Homeಮುಖಪುಟಹರಿಯಾಣ ವಿಧಾನಸಭೆ: ಅವಿಶ್ವಾಸ ನಿರ್ಣಯ ಗೆದ್ದ ಬಿಜೆಪಿ-ಜೆಜೆಪಿ ಮೈತ್ರಿ

ಹರಿಯಾಣ ವಿಧಾನಸಭೆ: ಅವಿಶ್ವಾಸ ನಿರ್ಣಯ ಗೆದ್ದ ಬಿಜೆಪಿ-ಜೆಜೆಪಿ ಮೈತ್ರಿ

- Advertisement -
- Advertisement -

ಹರಿಯಾಣ ವಿಧಾನಸಭೆಯಲ್ಲಿ ಇಂದು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಗೆದ್ದುಕೊಂಡಿದೆ. ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ಪರ 55 ಮತಗಳು ಚಲಾವಣೆಯಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಪರ 32 ಮತಗಳು ಬಿದ್ದಿವೆ.

ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸರ್ಕಾರದ ಬೆಂಬಲವನ್ನು ಹಿಂಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ವಿಧಾನಸಭೆಯಲ್ಲಿ ಇಂದು ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು.

90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಗೆ 40 ಸ್ಥಾನಗಳಿವೆ. ಐದು ಸ್ವತಂತ್ರ ಶಾಸಕರ ಜೊತೆಗೆ 10 ಜೆಜೆಪಿ ಶಾಸಕರ ಬೆಂಬಲವೂ ಇದೆ. ಕಾಂಗ್ರೆಸ್ 31 ಸ್ಥಾನಗಳನ್ನು ಹೊಂದಿದೆ. ವಿಧಾನ ಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಬಹುಮತವು 45 ಸ್ಥಾನಗಳಲ್ಲಿದೆ ಎಂದು ತಿಳಿದು ಬಂದಿದೆ.

“ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಜನಸಾಮಾನ್ಯರ ವಿಶ್ವಾಸವನ್ನು ಗೆಲ್ಲಲು ನಾವು ಈ ಅವಕಾಶವನ್ನು ಬಳಸಿಕೊಳ್ಳುತ್ತೇವೆ” ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದರು.


ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...