Homeಮುಖಪುಟಗುಂಡು ಹಾರಿಸಿ ಹರ್ಯಾಣ ಕಾಂಗ್ರೆಸ್ ವಕ್ತಾರ ವಿಕಾಸ್ ಚೌಧರಿ ಹತ್ಯೆ.

ಗುಂಡು ಹಾರಿಸಿ ಹರ್ಯಾಣ ಕಾಂಗ್ರೆಸ್ ವಕ್ತಾರ ವಿಕಾಸ್ ಚೌಧರಿ ಹತ್ಯೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |
ಹರ್ಯಾಣ ಕಾಂಗ್ರೆಸ್ ವಕ್ತಾರ ವಿಕಾಸ್ ಚೌಧರಿ ಮೇಲೆ ಫರಿದಾಬಾದ್ ಮಾರುಕಟ್ಟೆ ಬಳಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಇಂದು ಬೆಳಿಗ್ಗೆ ವಿಕಾಸ್ ರವರು ದಿನನಿತ್ಯದಂತೆ ಜಿಮ್ ಮುಗಿಸಿ ಮರಳುತ್ತಿದ್ದಾಗ ಅವರ ಕಾರಿನ ಮೇಲೆ ಗುಂಡಿನ ಮಳೆಗರೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ವಿಕಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ ಅವರು ಮೃತಪಟ್ಟಿದ್ದಾರೆ.

ಫರಿದಾಬಾದ್‍ನ ಸೆಕ್ಟರ್ 9 ರಲ್ಲಿನ ಮಾರುಕಟ್ಟೆ ಬಳಿ ಘಟನೆ ನಡೆದಿದ್ದು, ಫರಿದಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿನ ಸಿಸಿಟಿವಿ ಕ್ಯಾಮರಗಳ ಆಧಾರದಲ್ಲಿ ಹತ್ಯೆಕೋರರನ್ನು ಬಂಧಿಸಲು ಪ್ರಯತ್ನ ಮುಂದುವರೆಸಿದ್ದಾರೆ.

ವಿಕಾಸ್ ಪ್ರತಿನಿತ್ಯ ಜಿಮ್‍ಗೆ ತೆರಳುತ್ತಿದ್ದರು. ಇದನ್ನು ಹತ್ಯೆಕೋರರು ಗ್ರಹಿಸಿದ್ದು ಅವರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದರು. ಎಂದಿನಂತೆ ಇಂದು ಜಿಮ್ ಮುಗಿಸಿ ಕಾರಿನಲ್ಲಿ ಕುಳಿತಿದ್ದಾಗ ಅವರ ಮೇಲೆ 8-10 ಬಾರಿ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಹರ್ಯಾಣದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಆ ಹಿನ್ನೆಲೆಯಲ್ಲಿಯೇ ಹತ್ಯೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...