Homeಮುಖಪುಟಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

- Advertisement -
- Advertisement -

ರಾಜಸ್ಥಾನದ ಬರಾನ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ತಿಂಗಳು ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳಿನ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಗುಂಪೊಂದು ದಲಿತ ಸಮುದಾಯಕ್ಕೆ ಸೇರಿದ 40 ವರ್ಷದ ಶಿಕ್ಷಕಿ ಹೇಮಲತಾ ಬೈರ್ವಾ ಅವರೊಂದಿಗೆ ಜಗಳವಾಡುತ್ತಿರುವುದು, ಅವರಲ್ಲಿ ಸರಸ್ವತಿಯನ್ನು ಯಾಕೆ ಪೂಜಿಸುತ್ತಿಲ್ಲ ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ.

ಇದಾದ ಒಂದು ತಿಂಗಳ ನಂತರ ರಾಜಸ್ಥಾನದ ಸಚಿವ ಮದನ್ ದಿಲಾವರ್ ಅವರ ಸೂಚನೆಯ ಮೇರೆಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಬೈರ್ವಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರನ್ನು ಅವರ ಮನೆಯಿಂದ 600 ಕಿಲೋಮೀಟರ್ ದೂರದಲ್ಲಿರುವ ಬಿಕಾನೇರ್‌ಗೆ ವರ್ಗಾಯಿಸಲಾಗಿದೆ. ಬೈರವರ ಅಮಾನತು ಖಂಡಿಸಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಸಚಿವ ಮದನ್ ದಿಲಾವರ್ ರಾಜೀನಾಮೆಗೆ ದಲಿತ ಸಮುದಾಯ ಪಟ್ಟು ಹಿಡಿದಿದೆ.

ಜನವರಿ 26ರಂದು ಈ ಕುರಿತು ವೀಡಿಯೊ ವೈರಲ್‌ ಆಗಿದೆ. ಶಿಕ್ಷಕಿ ಬೈರ್ವಾ, ಮಹಾತ್ಮಾ ಗಾಂಧಿ, ಸಾವಿತ್ರಿಬಾಯಿ ಫುಲೆ ಮತ್ತು ಬಿಆರ್ ಅಂಬೇಡ್ಕರ್ ಅವರ ಹಾರ ಹಾಕಿದ ಫೋಟೋಗಳ ಮುಂದೆ ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಪುರುಷರ ಗುಂಪು ಅವಳ ಜೊತೆ ವಾಗ್ವಾದ ನಡೆಸುವುದು ಕಂಡು ಬಂದಿದೆ.

ಬಚ್ಚೋನ್ ಕಿ ದೇವಿ ಸರಸ್ವತಿ ಹೈ (ಮಕ್ಕಳ ದೇವತೆ ಸರಸ್ವತಿ) ಎಂದು ಗುಂಪು ಹೇಳುವುದು ವಿಡಿಯೋದಲ್ಲಿ ಕೇಳಿಸುತ್ತಿದೆ. ಅದಕ್ಕೆ ಬೈರ್ವಾ ‘ಬಚ್ಚೋನ್ ಕಿ ದೇವಿ ತೋ ಸಾವಿತ್ರಿಬಾಯಿ ಫುಲೆ ಹೈ (ಮಕ್ಕಳ ದೇವತೆ ಸಾವಿತ್ರಿಬಾಯಿ ಫುಲೆ)’ ಎಂದು ಉತ್ತರಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಬೈರ್ವಾ ಹಿಂದೂ ದೇವತೆ ಸರಸ್ವತಿಯ ಪೂಜೆಯನ್ನು ಮಾಡಬೇಕೆಂದು ಗುಂಪು ಒತ್ತಾಯಿಸಿದಾಗ, ಅವರ ಅದನ್ನು ನಿರಾಕರಿಸುವುದನ್ನು ಕಾಣಬಹುದು. ಇದಾದ ಬಳಿಕ ಶಾಲೆಯ ಮುಂದೆ ಜಮಾಯಿಸಿದ ಗುಂಪು ಆಕೆಗೆ ಕಾರ್ಯಕ್ರಮ ಹೇಗೆ ಮುಂದುವರಿಸುತ್ತೀರೆಂದು ಸವಾಲು ಹಾಕುತ್ತಿರುವುದು ಕಂಡು ಬಂದಿದೆ. ದೀಪ ಏಕೆ ಇರಲಿಲ್ಲ?  ಬೈರ್ವಾ ಹಿಂದೂ ಸಂಪ್ರದಾಯಗಳ ಬಗ್ಗೆ ತಿಳಿದಿಲ್ಲವೇ ಎಂದು ಒಬ್ಬ ವ್ಯಕ್ತಿ ಕೇಳುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಹಿಂದೂ ಎಂದರೆ ಏನು? ಹಿಂದೂ, ಮುಸ್ಲಿಂ, ಸಿಖ್, ಇಸಾಯಿ ಸಬ್ ಬರಾಬರ್ ಹೈ (ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಎಲ್ಲರೂ ಸಮಾನರು) ಎಂದು ಬೈರ್ವಾ ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಬರುತ್ತಿದೆ.

