Homeಅಂತರಾಷ್ಟ್ರೀಯಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

ಅನುದಾನ ತಡೆ ಹಿಡಿದ ಟ್ರಂಪ್ ಆಡಳಿತ: ಕಾನೂನು ಸಮರಕ್ಕೆ ಮುಂದಾದ ಹಾರ್ವರ್ಡ್‌ ವಿವಿ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ್ದಕ್ಕೆ 2.2 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಅನುದಾನವನ್ನು ತಡೆ ಹಿಡಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ಹಾರ್ವರ್ಡ್‌ ವಿಶ್ವ ವಿದ್ಯಾಲಯ ಪ್ರಕಟಿಸಿದೆ.

ಏಪ್ರಿಲ್ 11ರಂದು ಹಾರ್ವರ್ಡ್‌ಗೆ ಬರೆದ ಪತ್ರದಲ್ಲಿ, ಟ್ರಂಪ್ ಆಡಳಿತವು ವಿಶ್ವವಿದ್ಯಾಲಯದ ಚಟುವಟಿಕೆಗಳಿಗೆ ಮೂಗುದಾರ ಹಾಕುವ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಏಪ್ರಿಲ್ 14ರಂದು ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ವಿಶ್ವವಿದ್ಯಾನಿಲಯವು ಸರ್ಕಾರ ಬೇಡಿಕೆಗಳಿಗೆ ಮಣಿಯುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

“ವಿಶ್ವ ವಿದ್ಯಾಲಯದ ವೈದ್ಯಕೀಯ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ವಿಭಾಗಗಳು ಮತ್ತು ಯಹೂದಿ ವಿರೋಧಿ ಮನಸ್ಥಿತಿಗಳ ನಡುವೆ ಸಂಪರ್ಕ ಇರುವುದನ್ನು ತೋರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ. ಈ ವಿಭಾಗಗಳು ಅಮೆರಿಕನ್ನರ ಜೀವಗಳನ್ನು ಉಳಿಸುವ, ಅಮೆರಿಕನ್ನರ ಯಶಸ್ಸನ್ನು ಬೆಳೆಸುವ, ಅಮೆರಿಕನ್ ಭದ್ರತೆಯನ್ನು ಕಾಪಾಡುವ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕನಾಗಿ ಅಮೆರಿಕದ ಸ್ಥಾನವನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿವೆ” ಎಂದು ಬೋಸ್ಟನ್ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಲಾದ ಮೊಕದ್ದಮೆಯಲ್ಲಿ ಹಾರ್ವರ್ಡ್‌ ಹೇಳಿದೆ.

“ಹಾರ್ವರ್ಡ್‌ನ ಸಂಶೋಧನಾ ಕಾರ್ಯಕ್ರಮಗಳು, ಆ ಸಂಶೋಧನೆಯ ಫಲಾನುಭವಿಗಳು ಮತ್ತು ಅಮೆರಿಕದ ನಾವೀನ್ಯತೆ ಮತ್ತು ಪ್ರಗತಿಯನ್ನು ಹೆಚ್ಚಿಸುವ ರಾಷ್ಟ್ರೀಯ ಹಿತಾಸಕ್ತಿಯ ಶತಕೋಟಿ ಡಾಲರ್‌ಗಳ ಫೆಡರಲ್ ಸಂಶೋಧನಾ ನಿಧಿಯನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಉಂಟಾಗುವ ಗಮನಾರ್ಹ ಪರಿಣಾಮಗಳನ್ನು ಸರ್ಕಾರ ಒಪ್ಪಿಕೊಂಡಿಲ್ಲ” ಎಂದು ಆರೋಪಿಸಿದೆ.

ಅನುದಾ ಸ್ಥಗಿತವನ್ನು “ಅನಿಯಂತ್ರಿತ ಮತ್ತು ವಿಚಿತ್ರವಾದದ್ದು” ಎಂದು ಕರೆದಿರುವ ಹಾರ್ವರ್ಡ್‌, ಇದು ನಾಗರಿಕ ಹಕ್ಕುಗಳ ಕಾಯ್ದೆಯ ಶೀರ್ಷಿಕೆ VIರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ವಿವಿ ಆರೋಪಕ್ಕೆ ಸರ್ಕಾರ ತಿರುಗೇಟು ಕೊಟ್ಟಿದೆ.

“ಹಾರ್ವರ್ಡ್‌ನಂತಹ ಸಂಸ್ಥೆಗಳಿಗೆ ಫೆಡರಲ್ ಅನುದಾನ ಕೊನೆಗೊಳ್ಳುತ್ತಿದೆ. ಈ ಸಂಸ್ಥೆಗಳು ಹೆಣಗಾಡುತ್ತಿರುವ ಅಮೆರಿಕನ್ನರ ತೆರಿಗೆ ಹಣದಿಂದ ತಮ್ಮ ಅಧಿಕಾರಿಗಳನ್ನು ಶ್ರೀಮಂತಗೊಳಿಸುತ್ತಿವೆ.
ತೆರಿಗೆದಾರರ ನಿಧಿಗಳು ಒಂದು ಸವಲತ್ತು. ಆ ಸವಲತ್ತನ್ನು ಪಡೆಯಲು ಅಗತ್ಯವಾದ ಮೂಲಭೂತ ಷರತ್ತುಗಳನ್ನು ಪೂರೈಸಲು ಹಾರ್ವರ್ಡ್ ವಿಫಲವಾಗಿದೆ” ಎಂದು ಶ್ವೇತಭವನದ ವಕ್ತಾರ ಹ್ಯಾರಿಸನ್ ಫೀಲ್ಡ್ಸ್ ಸೋಮವಾರ ಹೇಳಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...