Homeಚಳವಳಿಹರಿಯಾಣ | ರೈತರ ಮೇಲೆ ಅಶ್ರುವಾಯು ದಾಳಿ; ಇಂಟರ್‌ನೆಟ್ ಬಂದ್; ಸೆಕ್ಷನ್ ಜಾರಿ

ಹರಿಯಾಣ | ರೈತರ ಮೇಲೆ ಅಶ್ರುವಾಯು ದಾಳಿ; ಇಂಟರ್‌ನೆಟ್ ಬಂದ್; ಸೆಕ್ಷನ್ ಜಾರಿ

- Advertisement -
- Advertisement -

ಹರಿಯಾಣದ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಒಂಬತ್ತು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಾ ಬಿಡಾರ ಹೂಡಿದ್ದ ರೈತರ ಮೇಲೆ ಹರಿಯಾಣ ಪೊಲೀಸರು ಶುಕ್ರವಾರ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನೆಯನ್ನು ಪುನರಾರಂಭಿಸಿರುವ ರೈತರು ದೆಹಲಿಯತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿರುವಾಗ ಬ್ಯಾರಿಕೇಡ್‌ಗಳನ್ನು ಮುರಿದಿದ್ದಾರೆ.

ಪ್ರತಿಭಟನೆ ವೇಳೆ ಒಬ್ಬ ರೈತನನ್ನು ಬಂಧಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಎಂಎಸ್‌ಪಿಗೆ ಕಾನೂನು ಖಾತರಿಯ ಕುರಿತು ರೈತರೊಂದಿಗೆ ನಾಲ್ಕು ಸುತ್ತಿನ ಮಾತುಕತೆ ನಡೆಸಿದ ಸರ್ಕಾರ, ಅವರೊಂದಿಗೆ ಚರ್ಚೆ ನಡೆಸಲು ಮುಕ್ತವಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನಾ ನಿರತ ರೈತರು ಮುಖ್ಯವಾಗಿ ಬೆಳೆಗಳಿಗೆ ಎಂಎಸ್‌ಪಿಗೆ ಕಾನೂನು ಖಾತರಿಯನ್ನು ಬಯಸುತ್ತಿದ್ದಾರೆ. ಈ ಹಿಂದೆ ರೈತರು ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು. ಆದಾಗ್ಯೂ, ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶಂಭು ಮತ್ತು ಖಾನೌರಿಯಲ್ಲಿ ಅವರನ್ನು ಭದ್ರತಾ ಪಡೆಗಳು ತಡೆದವು. ರೈತರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಅಡಿಯಲ್ಲಿ, ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

ರೈತ ಮುಖಂಡರಾದ ಸುರ್ಜಿತ್ ಸಿಂಗ್ ಫೂಲ್, ಸತ್ನಾಮ್ ಸಿಂಗ್ ಪನ್ನು, ಸವೀಂದರ್ ಸಿಂಗ್ ಚೌತಾಲಾ, ಬಲ್ಜಿಂದರ್ ಸಿಂಗ್ ಚಡಿಯಾಲ ಮತ್ತು ಮಂಜಿತ್ ಸಿಂಗ್ ನೇತೃತ್ವದಲ್ಲಿ 101 ರೈತರ ಗುಂಪು ಮಧ್ಯಾಹ್ನ 1 ಗಂಟೆಗೆ ಸಂಸತ್ತಿನತ್ತ ಪಾದಯಾತ್ರೆ ಆರಂಭಿಸಿದೆ. ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಪ್ರತಿಭಟನಾ ಸ್ಥಳದಲ್ಲಿದ್ದು, ರಾಷ್ಟ್ರ ರಾಜಧಾನಿಯತ್ತ ಮೆರವಣಿಗೆ ನಡೆಸಿದ 101 ರೈತರಲ್ಲಿ ಇರಲಿಲ್ಲ.

ಪ್ರತಿಭಟನಾ ನಿರತ ರೈತರು, ತ್ರಿವರ್ಣ ಧ್ವಜಗಳನ್ನು ಬೀಸುತ್ತಾ ಬ್ಯಾರಿಕೇಡಿಂಗ್‌ನ ಒಂದು ಪದರವನ್ನು ಒಡೆದಿದ್ದು, ಕಾಂಕ್ರೀಟ್ ಬ್ಲಾಕ್‌ಗಳು, ಕಬ್ಬಿಣದ ಮೊಳೆಗಳು ಮತ್ತು ಮುಳ್ಳುತಂತಿಗಳ ಭಾರೀ ಭದ್ರತೆ ಅವರು ಮತ್ತಷ್ಟು ಚಲಿಸದಂತೆ ತಡೆಯಿತು.

ಅಂಬಾಲದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ರೈತ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಅಂಬಾಲಾದಲ್ಲಿ ಡಿಸೆಂಬರ್ 9 ರವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ರೈತರನ್ನು ನಿಭಾಯಿಸಲು ಸಾಕಷ್ಟು ಪಡೆಗಳಿವೆ ಎಂದು ಪೊಲೀಸರು ಹೇಳಿದ್ದು, ಭಾರೀ ಬ್ಯಾರಿಕೇಡ್ ಅಳವಡಿಸಲಾಗಿದೆ. ಈ ನಡುವೆ ಅಂಬಾಲ ಜಿಲ್ಲಾಡಳಿತವು ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಕೂಟಗಳನ್ನು ನಿಷೇಧ ಹೇಳಿದೆ.

ರೈತ ಮುಖಂಡ ಪಂಧೇರ್ ಮಾತನಾಡಿ, ರೈತರು ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಹೋಗುವ ಬದಲು ಕಾಲ್ನಡಿಗೆಯಲ್ಲಿ ಮೆರವಣಿಗೆ ಮಾಡುತ್ತಾರೆ. ನಾವು ಕಳೆದ ಎಂಟು ತಿಂಗಳಿಂದ ಇಲ್ಲಿ ಕುಳಿತಿದ್ದೇವೆ. ರೈತರ ಆಂದೋಲನಕ್ಕೆ ಖಾಪ್ ಪಂಚಾಯತ್‌ಗಳು ಮತ್ತು ವ್ಯಾಪಾರಿ ಸಮುದಾಯದ ಸದಸ್ಯರಿಂದ ಬೆಂಬಲ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...