Homeಮುಖಪುಟಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

- Advertisement -
- Advertisement -

ಆಯುಧಗಳನ್ನು ಬಳಸಿ ಮುಸ್ಲಿಮರನ್ನು ಕೊಲ್ಲಿ ಎಂದು ಹರಿದ್ವಾರ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ್ದ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದರವರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ಆರೋಪದಲ್ಲಿ ಉತ್ತರಾ ಖಂಡದ ಧರ್ಮ ಸಂಸದ್‌ನಲ್ಲಿ ಭಾಗವಹಿಸಿದ್ದ 10 ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ಜಿತೇಂದ್ರ ಪ್ರಸಾದ್ ತ್ಯಾಗಿ ಎಂದು ಹೆಸರು ಬದಲಿಸಿಕೊಂಡು ಹಿಂದೂ ಧರ್ಮಕ್ಕೆ ಮತಾಂತರವಾಗಿರುವ ವಾಸೀಂ ರಿಜ್ವಿಯವರನ್ನು ಈ ಮೊದಲು ಬಂಧಿಸಲಾಗಿತ್ತು. ಶನಿವಾರ ಲಕ್ನೋದಲ್ಲಿ ನರಸಿಂಗಾನಂದರನ್ನು ಬಂಧಿಸುವ ಮೂಲಕ ಎರಡನೇ ಬಂಧನ ನಡೆದಿದೆ.

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸುವಾಗ ’ನೀವೆಲ್ಲರೂ ಸಾಯುತ್ತೀರಿ’ (ತುಮ್ ಸಬ್ ಮಾರೋಗೆ) ಎಂದು ಪೊಲೀಸರಿಗೆ ವಿವಾದಿತ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬೆದರಿಕೆ ಹಾಕಿದ್ದರು. ಅಲ್ಲದೇ “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ನಾಲಿಗೆ ಹರಿಯಬಿಟ್ಟಿದ್ದರು.

ಹರಿದ್ವಾರ ದ್ವೇ‍ಷ ಭಾಷಣ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತು 10 ದಿನಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿತ್ತು. ನಂತರವಷ್ಟೇ ಘಟನೆ ನಡೆದ ಸುಮಾರು ಒಂದು ತಿಂಗಳ ನಂತರ ಇಬ್ಬರ ಬಂಧನವಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಸಾಮಾಜಿಕ ಕಾರ್ಯಕರ್ತರು ಒತ್ತಡ ಹೇರಿದ್ದಾರೆ.


ಇದನ್ನೂ ಓದಿ : ಸಂವಿಧಾನ, ಸುಪ್ರೀಂ ಕೋರ್ಟ್ ಮೇಲೆ ನಂಬಿಕೆ ಇಲ್ಲ: ಮತ್ತೆ ನಾಲಿಗೆ ಹರಿಬಿಟ್ಟ ಯತಿ ನರಸಿಂಗಾನಂದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...