Homeಮುಖಪುಟಗಂಡು ಮಗು ಹೆರಲಿಲ್ಲ ಎಂದು ಪತಿಯಿಂದ ಕಿರುಕುಳ; ಮೂವರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಗಂಡು ಮಗು ಹೆರಲಿಲ್ಲ ಎಂದು ಪತಿಯಿಂದ ಕಿರುಕುಳ; ಮೂವರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

- Advertisement -
- Advertisement -

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂಬ ಕಾರಣಕ್ಕೆ ಪತಿ ನೀಡಿದ ಕಿರುಕುಳದ ಕಾರಣದಿಂದ ಒಂದರಿಂದ ಐದು ವರ್ಷದ ತನ್ನ ಮೂವರು ಹೆಣ್ಣುಮಕ್ಕಳ ಜತೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

28 ವರ್ಷದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ. ಮತ್ತೊಂದು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಆಪಾದಿತ ಕಿರುಕುಳದ ಬಗ್ಗೆ ತನ್ನ ಅತ್ತಿಗೆ ಮತ್ತು ಸಹೋದರನಿಗೆ ಸಂದೇಶಗಳನ್ನು ಕಳುಹಿಸಿದ ನಂತರ ಮಹಿಳೆಯು, ತನ್ನ ಹೆಣ್ಣುಮಕ್ಕಳ ಜತೆಗೆ ನೇಣು ಹಾಕಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಅರುಣ್ ಶರ್ಮಾ ತಿಳಿಸಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಂಗಳವಾರ ಮಧ್ಯಾಹ್ನ ಈ ವಿಷಯ ಬೆಳಕಿಗೆ ಬಂದಿದೆ ಎಂದು ಶರ್ಮಾ ಹೇಳಿದ್ದಾರೆ. “ಮಹಿಳೆ ಐದು ವರ್ಷಗಳಲ್ಲಿ ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಳು. ಆದರೆ ಆಕೆಯ ಪತಿಗೆ ಗಂಡು ಮಗು ಬೇಲಾಗಿತ್ತು. ಸೋಮವಾರ ರಾತ್ರಿ ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಮಂಗಳವಾರ ನಸುಕಿನ 12.24ರಿಂದ 12.55ರ ನಡುವೆ ಪತಿ ಕಿರುಕುಳ ನೀಡುತ್ತಿದ್ದು, ತನ್ನ ಪುತ್ರಿಯರನ್ನು ಹಾಗೂ ತನ್ನನ್ನು ಕೊಲ್ಲುತ್ತಿರುವುದಾಗಿ ಐದು ಸಂದೇಶಗಳನ್ನು ಕಳುಹಿಸಿದ್ದಾಳೆ” ಎಂದು ಹೇಳಿದ್ದಾರೆ.

ಮಹಿಳೆಯ ಸಹೋದರ ಬೆಳಿಗ್ಗೆ ಎದ್ದಾಗ ಸಂದೇಶಗಳನ್ನು ನೋಡಿದ್ದಾರೆ. ಅವರಿಗೆ ಕರೆ ಮಾಡಲು ಪ್ರಯತ್ನಿಸಿದರು; ಆದರೆ, ಅವಳು ಪ್ರತಿಕ್ರಿಯಿಸಲಿಲ್ಲ. ನಾನು ಅವಳ ಪತಿಗೆ ಕರೆ ಮಾಡಿದ್ದೇನೆ ಮತ್ತು ಎಲ್ಲವೂ ಸರಿಯಾಗಿದೆ ಎಂದು ಹೇಳಿದರು. ನಾನು ಅವನನ್ನು ನಂಬಲಿಲ್ಲ, ಪಕ್ಕದ ಹಳ್ಳಿಯಲ್ಲಿ ವಾಸಿಸುವ ನನ್ನ ಚಿಕ್ಕಮ್ಮನನ್ನು ಸ್ಥಳಕ್ಕೆ ಹೋಗುವಂತೆ ಹೇಳಿದ್ದೆ, ನನ್ನ ಸಂಬಂಧಿಕರು ಆಕೆಯ ಮನೆಗೆ ಬಂದಾಗ, ಅವರು ಮೂವರ ಶವಗಳನ್ನು ನೋಡಿದ್ದಾರೆ. ಆಗ ಅವರು ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ನಾನು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ” ಎಂದು ವಿವರಿಸಿದ್ದಾರೆ.

ಕೆಲವು ವೈದ್ಯಕೀಯ ಸಮಸ್ಯೆಗಳಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಹಿಳೆಯ ಪತಿ ಹೇಳಿದ್ದಾರೆ. “ಅವಳು ಗಂಡು ಮಗುವನ್ನು ಬಯಸಿದ್ದಳು. ಆದರೆ ಗರ್ಭಿಣಿಯಾಗಲು ಸಾಧ್ಯವಾಗಲಿಲ್ಲ ಮತ್ತು ಅದಕ್ಕಾಗಿಯೇ ಅವಳು ತನ್ನ ಜೀವನವನ್ನು ಕೊನೆಗೊಳಿಸಿದಳು” ಎಂದು ಪತಿ ಹೇಳಿದ್ದಾನೆ.

ಇದನ್ನೂ ಓದಿ; ಉತ್ತರ ಪ್ರದೇಶ: ನೀಟ್ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ‘ಕೋಚಿಂಗ್ ಹಬ್’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...