ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರನ್ನು ಗೋವಾದಲ್ಲಿ ಅವರ ಇಬ್ಬರು ಸಹಚರರು ಕೊಲೆ ಮಾಡಿದ್ದಾರೆ ಎಂದು ಅವರ ಸಹೋದರ ಪೊಲೀಸರಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್ ಮತ್ತು ಇತರ ಪ್ರಮುಖ ವಸ್ತುಗಳು ನಾಪತ್ತೆಯಾಗಿವೆ ಎಂದು ಅವರು ಆರೋಪಿಸಿದ್ದಾರೆ.
“ಫೋಗಟ್ ಅವರು ತಮ್ಮ ಸಾವಿಗೂ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಈ ಸಮಯದಲ್ಲಿ ಅವರು ಗೊಂದಲದಲ್ಲಿದ್ದು, ತನ್ನ ಇಬ್ಬರು ಸಹೋದ್ಯೋಗಿಗಳ ಬಗ್ಗೆ ದೂರಿಕೊಂಡಿದ್ದರು” ಎಂದು ಅವರ ಸಹೋದರ ರಿಂಕು ಧಾಕಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಟಿಕ್‌ಟಾಕ್‌ನಲ್ಲಿ ಖ್ಯಾತಿ ಪಡೆದ ಹರಿಯಾಣದ ಹಿಸಾರ್‌ನ ಬಿಜೆಪಿ ನಾಯಕಿ ಸೋನಾಲಿ ಫೋಗಟ್ (42) ಅವರು ಮಂಗಳವಾರ ಬೆಳಿಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ “ಮೃತಪಟ್ಟಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್ ಪಡೆದು ಅಕ್ರಮ ಬಾರ್ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ
ಸಾವಿನ ಕುರಿತು ಗೋವಾದ ಅಂಜುನ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಫೋಗಟ್ ಅವರ ಕುಟುಂಬ ಸದಸ್ಯರು ಮಂಗಳವಾರ ರಾತ್ರಿ ಗೋವಾಕ್ಕೆ ಆಗಮಿಸಿದ್ದಾರೆ. ಮೃತ ನಾಯಕಿಯ ಸಹೋದರ ರಿಂಕು ಧಾಕಾ ಅವರು ಗೋವಾದಲ್ಲಿ ಅಂಜುನಾ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಫೋಗಟ್‌ನ ಇಬ್ಬರು ಸಹಚರರು ಗೋವಾದಲ್ಲಿ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
“ಫೋಗಟ್ ತಮ್ಮ ತಾಯಿಯೊಂದಿಗೆ ಮಾತನಾಡಿದ ನಂತರ ಆರೋಪಿಗಳಿಂದ ದೂರ ಉಳಿಯಲು ಮತ್ತು ಮರುದಿನವೆ ಹಿಸಾರ್‌ಗೆ ಹಿಂತಿರುಗಿ ಬರಲು ನಾವು ಅವಳನ್ನು ಕೇಳಿದ್ದೆವು” ಎಂದು ರಿಂಕು ಧಾಕಾ ಅಂಜುನಾ ಪೊಲೀಸ್ ಠಾಣೆಯ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸದಿದ್ದರೆ, ಗೋವಾದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಾವು ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ
ಮರಣೋತ್ತರ ಪರೀಕ್ಷೆಯನ್ನು ದೆಹಲಿಯ ಆಲ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಅಥವಾ ಜೈಪುರದ ಏಮ್ಸ್‌ನಲ್ಲಿ ನಡೆಸಲು ಕುಟುಂಬ ಸದಸ್ಯರು ಆದ್ಯತೆ ನೀಡುತ್ತಾರೆ ಎಂದು ರಿಂಕು ಧಾಕಾ ಹೇಳಿದ್ದಾರೆ. “ಅವರು ಕಳೆದ 15 ವರ್ಷಗಳಿಂದ ಬಿಜೆಪಿ ನಾಯಕಿಯಾಗಿದ್ದು, ಅವರಿಗೆ ನ್ಯಾಯ ದೊರಕಿಸಲು ಸಹಾಯ ಮಾಡುವಂತೆ ನಾವು ಪ್ರಧಾನಿಯವರಲ್ಲಿ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.


