Homeಮುಖಪುಟಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಐಎನ್‌ಎಲ್‌ಡಿಯ ಅಭಯ್ ಸಿಂಗ್ ಚೌಟಾಲಾ ಉಪಚುನಾವಣೆಯಲ್ಲಿ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಐಎನ್‌ಎಲ್‌ಡಿಯ ಏಕೈಕ ಶಾಸಕ ಮತ್ತು ಜೆಜೆಪಿ ನಾಯಕ ಅಜಯ್ ಚೌಟಾಲಾ ಅವರ ಸಹೋದರರಾಗಿದ್ದ ಅಭಯ್ ಸಿಂಗ್ ಚೌಟಾಲಾ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಉಪಚುನಾವಣೆ ಘೋಷಣೆಯಾಗಿತ್ತು. ಅ.30 ರಂದು ಮತದಾನ ನಡೆದಿತ್ತು.

ಐಎನ್‌ಎಲ್‌ಡಿ (ಇಂಡಿಯನ್ ನ್ಯಾಷನಲ್ ಲೋಕದಳ) ನಾಯಕ ಅಭಯ್ ಸಿಂಗ್ ಚೌಟಾಲಾ 65,897 ಮತಗಳನ್ನು ಪಡೆದಿದ್ದಾರೆ. ಆಡಳಿತಾರೂಢ ಬಿಜೆಪಿಯ ಗೋವಿಂದ್ ಕಂದಾ 59,189ಮತಗಳನ್ನು ಪಡೆದಿದ್ದಾರೆ. ಅಭಯ್ ಸಿಂಗ್ ಚೌಟಾಲಾ 6,708 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ಸುದ್ದಿಗಾರರೊಂದಿಗೆ ಮಾತನಾಡಿದ ಅಭಯ್ ಸಿಂಗ್ ಚೌಟಾಲಾ, ’ಮತ ಪಡೆಯಲು ಬಿಜೆಪಿ ಹಣ ಹಂಚಿದ್ದಾರೆ. ಇಲ್ಲದಿದ್ದರೆ 30,000 ಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ನಿರೀಕ್ಷೆಯಿತ್ತು’ ಎಂದು ಹೇಳಿದ್ದರು.

“ಮುಖ್ಯಮಂತ್ರಿ ಉಪಚುನಾವಣೆ ಫಲಿತಾಂಶದ ಬಳಿಕ ರಾಜೀನಾಮೆ ನೀಡಬೇಕು. ಕುದುರೆ ವ್ಯಾಪಾರ ಇಲ್ಲದಿದ್ದರೆ ನನ್ನ ಗೆಲುವಿನ ಅಂತರ 30,000 ಮೀರುತ್ತಿತ್ತು. ಮತಕ್ಕಾಗಿ ಕೋಟಿಗಳನ್ನು ಹಣ ಹಂಚಲಾಗಿದೆ ಮತ್ತು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಲಾಗಿದೆ. ಇದನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಆರೋಪಿಸಿದ್ದರು.

ಮುಂದುವರಿದು,  “ಇದು ನನ್ನ ಗೆಲುವಲ್ಲ. ಇದು ರೈತರ ಗೆಲುವು” ಎಂದು ಹೇಳಿದ್ದಾರೆ.

ಎಲ್ಲೆನಾಬಾದ್‌ನಲ್ಲಿ ಬಿಜೆಪಿ ಗೋವಿಂದ್ ಕಂದಾ ಅವರಿಗೆ ಟಿಕೆಟ್ ನೀಡಿತ್ತು. ಸಿರ್ಸಾದಲ್ಲಿ ಬಿಜೆಪಿ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿ, ರಸ್ತೆಗಳಲ್ಲಿ ಪ್ರಚಾರಕ್ಕೆ ಹಾಕಿದ್ದ ಬಿಜೆಪಿ ಧ್ವಜಗಳನ್ನು ಕಿತ್ತು ಒಂದೆಡೆ ಹಾಕಿ ಬೆಂಕಿ ಹಚ್ಚಲಾಗಿತ್ತು.

ಬಿಜೆಪಿ ಅಭ್ಯರ್ಥಿ ಗೋವಿಂದ್ ಕಂದಾ ನಾಮಪತ್ರ ಸಲ್ಲಿಕೆಗಾಗಿ ರಸ್ತೆಯುದ್ದಕ್ಕೂ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ಕಿತ್ತು, ಒಂದು ಕಡೆ ಗುಡ್ಡೆ ಹಾಕಿದ ಪ್ರತಿಭಟನಾ ನಿರತ ರೈತರು ಆಕ್ರೋಶದಲ್ಲಿ ಬೆಂಕಿ ಹಾಕಿದ್ದರು. ಪೊಲೀಸ್ ರಕ್ಷಣೆಯಲ್ಲಿ ಹೋಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು.

 


ಇದನ್ನೂ ಓದಿ: ಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...