Homeಕರ್ನಾಟಕಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಗೆ ಕಿರುಕುಳ: ಚಿಕ್ಕಪ್ಪನ ವಿರುದ್ಧ ಎಫ್‌ಐಆರ್

ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಗೆ ಕಿರುಕುಳ: ಚಿಕ್ಕಪ್ಪನ ವಿರುದ್ಧ ಎಫ್‌ಐಆರ್

- Advertisement -
- Advertisement -

ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದ ಮೇಲೆ, ಆಕೆಯ ಚಿಕ್ಕಪ್ಪನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಾಲನ್ಯಾಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವಂತೆ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆ, ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ತಂದೆಯ ಅನಾರೋಗ್ಯದ ಕಾರಣ ಚಿಕ್ಕಪ್ಪನ ಮನೆಯಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ, ಮೇ 22ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಚಿಕ್ಕಪ್ಪ ಮೇ 24ರಂದು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಾಪತ್ತೆಯಾಗಿದ್ದ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆಯಾಗಿದ್ದಳು. ಈ ಬಗ್ಗೆ ಒಡನಾಡಿ ಸಂಸ್ಥೆ ಕೂಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿತ್ತು. ಸಂಸ್ಥೆಯ ನಿರ್ದೇಶಕ ಸ್ಪ್ಯಾನ್ಲಿ ಅವರೊಂದಿಗೆ ಮಂಗಳವಾರ ಬಾಲಕಿ ಚಿತ್ರದುರ್ಗಕ್ಕೆ ಬಂದಿದ್ದಳು.

ಮುರುಘಾಶ್ರೀ ಬೆಂಬಲಿಗರು ಚಿಕ್ಕಪ್ಪನ ಮೂಲಕ ಬಾಲಕಿಗೆ ಒತ್ತಡ ಹಾಕುತ್ತಿದ್ದರಿಂದ ಆಕೆ ಮನೆಬಿಟ್ಟು ತೆರಳಿದ್ದಳು ಎಂದು ತಿಳಿದು ಬಂದಿದೆ.

ಒಡನಾಡಿ ಸಂಸ್ಥೆಯ ನೆರವಿನೊಂದಿಗೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾದ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಗಿತ್ತು. ಸಮಿತಿ ಬಾಲಕಿಯ ಅಳಲು ಆಲಿಸಿ, ಬಾಲನ್ಯಾಯ ಕಾಯ್ದೆಯ ಕಲಂ 75ರ ಅಡಿಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಚಿಕ್ಕಪ್ಪನ ವಿರುದ್ಧ ದೂರು ದಾಖಲಿಸುವಂತೆ ಮಕ್ಕಳ ರಕ್ಷಣಾಧಿಕಾರಿಗೆ ಸೂಚಿಸಿತ್ತು.

“ಮನೆ ತೊರೆದ ಬಾಲಕಿ ಒಡನಾಡಿ ಸೇವಾ ಸಂಸ್ಥೆಗೆ ಬಂದಿದ್ದಳು. ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ ಚಿಕ್ಕಪ್ಪನ ಕಿರುಕುಳದ ಬಗ್ಗೆ ವಿವರಿಸಲಾಗಿದೆ. ಪೋಕ್ಸೋ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆದಿದೆ. ಪ್ರಕರಣದಿಂದ ಹಿಂದೆ ಸರಿಯುವಂತೆ ಬೆದರಿಸಲಾಗಿದೆ. ಹಣ, ಚಿನ್ನಾಭರಣದ ಆಮಿಷ ಒಡ್ಡಲಾಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು” ಎಂದು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಪ್ಯಾನ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ದಿಢೀರ್ ಸಾವು: ತನಿಖೆಗೆ ಆಗ್ರಹಿಸಿದ ಜನವಾದಿ ಮಹಿಳಾ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...