Homeಮುಖಪುಟಹರಿಯಾಣ ವಿಧಾನಸಭೆ ಕಟ್ಟಡಕ್ಕೆ ಒಂದಿಚು ಭೂಮಿ ಕೊಡಲ್ಲ: ಪಂಜಾಬ್ ಎಎಪಿ

ಹರಿಯಾಣ ವಿಧಾನಸಭೆ ಕಟ್ಟಡಕ್ಕೆ ಒಂದಿಚು ಭೂಮಿ ಕೊಡಲ್ಲ: ಪಂಜಾಬ್ ಎಎಪಿ

- Advertisement -
- Advertisement -

ಹರಿಯಾಣದ ವಿಧಾನಸಭೆ ಕಟ್ಟವನ್ನು ಚಂಡೀಗಢದಲ್ಲಿ ನಿರ್ಮಿಸಲು ಹರಿಯಾಣಕ್ಕೆ ಯಾವುದೇ ಭೂಮಿಯನ್ನು ನೀಡಬಾರದು ಎಂದು ಆಮ್ ಆದ್ಮಿ ಪಕ್ಷವು ಶುಕ್ರವಾರ ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರಿಗೆ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ರಾಜ್ಯಪಾಲ ಕಟಾರಿಯಾ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ನಿರ್ವಾಹಕರಾಗಿದ್ದು, ಈ ಪ್ರದೇಶವು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳೆರಡರ ಸಾಮಾನ್ಯ ರಾಜಧಾನಿಯಾಗಿ ಕಾರ್ಯನಿರ್ವಹಿಸುತ್ತದೆ. ಹರಿಯಾಣ ವಿಧಾನಸಭೆ

“ಚಂಡೀಗಢವು ಪಂಜಾಬ್‌ಗೆ ಸೇರಿದ್ದು, ನಾವು ಒಂದು ಇಂಚು ಭೂಮಿಯನ್ನು ಸಹ ನೀಡಲು ಹೋಗುವುದಿಲ್ಲ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಪಂಜಾಬ್ ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು, ತಮ್ಮ ಪಕ್ಷದ ನಿಯೋಗವು ರಾಜ್ಯಪಾಲ ಕಟಾರಿಯಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ. ಚಂಡೀಗಢದ ಮೇಲೆ ಪಂಜಾಬ್‌ಗೆ ಹಕ್ಕಿದೆ ಮತ್ತು ನಾವು ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಜಾಬ್ ಆಮ್ ಆದ್ಮಿ ಪಕ್ಷದ ಆಡಳಿತದಲ್ಲಿದ್ದರೆ, ಹರಿಯಾಣದಲ್ಲಿ ಬಿಜೆಪಿ ಆಡಳಿತವಿದೆ. ಪ್ರಸ್ತುತ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಪ್ರತ್ಯೇಕ ವಿಧಾನಸಭೆಗಳು ಚಂಡೀಗಢದ ಒಂದೇ ಕಟ್ಟಡ ಸಂಕೀರ್ಣದಲ್ಲಿವೆ.

ಚಂಡೀಗಢದಲ್ಲಿ 10 ಎಕರೆ ಭೂಮಿಯನ್ನು ಹರಿಯಾಣಕ್ಕೆ ಅಸೆಂಬ್ಲಿ ಕಟ್ಟಡ ನಿರ್ಮಾಣಕ್ಕಾಗಿ ಕೇಂದ್ರವು ಮಂಜೂರು ಮಾಡಿದ ನಂತರ ಶುಕ್ರವಾರ ಚೀಮಾ ಅವರ ಹೇಳಿಕೆ ನೀಡಿದ್ದಾರೆ. ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮತ್ತು ವಿರೋಧ ಪಕ್ಷಗಳು ಈ ನಿರ್ಧಾರವನ್ನು ಟೀಕಿಸಿವೆ.

