Homeಮುಖಪುಟಹರಿಯಾಣ ಫಲಿತಾಂಶ| ವೆಬ್‌ಸೈಟ್‌ನಲ್ಲಿ ತಡವಾಗಿ ಮಾಹಿತಿ ಕೊಟ್ಟ ಚು. ಆಯೋಗ : ಜೈರಾಮ್‌ ರಮೇಶ್

ಹರಿಯಾಣ ಫಲಿತಾಂಶ| ವೆಬ್‌ಸೈಟ್‌ನಲ್ಲಿ ತಡವಾಗಿ ಮಾಹಿತಿ ಕೊಟ್ಟ ಚು. ಆಯೋಗ : ಜೈರಾಮ್‌ ರಮೇಶ್

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ತನ್ನ ವೆಬ್‌ಸೈಟ್‌ನಲ್ಲಿ ಬಹಳ ತಡವಾಗಿ ಅಪ್ಡೇಡ್ ಮಾಡಿದ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪತ್ರ ಬರೆದಿದ್ದಾರೆ.

ಬೆಳಿಗ್ಗೆ 9ರಿಂದ 11 ಗಂಟೆಯ ನಡುವೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಫಲಿತಾಂಶದ ಮಾಹಿತಿ ಬಹಳ ತಡವಾಗಿ ನೀಡಲಾಗಿದೆ ಜೈರಾಮ್ ರಮೇಶ್ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಲೋಕಸಭಾ ಚುನಾವಣೆಯಂತೆಯೇ, ಹರಿಯಾಣ ಚುನಾವಣೆಯಲ್ಲಿ ನಾವು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಚುನಾವಣಾ ಫಲಿತಾಂಶಗಳ ಕ್ಷಣ ಕ್ಷಣದ ಅಂಕಿ-ಅಂಶಗಳ ಅಪ್ಲೋಡ್ ಮಾಡುವ ಕಾರ್ಯದಲ್ಲಿ ನಿಧಾನಗತಿಯನ್ನು ನೋಡಿದ್ದೇವೆ. ದಾರಿ ತಪ್ಪಿಸುವ ರೀತಿ ಮಾಹಿತಿ ಅಪ್ಲೋಡ್ ಮಾಡಲು ಬಿಜೆಪಿ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸುಳ್ಳು ಮತ್ತು ದುರುದ್ದೇಶಪೂರಿತ ಸುದ್ದಿಗಳನ್ನು ತಕ್ಷಣವೇ ಎದುರಿಸಲು ವೆಬ್‌ಸೈಟ್‌ನಲ್ಲಿ ನಿಜವಾದ ಮತ್ತು ನಿಖರವಾದ ಅಂಕಿ ಅಂಶಗಳನ್ನು ಅಪ್ಲೋಡ್ ಮಾಡಲು ಅಧಿಕಾರಿಗಳಿಗೆ ತಕ್ಷಣವೇ ನಿರ್ದೇಶನಗಳನ್ನು ನೀಡುವಂತೆ ಜೈರಾಮ್ ರಮೇಶ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಇಂದು (ಅ.8) ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾದಾಗ ಹರಿಯಾಣದಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿತ್ತು. ಆದರೆ, ಸುಮಾರು 11 ಗಂಟೆಗೆ ಏಕಾಏಕಿ ಟ್ರೆಂಡ್ ಬದಲಾಗಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

ಈ ಸುದ್ದಿ ಬರೆಯುವ ಹೊತ್ತಿಗೆ (ಮಧ್ಯಾಹ್ನ 2 ಗಂಟೆ) ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿ ಪ್ರಕಾರ, ಬಿಜೆಪಿ 48, ಕಾಂಗ್ರೆಸ್ 37 ಸ್ವತಂತ್ರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರು.

ಇದನ್ನೂ ಓದಿ : Haryana Assembly Elections 2024 | ಹರಿಯಾಣ ಚುನಾವಣಾ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...