ಎಫ್‌ಐಆರ್‌ ದಾಖಲು:

ಘಟನೆಯ ಬಗ್ಗೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಒಂದು ಬೈರ್ವಾ ಅವರ ವಿರುದ್ಧ ದಾಖಲಿಸಲಾಗಿದೆ ಮತ್ತು ಇನ್ನೊಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಶಿಕ್ಷಕಿ ಬೈರ್ವಾ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಗಣರಾಜ್ಯೋತ್ಸವದಂದು ಸರ್ಕಾರಿ ಸೇವಕಳಾಗಿ ನಾನು ಭಾರತದ ಪವಿತ್ರ ಸಂವಿಧಾನದ ಅನುಷ್ಠಾನದ 75ನೇ ವಾರ್ಷಿಕೋತ್ಸವವನ್ನು ಆಚರಿಸಲು ಶಾಲೆಯಲ್ಲಿ ಸಿದ್ಧತೆ ಮಾಡುತ್ತಿದ್ದೆ, ಈ ವೇಳೆ ಗುಂಪು ಮತ್ತು ಶಾಲಾ ಸಿಬ್ಬಂದಿಗಳಾದ  ಹಂಸರಾಜ್ ಸೈನ್ ಮತ್ತು ಭೂಪೇಂದ್ರ ಸೇನ್ ಅವರು ಸಾರ್ವಜನಿಕ ಸ್ಥಳದಲ್ಲಿ ಸರಸ್ವತಿ ಪೂಜೆ ಮಾಡುವಂತೆ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದರು ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಬರಾನ್‌ನ ನಹರ್‌ಗಢ್ ಪೊಲೀಸ್ ಠಾಣೆಯಲ್ಲಿ ಬೈರ್ವಾ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ನಾನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಮಹಿಳಾ ಸೇವಕಿ. ಹಂಸರಾಜ್ ನಗರ, ಭಾರತ್ ನಗರ, ರಾಧೇಶ್ಯಾಮ್ ನಗರ ಜಾತಿ ನಿಂದನೆಗಳನ್ನು ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಸರ್ಕಾರಿ ಶಿಕ್ಷಕಿ ಹೇಮಲತಾ ಬೈರ್ವಾ ವಿರುದ್ಧ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೇರಿದಂತೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜನವರಿ 26ರ ಘಟನೆಯ ನಂತರ, ಬಿಜೆಪಿಯ ಹಿರಿಯ ಶಾಸಕ ಮತ್ತು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ಹಾದ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಬೈರ್ವಾ ಅವರನ್ನು ಕಳೆದ ವಾರ ಅಮಾನತುಗೊಳಿಸಲಾಗಿತ್ತು.

ಬೈರ್ವಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತನ್ನ ಜಾತಿಯ ಕಾರಣಕ್ಕಾಗಿ ತನಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ತಾನು ಬಿಕಾನೇರ್‌ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ನನಗೆ ಬೆದರಿಕೆ ಹಾಕುವುದು ಎಷ್ಟು ಸರಿ? ನಾನು ಎಫ್‌ಐಆರ್ ದಾಖಲಿಸಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಬದಲಾಗಿ ನನ್ನನ್ನು ಅಮಾನತು ಮಾಡಲಾಗಿದೆ. ದಲಿತ ಮಕ್ಕಳು ಇರುವ ಶಾಲೆಯಲ್ಲಿ ಕೆಲವು ಆರೋಪಿಗಳು ನಿಯಮಿತವಾಗಿ ಜಾತಿಪದ್ಧತಿ ಅನುಸರಿಸುತ್ತಾರೆ. ಸಾವಿತ್ರಿಭಾಯಿ ಫುಲೆ ಮಹಿಳೆಯರಿಗಾಗಿ ಶಾಲೆಗಳನ್ನು ತೆರೆದರು. ಅವಳಿಗಿಂತ ಮೊದಲು ಎಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದರು? ಧಾರ್ಮಿಕ ನಂಬಿಕೆಗಳು ವೈಯಕ್ತಿಕ ಮತ್ತು ನಾವು ಸಂವಿಧಾನವನ್ನು ಮಾತ್ರ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ದಲಿತ ಶಿಕ್ಷಕಿಯನ್ನು ಅಮಾನತು ಮಾಡಿದ್ದನ್ನು ಖಂಡಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನು ಓದಿ: ಬ್ರಾಹ್ಮಣರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಅರ್ಚಕ ಹುದ್ದೆ ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...