“ನಾವು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೇವೆ” ಎಂದು ಚೀಮಾ ತಿಳಿಸಿದ್ದು, ಹರ್ಯಾಣಕ್ಕೆ ಚಂಡೀಗಢದಲ್ಲಿ ಯಾವುದೇ ಭೂಮಿಯನ್ನು ಮಂಜೂರು ಮಾಡಬಾರದು ಎಂದು ನಾವು ಹೇಳಿದ್ದೇವೆ ಎಂದು ಅವರು ಹೇಳಿದ್ದಾರೆ. ಹರ್ಯಾಣವನ್ನು ಪ್ರತ್ಯೇಕ ರಾಜ್ಯವಾಗಿ ರಚಿಸಿದಾಗ ಅದರ ರಾಜಧಾನಿ ಮತ್ತು ವಿಧಾನಸಭೆಯನ್ನು ಮಾಡುವುದಾಗಿ ಸ್ಪಷ್ಟಪಡಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. 1966 ರಲ್ಲಿ ಹರಿಯಾಣವನ್ನು ಪ್ರತ್ಯೇಕ ರಾಜ್ಯವಾಗಿ ರಚನೆ ಮಾಡಲಾಯಿತು.

“ಆರು ದಶಕಗಳಿಂದ, ಹರಿಯಾಣವು ತನ್ನ ರಾಜಧಾನಿಯನ್ನು ಹೊಂದಲು ಅಥವಾ ರಾಜ್ಯದಲ್ಲಿ ಅದರ ವಿಧಾನಸಭೆಯನ್ನು ನಿರ್ಮಿಸಲು ವಿಫಲವಾಗಿದೆ. ಈಗ ಅವರು ಪಂಜಾಬ್‌ನ ರಾಜಧಾನಿಯ ಮೇಲೆ ಹಕ್ಕು ಸಾಧಿಸುತ್ತಿದ್ದಾರೆ” ಎಂದು ಸಚಿವ ಚೀಮಾ ಅವರು ಹೇಳಿದ್ದಾರೆ. ಹರಿಯಾಣವು ಪಂಚಕುಲದಲ್ಲಿ ತನ್ನ ರಾಜಧಾನಿಯನ್ನು ಏಕೆ ನಿರ್ಮಿಸಲು ಸಾಧ್ಯವಾಗಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

“ಪಂಚಕುಲ ಪ್ರದೇಶವು ಚಂಡೀಗಢದಲ್ಲಿ ಅವರು ವಿಧಾನಸಭಾ ಕಟ್ಟಡಕ್ಕಾಗಿ ಭೂಮಿಯನ್ನು ಹುಡುಕುತ್ತಿರುವ ಸ್ಥಳದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಶುಕ್ರವಾರ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರು ಆಮ್ ಆದ್ಮಿ ಪಕ್ಷವನ್ನು ಟೀಕಿಸಿದ್ದು, “ಕೊಳಕು ರಾಜಕೀಯ”ದಲ್ಲಿ  ಪಾಲ್ಗೊಳ್ಳದಂತೆ ಕೇಳಿಕೊಂಡಿದ್ದಾರೆ. “ಚಂಡೀಗಢ ಹರಿಯಾಣ ಮತ್ತು ಪಂಜಾಬ್‌ನ ಭಾಗವಾಗಿದೆ” ಎಂದು ಪ್ರತಿಪಾದಿಸಿದ ಸೈನಿ, “ಹರ್ಯಾಣ ರಾಜ್ಯವು ಪಂಜಾಬ್‌ನ ಕಿರಿಯ ಸಹೋದರ ಎಂದು ನಾನು ಪಂಜಾಬ್‌ನ ನಾಯಕರಿಗೆ ಹೇಳಲು ಬಯಸುತ್ತೇನೆ. ಅವರು ಸಹೋದರತ್ವವನ್ನು ಏಕೆ ಹಾಳು ಮಾಡುತ್ತಿದ್ದಾರೆ? ಚಂಡೀಗಢದ ಮೇಲೆ ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಳ್ಳಸಾಗಣೆ ಸಂತ್ರಸ್ತರಿಗೆ ಪುನರ್ವಸತಿ ಚೌಕಟ್ಟನ್ನು ರಚಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

ಇದನ್ನೂ ಓದಿ: ನಟ ದರ್ಶನ್‌ಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬೆಂಗಳೂರು ಪೊಲೀಸ್ ಕಮಿಷನರ್

ನಟ ದರ್ಶನ್‌ಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬೆಂಗಳೂರು ಪೊಲೀಸ್ ಕಮಿಷನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...