Homeಕರ್ನಾಟಕಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಹೆಸರು ಬಹಿರಂಗ

ಹರ್ಷ ಕೊಲೆ ಪ್ರಕರಣದ ಸುತ್ತ ಸರ್ಕಾರ ಎಸಗುತ್ತಿರುವ ಲೋಪದೋಷಗಳ ಕುರಿತು ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಇಬ್ಬರ ಹೆಸರನ್ನು ಬಹಿರಂಗಪಡಿಸಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವರದಿಗಳ ಪ್ರಕಾರ ಐವರನ್ನೂ ವಶಕ್ಕೆ ಪಡೆದಿದ್ದು, ಇಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಲಾಗಿದೆ.

ವಾತಾವರಣ ತಿಳಿಯಾಗದ ಕಾರಣ ಬುಧವಾರ ಬೆಳಗಿನ ಜಾವ 6 ಗಂಟೆಯತನನ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ರೀತಿಯಲ್ಲಿ ಬಿದ್ದಿದ್ದಾರೆ. ನನ್ನೆಲ್ಲ ಹಿಂದೂ, ಮುಸ್ಲಿಂ ಸಹೋದರರಿಗೆ ಕೇಳಿಕೊಳ್ಳುತ್ತೇನೆ. ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ, ಇದನ್ನೆಲ್ಲ ಮಾಡಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಹಿಂಚಾಚಾರ; ಸರ್ಕಾರದ ನಡೆಗೆ ಖಂಡನೆ

ಶಿವಮೊಗ್ಗದಲ್ಲಿ ನಡೆದಿರುವ ವ್ಯಾಪಕ ಹಿಂಸಾಚಾರಕ್ಕೆ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಶವವನ್ನು ಮೆರವಣಿಗೆ ಮಾಡಿದ್ದರಿಂದ ಅಹಿತಕರ ಘಟನೆಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

“ಒಂದು ಪೊಲೀಸ್ ಠಾಣೆಯಲ್ಲಿ ಬಗೆಹರಿಯಬಹುದಾಗಿದ್ದ ಕೇಸನ್ನು ಇಡೀ ಒಂದು ಧರ್ಮಕ್ಕೆ, ರಾಜ್ಯಕ್ಕೆ ಹರಿದು ಹಂಚಿದ ಕೀರ್ತಿ ಈಶ್ವರಪ್ಪ ಮತ್ತು ಅವರ ಪಟಾಲಂಗೆ ಸೇರಬೇಕು..” ಎಂದು ಪತ್ರಕರ್ತ ವಿ.ಆರ್‌.ಕಾರ್ಪೆಂಟರ್‌ ಟೀಕಿಸಿದ್ದಾರೆ.

ಹಿರಿಯ ಪತ್ರಕರ್ತ ಆದಿತ್ಯ ಭಾರದ್ವಾಜ್ ಅವರು ಅಪರಾಧ ವರದಿಗಳ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಸರ್ಕಾರ ಮಾಡಿರುವ ಎಡವಟ್ಟಿನತ್ತ ಗಮನ ಸೆಳೆದಿದ್ದಾರೆ.

ಆದಿತ್ಯ ಅವರ ಪೋಸ್ಟ್ ಹೀಗಿದೆ:

ಹನ್ನೊಂದು ವರ್ಷಗಳ ನನ್ನ ಕ್ರೈಂ ವರದಿಗಾರಿಕೆಯ ಅನುಭವದಲ್ಲಿ ಹೇಳಬಲ್ಲೆ: ಕೋಮು ಸೂಕ್ಷ್ಮ ಪ್ರದೇಶದಲ್ಲಿ ಗಲಭೆಗೆ ಪ್ರಚೋದನೆ ನೀಡಬಲ್ಲ ಒಂದು ಸಾವು ಸಂಭಿವಿಸಿದರೆ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳುವ ಮೊದಲ ಕ್ರಮ ಮೃತದೇಹದ ಮೆರವಣಿಗೆಯನ್ನು ತಡೆಯುವುದು, ಆದಷ್ಟು ಬೇಗ ಜನ ಜಂಗುಳಿ ಇಲ್ಲದೆ ಅಂತ್ಯಸಂಸ್ಕಾರ ನಡೆಸಿಬಿಡುವುದು.

ಆದರೆ ಇವತ್ತು ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೃತದೇಹದ ಮೆರವಣಿಗೆ ಮಾಡಲಾಗಿದೆ. ಹಿರಿಯ ಸಚಿವರಾದ ಈಶ್ವರಪ್ಪನವರು, ಮತ್ತು ಶಿವಮೊಗ್ಗದ ಸಂಸದರಾದ ರಾಘವೇಂದ್ರ ಅವರೇ ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು! ಈ ಮೆರವಣಿಗೆ ಸಾಗಿದ ದಾರಿಯಲ್ಲೇ ದೊಂಬಿ ನಡೆದಿದೆ.

