Homeಚಳವಳಿಕರ್ನಾಲ್ ರೈತ ಹೋರಾಟಕ್ಕೆ ಜಯ: ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಒಪ್ಪಿದ ಸರ್ಕಾರ

ಕರ್ನಾಲ್ ರೈತ ಹೋರಾಟಕ್ಕೆ ಜಯ: ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಒಪ್ಪಿದ ಸರ್ಕಾರ

- Advertisement -
- Advertisement -

ಕರ್ನಾಲ್ ಲಾಠಿಚಾರ್ಜ್ ಪ್ರಕರಣ‌ದ ಕುರಿತು ಸಮಗ್ರ ತನಿಖೆ ಮಾಡುವುದಾಗಿ ಹರಿಯಾಣ ಸರ್ಕಾರ ಭರವಸೆ ನೀಡಿದ ಬಳಿಕ ಹರಿಯಾಣ ರೈತರು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ.

ಪೊಲೀಸ್ ಲಾಠಿಚಾರ್ಜ್ ವೇಳೆ ಸಾವಿಗೀಡಾದ ರೈತ ಸುಶೀಲ್ ಕಾಜಲ್ ಅವರ ಕುಟುಂಬದ ಇಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ಸರ್ಕಾರ ನೀಡಿದೆ.

ನಾಲ್ಕನೇ ಸುತ್ತಿನ ಸಭೆ ಶನಿವಾರ ನಡೆದಿದ್ದು, ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು. ಆಗಸ್ಟ್ 28ರಂದು ನಡೆದ ಘಟನೆ ಮತ್ತು ಇದರಲ್ಲಿ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ. ತನಿಖೆ ಮುಗಿಯುವವರೆಗೆ ಸಿನ್ಹಾ ಅವರಿಗೆ ರಜೆ ನೀಡಲಾಗುತ್ತಿದೆ.

ಸರ್ಕಾರ ಪ್ರತಿನಿಧಿಯಾಗಿ ಭಾಗವಹಿಸಿದ್ದ ಹಿರಿಯ ಐಎಎಸ್ ಅಧಿಕಾರಿ ದೇವೇಂದ್ರ ಸಿಂಗ್ ಹಾಗೂ ರೈತ ಒಕ್ಕೂಟದ ನಾಯಕ ಗುರ್‍ನಾಮ್ ಸಿಂಗ್ ಚಧುನಿ ಅವರ ನಡುವೆ ಸಭೆ ನಡೆದ ಬಳಿಕ ಇಬ್ಬರೂ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು.

ಇದನ್ನೂ ಓದಿ: ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಪ್ರತಿಭಟನಾ ನಿರತ ರೈತರ ತಲೆ ಒಡೆಯಿರಿ ಎಂದು ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ವಿವಾದಾತ್ಮಕ ಆದೇಶ ನೀಡಿದ್ದರು. ಶಾಂತಿಯುತ ಪ್ರತಿಭಟನೆಗೆ ಹಿಂಸಾಚಾರವನ್ನು ಎಳೆತರಲಾಗಿತ್ತು. ಸಿನ್ಹಾ ಆದೇಶಕ್ಕೆ ರಾಷ್ಟ್ರಮಟ್ಟದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...