ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಸಂಪುಟ ಸಹೊದ್ಯೋಗಿಗಳು ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ಖಟ್ಟರ್ ಮತ್ತು ಸಚಿವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸಿಎಂ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಎಲ್ಲರೂ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಬಿಜೆಪಿ ನಾಯಕ ಕನ್ವರ್ ಪಾಲ್ ಗುಜ್ಜರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
#WATCH | Chandigarh: BJP leader Kanwar Pal Gujjar says, "CM and cabinet ministers have resigned and the Governor has accepted the resignations…" pic.twitter.com/ckFpx6G5Dm
— ANI (@ANI) March 12, 2024
ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಷಯದಲ್ಲಿ ಆಡಳಿತಾರೂಢ ಮೈತ್ರಿಕೂಟದಲ್ಲಿ ವಿಭಜನೆಯ ಊಹಾಪೋಹಗಳ ಮಧ್ಯೆ ಖಟ್ಟರ್ ರಾಜೀನಾಮೆ ನೀಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮನೋಹರ್ ಲಾಲ್ ಖಟ್ಟರ್, ಹರಿಯಾಣದ ಕರ್ನಾಲ್ ಲೋಕಸಭೆ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಒಟ್ಟು 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಹೊಂದಿದೆ. ಜೆಜೆಪಿಯ ದುಶ್ಯಂತ್ ಚೌಟಾಲ ಅವರೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚಿಸಿತ್ತು.
ಇದನ್ನೂ ಓದಿ : “ಮೋದಿ ಜೀ ದಯವಿಟ್ಟು ಮಣಿಪುರಕ್ಕೆ ಒಮ್ಮೆ ಬನ್ನಿ”: ಸಂಚಲನ ಸೃಷ್ಟಿಸಿದ ಫೈಟರ್ ವಿಡಿಯೋ


