Homeಮುಖಪುಟಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ಹಾರ್ದಿಕ್ ಪಟೇಲ್

ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡ ಹಾರ್ದಿಕ್ ಪಟೇಲ್

- Advertisement -
- Advertisement -

ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಹೊಸ ಕಾರ್ಯಕಾರಿ ಅಧ್ಯಕ್ಷರನ್ನಾಗಿ ಶನಿವಾರ ನೇಮಿಸಲಾಗಿದೆ.

“ತಕ್ಷಣದಿಂದ ಜಾರಿಗೆ ಬರುವಂತೆ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ಅವರನ್ನು ನೇಮಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ” ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

26 ವರ್ಷದ ಹಾರ್ದಿಕ್‌ಪಟೇಲ್ 2015 ರಲ್ಲಿ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ಬಹದೊಡ್ಡ ಹೋರಾಟ ಸಂಘಟಿಸುವ ಮೂಲಕ ನಾಯಕರಾಗಿ ಹೊರಹೊಮ್ಮಿದರು. ಕಳೆದ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್ ಸೇರಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರೂ ಸಹ ಕಾರಣಾಂತರಗಳಿಂದ ಸ್ಪರ್ಧಿಸಿರಲಿಲ್ಲ.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗಾಗಿ ಬಹುದೊಡ್ಡ ಆಂದೋಲನ ನಡೆಸಿದ ಹಾರ್ದಿಕ್‌ಪಟೇಲ್ ಈ ವಿಷಯದಲ್ಲಿ ಬಿಜೆಪಿ ಪಕ್ಷವು ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ದೂರಿದ್ದರು. ಹಾಗಾಗಿ 2015 ರಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತ್ತು 2017 ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರು.

ಅಮಿತ್ ಚಾವ್ಡಾ ರಾಜ್ಯ ಘಟಕದ ಅಧ್ಯಕ್ಷರಾಗಿದ್ದು, ತುಷರ್ ಚೌಧರಿ ಮತ್ತು ಕರ್ಸಂದಾಸ್ ಸೋನೇರಿಯೊಂದಿಗೆ ಕಾರ್ಯಕಾರಿ ಅಧ್ಯಕ್ಷರಾಗಿ ಹಾರ್ದಿಕ್ ನೇಮಕಗೊಂಡಿದ್ದಾರೆ.


ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು...

0
ಲೋಕಸಭಾ ಚುನಾವಣೆಯ ಹಿನ್ನೆಲೆ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ  ಮತದಾನ...