2002ರಲ್ಲಿ ಗೋಧ್ರಾದಲ್ಲಿ ಸತ್ತ ಕರಸೇವಕರ ಶವಗಳ ಮೆರವಣಿಗೆಯೇ ಕೋಮುಗಲಭೆಯನ್ನು ರಾಜ್ಯಕ್ಕೆಲ್ಲಾ ಹಬ್ಬಿಸಿತು. ಕಳೆದ ವರ್ಷ ಡಿಜೆ ಹಳ್ಳಿಯ ಗಲಭೆಯಲ್ಲಿ ಮೂರು ಜನ ಪೋಲೀಸ್ ಫೈರಿಂಗ್ ಅಲ್ಲಿ ಸತ್ತರು. ಮರುದಿನ ಈ ಮೂರು ಕುಟುಂಬಗಳನ್ನು ಸದ್ದುಗದ್ದಲವಿಲ್ಲದೆ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೋಲೀಸರು ಅಂತ್ಯಕ್ರಿಯೆ ನಡೆಸಿಕೊಟ್ಟರು. ಅವತ್ತು ಅಲ್ಲಿ ಆ ಮೂವರ ಮೃತದೇಹಗಳು ಡಿಜೆ ಹಳ್ಳಿಯಲ್ಲಿ ಇದ್ದಿದ್ದರೆ, ಸಾವಿರಾರು ಜನ ಸೇರಿದ್ದರೆ! ನೆನೆಸಿಕೊಳ್ಳಲೂ ಭಯ ಆಗುತ್ತೆ. ಹಾಥ್ರಸ್ ಅಲ್ಲಿ ಆ ನತದೃಷ್ಟ ಹುಡುಗಿಯ ಅಂತ್ಯಕ್ರಿಯೆಯೂ ಹೀಗೆ ಅವಸರದಲ್ಲಿ ನಡೆಯಿತು, ಆದರೆ ಅದರ ಉದ್ದೇಶ ಒಳ್ಳೆಯದಿರಲಿಲ್ಲ. ಸಾಕ್ಷಿ ನಾಶವೇ ಪ್ರಮುಖವಾಗಿತ್ತು. ಕುಟುಂಬಸ್ಥರ ಕೈಲಿ ಅಂತ್ಯಕ್ರಿಯೆ ನಡೆಸುವ ಮಾನವೀಯತೆಯೂ ಇಲ್ಲದಾಯಿತು.

ಇವತ್ತು ಮೃತದೇಹದ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟಿದ್ದು ಅಕ್ಷರಶಃ ಅಪರಾಧ. ರಾಜಕಾರಣಿಗಳು ನೂರು ಹೇಳ್ತಾರೆ. ಆದರೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆಗೆ ಜವಾಬ್ದಾರರಾದ ಪೋಲೀಸ್ ಅಧಿಕಾರಿಗಳು ವೃತ್ತಿಪರರಾಗಿದ್ದರೆ ಇದಕ್ಕೆ ಅವಕಾಶ ಮಾಡಿಕೊಡುತ್ತಿರಲಿಲ್ಲ.

ಇನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೊಂದು ಕಿವಿ ಮಾತು. ಆಡಳಿತದ ಜವಾಬ್ದಾರಿ ಹೊತ್ತವರು ಎಲ್ಲಿ ರಾಜಕಾರಣವನ್ನು ನಿಲ್ಲಿಸಿಕೊಂಡು, ಆಡಳಿತಗಾರರಾಗಬೇಕು ಎಂಬ ಸ್ಪಷ್ಟತೆ ಹೊಂದಿರಬೇಕು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಕರ್ನಾಟಕ by and large ಉತ್ತಮವಾಗಿದೆ. ಈಗಾಗಲೇ ನಮ್ಮನ್ನು ದಕ್ಷಿಣದ ಉತ್ತರಪ್ರದೇಶ ಎಂದು ಕರೆಯುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯಲ್ಲೂ ನಾವು ಉತ್ತರಪ್ರದೇಶ ಆಗುವುದು ಬೇಡ. ಶಾಲೆ ಕಾಲೇಜುಗಳ ಕ್ಯಾಂಪಸ್ಸುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದೆ ರಾಜ್ಯಾದ್ಯಂತ ರಜೆ ಘೋಷಿಸಿದಾಗಲೇ ಆಡಳಿತ ನಡೆಸುವವರಿಗೆ ಲಜ್ಜೆ ಮೂಡಬೇಕಿತ್ತು. ಈಗ ಶಿವಮೊಗ್ಗದ ಗಲಭೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗದ ಯಾವುದೇ ಸರ್ಕಾರವನ್ನು, ಪಕ್ಷಾತೀತವಾಗಿ, ನಮ್ಮ ನಾಡು ತಿರಸ್ಕರಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ಗುರುತಿಸಬೇಕು.

ಸಂಘಪರಿವಾರದಿಂದ ಹೊರಗೆ ಬಂದು, ಸಂಘಪರಿವಾರದ ಹಿಡನ್‌ ಅಜೆಂಡಾಗಳನ್ನು ಬಿಚ್ಚಿಡುತ್ತಿದ್ದ ದಿವಂಗತ ಮಹೇಂದ್ರಕುಮಾರ್‌ ಅವರ ಹಳೆಯ ವಿಡಿಯೊಗಳನ್ನು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...