Homeಮುಖಪುಟಹರಿದ್ವಾರ: ಮುಸ್ಲಿಂ ಯುವಕನ ಮೇಲೆ ಭೀಕರ ಹಲ್ಲೆ; ಬಂಧನ ಪ್ರಕ್ರಿಯೆ ಬಾಕಿ

ಹರಿದ್ವಾರ: ಮುಸ್ಲಿಂ ಯುವಕನ ಮೇಲೆ ಭೀಕರ ಹಲ್ಲೆ; ಬಂಧನ ಪ್ರಕ್ರಿಯೆ ಬಾಕಿ

- Advertisement -
- Advertisement -

ಹರಿದ್ವಾರ: ದ್ವೇಷದ ಅಪರಾಧಗಳ ಕರಾಳ ಛಾಯೆ ದೇಶವನ್ನು ಆವರಿಸಿರುವಾಗಲೇ, ಹರಿದ್ವಾರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಜೂನ್ 26ರ ರಾತ್ರಿ 22 ವರ್ಷದ ಮುಸ್ಲಿಂ ಯುವಕ ಮುಯೀಬ್ ಮೇಲೆ ಗುರುಕುಲ ಕಂಗ್ರಿ ವಿಶ್ವವಿದ್ಯಾಲಯದ ಗೇಟ್ ಬಳಿ 8 ರಿಂದ 10 ಜನರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದೆ. ಮುಯೀಬ್‌ನ ಮುಸ್ಲಿಂ ಗುರುತನ್ನು ಖಚಿತಪಡಿಸಿಕೊಂಡ ನಂತರವೇ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ದಾಳಿಕೋರರು ಮುಯೀಬ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಗಳಿಂದ ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಕುಟುಂಬ ಮೂಲಗಳು ಪೊಲೀಸರಿಗೆ ತಿಳಿಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮುಯೀಬ್‌ರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಲಭ್ಯತೆಯ ಕೊರತೆಯಿಂದಾಗಿ ಪ್ರಾಥಮಿಕ ಚಿಕಿತ್ಸೆ ಮಾತ್ರ ನೀಡಿ ವಾಪಸ್ ಕಳುಹಿಸಲಾಯಿತು. ಆರ್ಥಿಕ ಅಡಚಣೆಯ ನಡುವೆಯೂ ಕುಟುಂಬಸ್ಥರು ಖಾಸಗಿ ಚಿಕಿತ್ಸೆ ನೀಡಲು ಯತ್ನಿಸಿ, ಅಂತಿಮವಾಗಿ ಮನೆಗೆ ಕರೆತಂದರು. ಆರೋಗ್ಯ ಮತ್ತಷ್ಟು ಬಿಗಡಾಯಿಸಿದಾಗ, ವೈದ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆ.

ದಾಳಿಯ ಕುರಿತು ಕನ್ಖಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ, ಪೊಲೀಸರು ಅಪರಿಚಿತ ದಾಳಿಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪವನ್ ಎಂಬ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಆತನನ್ನು ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ, ಈ ಭೀಕರ ಕೃತ್ಯಕ್ಕೆ ಸಂಬಂಧಿಸಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಈ ದಾಳಿಯನ್ನು ಸ್ಥಳೀಯ ಕಾರ್ಯಕರ್ತರು ಮತ್ತು ನಾಗರಿಕ ಸಮಾಜದ ಗುಂಪುಗಳು ತೀವ್ರವಾಗಿ ಖಂಡಿಸಿವೆ. ಜನಾಧಿಕಾರ ಪಕ್ಷದ ಹೇಮಾ ಭಂಡಾರಿ ಮಾತನಾಡಿ, “ಇದು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದಾಳಿಯಲ್ಲ, ಬದಲಿಗೆ ಕಾನೂನಿನ ಆಡಳಿತ ಮತ್ತು ಭಾರತದ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಹೆಚ್ಚುತ್ತಿರುವುದು ಮತ್ತು ದಾಳಿಕೋರರಿಗೆ ಶಿಕ್ಷೆಯಾಗದಿರುವುದು ತೀವ್ರ ಕಳವಳಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಘಟನೆ ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ, ದ್ವೇಷ ಭಾಷಣ, ಪ್ರಚೋದನೆ ಮತ್ತು ಗುಂಪು ಹಲ್ಲೆಗಳ ಅಪಾಯಕಾರಿ ಪ್ರವೃತ್ತಿಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಉತ್ತರಾಖಂಡ ಸರ್ಕಾರ ಹಾಗೂ ಕಾನೂನು ಜಾರಿ ಸಂಸ್ಥೆಗಳು ತಕ್ಷಣವೇ ನಿಷ್ಪಕ್ಷಪಾತ ಕ್ರಮ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಮತ್ತು ಕೋಮು ಹಿಂಸಾಚಾರವನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸುವಂತೆ ನಾಗರಿಕ ಸಮಾಜದ ಸಂಘಟನೆಗಳು ಒತ್ತಾಯಿಸುತ್ತಿವೆ.

ಬೆಂಗಳೂರು: ಕಸದ ಲಾರಿಯಲ್ಲಿ ಮಹಿಳೆ ಶವ ಪತ್ತೆ: ಲಿವ್-ಇನ್ ಸಂಗಾತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...