Homeಕರ್ನಾಟಕನಕಲಿ ಜಾತಿ ಪ್ರಮಾಣ ಪತ್ರ ಕುರಿತು ತನಿಖೆ ನಡೆಸುತ್ತಿದ್ದಕ್ಕೆ ಸರ್ಕಾರದಿಂದ ಕಿರುಕುಳ ಆರೋಪ: ಡಿಜಿಪಿ ರವೀಂದ್ರನಾಥ್...

ನಕಲಿ ಜಾತಿ ಪ್ರಮಾಣ ಪತ್ರ ಕುರಿತು ತನಿಖೆ ನಡೆಸುತ್ತಿದ್ದಕ್ಕೆ ಸರ್ಕಾರದಿಂದ ಕಿರುಕುಳ ಆರೋಪ: ಡಿಜಿಪಿ ರವೀಂದ್ರನಾಥ್ ರಾಜೀನಾಮೆ

ನಿಜವಾದ ಎಸ್‌ಎಸ್/ಎಸ್‌ಟಿ ಸಮುದಾಯದಕ್ಕೆ ನ್ಯಾಯ ದೊರಕಿಸಿಕೊಡಲು ನಾನು ಮತ್ತಷ್ಟು ಕಾಲ ಡಿಸಿಆರ್‌ಇ ನಲ್ಲಿ ಇರಬೇಕಿತ್ತು...

- Advertisement -
- Advertisement -

ಕರ್ನಾಟಕ ರಾಜ್ಯ ಪೊಲಿಸ್ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಿರುವುದಕ್ಕೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪೊಲೀಸ್ ಮಹಾನಿರ್ದೇಶಕ ಡಾ.ಪಿ ರವೀಂದ್ರನಾಥ್‌ರವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

“ಈ ಹಿಂದೆ ಅವರು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್‌ಇ) ಹೆಚ್ಚುವರಿ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುವಾಗ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ ಪ್ರಕರಣ ವಿಚಾರಣೆ ನಡೆಸುತ್ತಿದ್ದೆ. ಆ ವೇಳೆ ಪತ್ರಿಕಾಗೋಷ್ಟಿಯೊಂದರಲ್ಲಿ ಇಬ್ಬರ ಪ್ರಭಾವಿಗಳ ಹೆಸರು ಬಹಿರಂಗಪಡಿಸಿದ್ದಲ್ಲದೆ ಅವರು ಡಿಸಿಆರ್‌ಇ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದೆ. ಅಂದಿನಿಂದ ಸರ್ಕಾರದ ಮೇಲೆ ಪ್ರಭಾವ ಬೀರುವ ವ್ಯಕ್ತಿಗಳು ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಡಾ.ಪಿ ರವೀಂದ್ರನಾಥ್‌ ಆರೋಪಿಸಿದ್ದಾರೆ.

ನಿಜವಾದ ಎಸ್‌ಎಸ್/ಎಸ್‌ಟಿ ಸಮುದಾಯದಕ್ಕೆ ನ್ಯಾಯ ದೊರಕಿಸಿಕೊಡಲು ನಾನು ಮತ್ತಷ್ಟು ಕಾಲ ಡಿಸಿಆರ್‌ಇ ನಲ್ಲಿ ಇರಬೇಕಿತ್ತು. ನಾನು ಸರ್ಕಾರದ ವಿರುದ್ಧವಿರಲಿಲ್ಲ. ನನ್ನನ್ನು ವರ್ಗಾವಣೆ ಮಾಡಿ ಎಂದು ಕೇಳಿಕೊಂಡಿರಲಿಲ್ಲ. ಈ ವರ್ಗಾವನೆ ಸಾರ್ವಜನಿಕ ಹಿತದೃಷ್ಟಿಯಿಂದ ನಡೆದುದ್ದಲ್ಲ. ಬದಲಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ಪಿತೂರಿ ನಡೆಸಿ ನನ್ನ ವರ್ಗಾವಣೆ ಮಾಡಲಾಗಿದೆ ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) 1995 ರ ನಿಯಮಗಳ ಪ್ರಕಾರ ಸಂರಕ್ಷಣಾ ಕೋಶವನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸುವಂತೆ ನಾನು ಕರ್ನಾಟಕ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಮನವಿ ಮಾಡಿದ್ದೆ. ಆಗ ಅವರು ನನ್ನನ್ನು ನಡೆಸಿಕೊಂಡ ರೀತಿಯಿಂದ ಬಹಳ ನೋವಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಕೆಲದಿನಗಳಿಂದ ರಜೆಯಲ್ಲಿದ್ದ ಅವರು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಹೆಚ್ಚುವರಿ ಡಿಜಿಪಿ ಅರುಣ್ ಚಕ್ರವರ್ತಿಯವರಿಗೆ ಅಧಿಕಾರ ಹಸ್ತಾಂತರಿಸಿದ ನಂತರ ಇಂದು ಅರಮನೆ ರಸ್ತೆಯ ಅವರ ಕಚೇರಿಯಿಂದ ವಿಧಾನಸೌಧಕ್ಕೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

1989ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಡಾ.ಪಿ ರವೀಂದ್ರನಾಥ್‌ರವರು ಈ ಹಿಂದೆಯೂ ಸಹ 2008, 2014 ಮತ್ತು 2020 ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಾಪಸ್ ಪಡೆದಿದ್ದರು.

ಇದನ್ನೂ ಓದಿ: ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರವೀಂದ್ರನಾಥ್ ಅವರು ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ, ಅಕ್ಟೋಬರ್ 28, 2020 ರಂದು ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಮೂಲಕ ಆಗಿನ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಅವರು ‘ಕೆಲವು ವ್ಯಕ್ತಿಗಳು’ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು

ತಾನು ಹಿರಿತನದಲ್ಲಿದ್ದರೂ ಅವರ ಹೆಸರನ್ನು ಎರಡನೇ ಪಟ್ಟಿಗೆ ಹಾಕಿ ಇತರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಬಡ್ತಿ ನೀಡಿದ ಬಗ್ಗೆಅವರು ಅಸಮಾಧಾನಗೊಂಡಿದ್ದರು. ನಂತರ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆ ವಾಪಸ್ ಪಡೆದಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

0
"ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?"...