Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial