Homeಮುಖಪುಟಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

ಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

- Advertisement -
- Advertisement -

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ಸುಟ್ಟ ವಾಹನವು ಚಾಸಿಸ್ ನಂಬರ್‌ಗೆ ಹೊಂದಿಕೆಯಾಗುತ್ತಿದೆ ಎಂದು ಅವರು ಹೇಳಿದರು, ಆದರೆ ಒಳಗಿರುವ ದೇಹಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸ್ಥಳದಿಂದ ಎಫ್‌ಎಸ್‌ಎಲ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

”ನಮ್ಮ ತಂಡಗಳು ಹರಿಯಾಣದಲ್ಲಿ ಕ್ಯಾಂಪ್ ಮಾಡುತ್ತಿವೆ ಮತ್ತು ಆರೋಪಿಗಳನ್ನು ಹಿಡಿಯಲು ಹರಿಯಾಣ ಪೊಲೀಸರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದರು.

ಘಟನೆ ಬಗ್ಗೆ ಮಾಹಿತಿ: 

ಹರಿಯಾಣದ ಗಡಿಯಲ್ಲಿರುವ ರಾಜಸ್ಥಾನದ ಘಟ್ಮೀಕಾ ಗ್ರಾಮದಲ್ಲಿ ಫೆ.16ರ ರಾತ್ರಿ ಭಾರೀ ಪೊಲೀಸರು ಜಮಾಯಿಸಿದ್ದರು. ಆದರೆ ರಾತ್ರಿಯ ವಿಲಕ್ಷಣ ಮೌನವು ಬೆಳಿಗ್ಗೆ ಇಲ್ಲವಾಗಿತ್ತು. ಘಟಮೀಕಾದ ಇಬ್ಬರು ಮುಸ್ಲಿಮರನ್ನು ಹತ್ಯೆಗೈದವರ ವಿರುದ್ಧ ಪ್ರತಿಭಟಿಸಲು ಸಮೀಪದ ಹಳ್ಳಿಗಳಿಂದ ಸುಮಾರು 2,000ಕ್ಕೂ ಜನರು ಧಾವಿಸಿದ್ದರು.

ರಾಜಸ್ಥಾನ-ಹರಿಯಾಣ ಗಡಿಗೆ ಸಮೀಪವಿರುವ ಹರಿಯಾಣದಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿರುವ ಕುರಿತು ‘ದಿ ವೈರ್‌’ ವರದಿ ಮಾಡಿತ್ತು. ಈ ಅಪರಾಧಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಸ್ವಯಂಘೋಷಿತ ‘ಗೋ ರಕ್ಷಕರು’ ಎಂದು ಕರೆದುಕೊಂಡಿರುವ ಆರೋಪಿಗಳಿಂದಾಗಿ ಭೀತಿ ಉಂಟಾಗಿದೆ.

(ರಾಷ್ಟ್ರ ರಾಜಧಾನಿಯಿಂದ ಕೇವಲ 100 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಘಟನೆ ಈ ನಡೆದಿದ್ದು, ಗೋರಕ್ಷಣೆ ಹೆಸರಲ್ಲಿ ದುಷ್ಕೃತ್ಯ ಜರುಗಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿದ್ದ ಇಬ್ಬರು ಮುಸ್ಲಿಮರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಕಾರಿನೊಳಗೆ ಕೂಡಿಹಾಕಿ ಜೀವಂತವಾಗಿ ಕೊಂದಿರುವ ಆರೋಪ ಕೇಳಿಬಂದಿತ್ತು.)

ಘಟಮೀಕದಲ್ಲಿ ಸಣ್ಣ ರೈತರು ಮತ್ತು ಲಾರಿ ಚಾಲಕರು ಹೆಚ್ಚಾಗಿ ವಾಸಿಸುತ್ತಿದ್ದು, 2017ರಲ್ಲಿ ಉಮರ್ ಖಾನ್ ಹತ್ಯೆಯಾಗಿತ್ತು. ಆ ನಂತರದಲ್ಲಿ ಈ ಗ್ರಾಮದಲ್ಲಿ ಅಂತಹ ಉದ್ವಿಗ್ನ ವಾತಾವರಣ ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...