Homeಕರ್ನಾಟಕಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ.

ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು ಬಳಿಯ ತೊಮಿಯರ್ ಪಾಳ್ಯ ಗ್ರಾಮದ ಅಂತೋಣಿಸಾಮಿ, ಪೀಟರ್ ಮತ್ತು ಕುಮಾರ್ ಎಂಬ ಮೂವರು ಕೊನೆಯುಸಿರೆಳೆದಿದ್ದಾರೆ. ಈ ಪೈಕಿ ಮೃತ ಅಂತೋಣಿಸಾಮಿ ಅವರ ಪತ್ನಿ ಲೂರ್ದಾಮೇರಿ ಅವರು ನೀಡಿದ ದೂರಿನ ಆಧಾರದಲ್ಲಿ ಹನೂರು ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ವಲಯ ಐಜಿ ಬೋರಲಿಂಗೇಗೌಡ, ಚಾಮರಾಜನಗರ ಎಸ್ಪಿ ಮುತ್ತುರಾಜು ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಹನೂರು ವಿಭಾಗ ಎಂದು ಆರೋಪಿಗಳ ಹೆಸರನ್ನು ಉಲ್ಲೇಖಿಸಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ನಿರ್ದಿಷ್ಟ ಹೆಸರಿನ ಬದಲಾಗಿದೆ ಅರಣ್ಯ ಅಧಿಕಾರಿಗಳು ಎಂದು ಎಫ್​​​ಐಆರ್​​​​​ನಲ್ಲಿ ನಮೂದಿಸಲಾಗಿದೆ. ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 103(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಗಳು ವಿವರಿಸಿವೆ.

ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಮೂವರು ಬಲಿಯಾದ ಘಟನೆ ಶನಿವಾರ (ಆ.15) ಮುಂಜಾನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮ ಅರಣ್ಯ ವ್ಯಾಪ್ತಿಯ ಶಾಗ್ಯ ಗ್ರಾಮದ ಸಮೀಪದ ಮರಿಯ ಮಂಗಲ ಬೀಟ್‌ನಲ್ಲಿ ನಡೆದಿದೆ.

ಅರಣ್ಯ ಸಿಬ್ಬಂದಿಯ ಗಂಡೇಟಿಗೆ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತರು ಅರಣ್ಯದಲ್ಲಿ ಬೇಟೆಗೆ ಬಂದಿದ್ದರು. ಈ ಬಗ್ಗೆ ಮಾಹಿತಿ ಗೊತ್ತಾಗಿ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಮೃತರು ನಾಡ ಬಂದೂಕಿನಿಂದ ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿ ಕೂಡ ಆತ್ಮ ರಕ್ಷಣೆಗೆ ಗುಂಡು ಹಾರಿಸಿದ್ದು, ಇದರಿಂದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ, ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಆದರೆ, ಮೃತರ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು, ಅಧಿಕಾರಿಗಳ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಇದು ನಕಲಿ ಎನ್‌ಕೌಂಟರ್ ಎಂದು ಆರೋಪಿಸಿದ್ದಾರೆ. ಮೃತರು ಕಾಡಿಗೆ ಹಸು ಹುಡುಕಲು ಹೋಗಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತ್ಮ ರಕ್ಷಣೆಗೆ ಗುಂಡು ಹಾರಿಸುವುದಾದರೆ ಕಾಲಿಗೆ ಹಾರಿಸಬೇಕಿತ್ತು. ಎದೆ, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗುಂಡಿಕ್ಕಿದ್ದಾರೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನ ಹಟ್ಟಾಲಾ ಪಾರಾದಲ್ಲಿರುವ ಅವರ...

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...