸ್ ನಾಯಕರು ಭಾನುವಾರ ಕೆರಗೋಡಿನಲ್ಲಿ ಪ್ರತಿಭಟನೆ ನಡೆಸಿದರು. ಹನುಮಧ್ವಜ ಹಾರಿಸುವ ಉದ್ದೇಶದಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದಾಗ ಅಶೋಕ್ ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಲಾಯಿತು.

ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು 108 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಹನುಮ ಧ್ವಜ ವನ್ನು ಹಾರಿಸಿದ್ದರು. ಈ ಧ್ವಜವನ್ನು ತೆರವುಗೊಳಿಸಿದ ಪೊಲೀಸರ ಕ್ರಮ ಈಗ ಟೀಕೆಗೆ ಒಳಗಾಗಿದ್ದು, ಪ್ರತಿಭಟನೆ ವ್ಯಕ್ತವಾಗುತ್ತಿದೆ.

ಬಿಜೆಪಿ-ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ-ಸಿಎಂ

‘ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು’ ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ. ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ’ ಎಂದು ಹೇಳಿದ್ದಾರೆ.

‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು. ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ; ರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...