Homeಮುಖಪುಟದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

- Advertisement -
- Advertisement -

ಗಾಜಿಯಾಬಾದ್ ಮೂಲದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ, ವಿವಾದಿತ ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ ಅವರ ಜಾಮೀನು ಅರ್ಜಿಯನ್ನು ಹರಿದ್ವಾರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯವು ಬುಧವಾರ ತಿರಸ್ಕರಿಸಿದೆ.

ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ಸಮಾವೇಶದಲ್ಲಿ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ದ್ವೇಷಪೂರಿತ ಭಾಷಣಗಳಿಗಾಗಿ ಶನಿವಾರ (ಜ. 15) ಸಂಜೆ ಯತಿ ನರಸಿಂಗಾನಂದರನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಬಳಿಕ ಭಾನುವಾರ (ಜ. 16) ಪತ್ರಕರ್ತೆ ಮತ್ತು ಕ್ಯಾಮರಾಮ್ಯಾನ್ ನಿಂದನೆ ಮಾಡಿದ ಕಾರಣಕ್ಕೆ ಹೊಸ ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರೋಪಿ ವಿರುದ್ಧ ಸೆಕ್ಷನ್ 295 (ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 509 (ಯಾವುದೇ ಮಹಿಳೆಯನ್ನು ಅವಮಾನಿಸುವ ಉದ್ದೇಶ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ಈ ಆರೋಪಗಳ ಅಡಿಯಲ್ಲಿ ಅಪರಾಧಗಳಿಗೆ ಗರಿಷ್ಠ ಶಿಕ್ಷೆಯು ಏಳು ವರ್ಷಗಳಿಗಿಂತ ಹೆಚ್ಚಿಲ್ಲ , ಅವರ ಯಾವುದೇ ಅಪರಾಧಗಳು ಜಾಮೀನು ರಹಿತವಲ್ಲ ಎಂದು ಆರೋಪಿ ಪರ ಅವರ ವಕೀಲರಾದ ಉತ್ತಮ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದಕ್ಕೂ ಮುನ್ನ ಹರಿದ್ವಾರದ ಸಿಜೆಎಂ ಮುಖೇಶ್ ಚಂದ್ರ ಆರ್ಯ ಅವರು ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಜಿತೇಂದ್ರ ನಾರಾಯಣ ತ್ಯಾಗಿ (ವಸೀಮ್ ರಿಜ್ವಿ) ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದ್ದರು. ತ್ಯಾಗಿ ಕೂಡ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಮುಸ್ಲಿಮರ ಹತ್ಯಾಕಾಂಡ ಮತ್ತು ಅವರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ್ದ ಯತಿ ನರಸಿಂಗಾನಂದ, ಜಿತೇಂದ್ರ ಸಿಂಗ್ ನಾರಾಯಣ್ ತ್ಯಾಗಿ ಮತ್ತು ಅನ್ನಪೂರ್ಣ ಸೇರಿದಂತೆ 10 ಕ್ಕೂ ಹೆಚ್ಚು ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತು 10 ದಿನಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ ನಂತರ ಪ್ರಕರಣದಲ್ಲಿ ಬಂಧನಗಳಾಗಿವೆ.


ಇದನ್ನೂ ಓದಿ: ದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...