Homeಮುಖಪುಟಕೊರೊನಾ ನಡುವೆಯೂ ಕುಂಭಮೇಳ ಮುಂದುವರಿಯುತ್ತದೆ- ಅಧಿಕಾರಿಗಳ ಹೇಳಿಕೆ

ಕೊರೊನಾ ನಡುವೆಯೂ ಕುಂಭಮೇಳ ಮುಂದುವರಿಯುತ್ತದೆ- ಅಧಿಕಾರಿಗಳ ಹೇಳಿಕೆ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವು ಏಪ್ರಿಲ್ 30 ರವರೆಗೆ ಮುಂದುವರಿಯುತ್ತದೆ. ಕೊರೊನಾ ಸೋಂಕುಗಳು ಹೆಚ್ಚುತ್ತಿರುವ ಕಾರಣ ಅದನ್ನು ಬೇಗನೆ ನಿಲ್ಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ವಾರಗಳ ಮುಂಚೆಯೇ ಕುಂಭಮೇಳವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ಎಂಬ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಬುಧವಾರ ಸಂಜೆ ವೇಳೆಗೆ ಉತ್ತರಾಖಂಡ ಸರ್ಕಾರ ಮತ್ತು ಧಾರ್ಮಿಕ ಮುಖಂಡರ ನಡುವೆ ಈ ಕಾರ್ಯಕ್ರಮವನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ನಡೆದು ವರದಿಗಳು ಬಂದಿದ್ದವು. ಆದರೆ ಇದನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

’ಇಂದು ಸಂಜೆ ಯಾವುದೇ ಚರ್ಚೆಗಳು ನಡೆದಿಲ್ಲ. ಕುಂಭಮೇಳ ನಿಗದಿಯಂತೆ ನಿರಂತರವಾಗಿ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಟೀಕೆಗಳಿಂದ ಎಚ್ಚೆತ್ತ ಸರ್ಕಾರ: ಎರಡು ವಾರಗಳು ಮುಂಚೆಯೇ ಕುಂಭಮೇಳಕ್ಕೆ ತೆರೆ ಸಾಧ್ಯತೆ

ಬುಧವಾರ ಮುಂಜಾನೆ ಕುಂಭಮೇಳದ ಮೂರನೇ ಮತ್ತು ಅತಿದೊಡ್ಡ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಸಾವಿರಾರು ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಮುಖ ಘಟನೆಗಳ ವೇಳಾಪಟ್ಟಿ ಪ್ರಕಾರ, ನಾಲ್ಕು ‘ಶಾಹಿ ಸ್ನಾನ’ ಮತ್ತು ಒಂಬತ್ತು ‘ಗಂಗಾ ಸ್ನಾನ’ಗಳು ಈ ವರ್ಷ ಹರಿದ್ವಾರದಲ್ಲಿ ನಡೆಯಲಿವೆ.

ಕುಂಭದ ಅತ್ಯಂತ ಶುಭ ದಿನಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಶಾಹಿ ಸ್ನಾನದ ಸಂದರ್ಭದಲ್ಲಿ ಮಧ್ಯಾಹ್ನ 2 ಗಂಟೆಯವರೆ 9,43,452 ಭಕ್ತರು ಪಾಲ್ಗೊಂಡಿದ್ದರು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಮಧ್ಯಾಹ್ನದ ಹೊತ್ತಿಗೆ ಸುಮಾರು 10 ಲಕ್ಷ ಜನರು ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಹರಿದ್ವಾರದಲ್ಲಿ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದ ಉತ್ತರಾಖಂಡ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಮುಂದಿನ ಮಹತ್ವದ ಕುಂಭವೇಳದ ದಿನವನ್ನು ಏಪ್ರಿಲ್ 27 ಕ್ಕೆ ನಿಗದಿಪಡಿಸಲಾಗಿದೆ.

ಈ ವರ್ಷ ಕೊರೊನಾ ಸಾಂಕ್ರಾಮಿಕದ ಮಧ್ಯೆ ಧಾರ್ಮಿಕ ಕಾರ್ಯಕ್ರಮವನ್ನು ನಿಲ್ಲಿಸದಿರುವ ನಿರ್ಧಾರದ ಬಗ್ಗೆ ರಾಷ್ಟ್ರವ್ಯಾಪಿ ಟೀಕೆಗಳು ಬಂದಿವೆ. ಕುಂಭಮೇಳದಲ್ಲಿ ಸಾಮಾನ್ಯವಾಗಿ ಗರಿಷ್ಠ ಜನಸಂದಣಿಯನ್ನು ಸೇರುತ್ತಿದೆ ಇದು ಕೊರೊನಾ ಹಾಟ್‌ಸ್ಪಾಟ್ ಆಗಲಿದೆ ಮತ್ತು ಇಲ್ಲಿ ಭಾಗವಹಿಸಿದವರು ಸೂಪರ್-ಸ್ಪ್ರೆಡರ್  ಆಗಬಹುದು ಎಂದು ವಿಮರ್ಶಕರು ಅಂದಾಜಿಸಿದ್ದಾರೆ. ಆದರೂ ಕೂಡ ಕುಂಭಮೇಳಕ್ಕೆ ತೆರೆ ಎಳೆಯಲು ಸರ್ಕಾರ ಮತ್ತು ಪ್ರಮುಖ ಅಖಾರರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...