Homeದಲಿತ್ ಫೈಲ್ಸ್‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

- Advertisement -
- Advertisement -

“ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋಲಾರದ ಯುವ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್‌ ಎರಡು ಪುಟದ ಡೆತ್‌ನೋಟ್ ಬರೆದಿಟ್ಟಿದ್ದಾರೆ.

ಇತ್ತೀಚೆಗೆ “ಯುವಕನೊಬ್ಬನನ್ನು ಕಿಡ್ನಾಪ್‌ ಮಾಡಲಾಗಿದೆ” ಎಂದು ಆರೋಪಿಸಿ ಸಂದೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. “ಪೊಲೀಸ್ ಎಂದು ಹೇಳಿಕೊಂಡು ಕಿಡ್ನಾಪ್‌ ಮಾಡಲಾಗಿದೆ” ಎಂದು ಪೊಲೀಸರು ಆರೋಪಿಸಿದ್ದರು.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದರು. ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಂದೇಶ್ ಬರೆದ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...