Homeಮುಖಪುಟದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

- Advertisement -
- Advertisement -

ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲೆ ಹರಿಯಾಣದ ಶಂಭು ಗಡಿಯಲ್ಲಿ ಇಂದು (ಡಿ.14) ಪೊಲೀಸರು ಮತ್ತೊಮ್ಮೆ ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಪಂಜಾಬ್-ಹರಿಯಾಣ ಗಡಿ ಶಂಭು ಪ್ರದೇಶದ ಪ್ರತಿಭಟನಾ ಸ್ಥಳದಿಂದ 101 ರೈತರು ದೆಹಲಿಯತ್ತ ಕಾಲ್ನಡಿಗೆ ಜಾಥಾ ನಡೆಸಲು ಮುಂದಾದರು. ರೈತರು ಗಡಿ ದಾಟದಂತೆ ಹರಿಯಾಣ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ಬೇಧಿಸಿ ಮುನ್ನುಗ್ಗು ಯತ್ನಿಸಿದರು. ವೇಳೆ ಪೊಲೀಸರು ಅವರ ಮೇಲೆ ಬಲ ಪ್ರಯೋಗಿಸಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನಾತ್ಮಕ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರದ ಸರ್ಕಾರದ ಮೇಲೆ ಒತ್ತಡದ ಹೇರಲು ರೈತರು ಕಳೆದ ಫೆಬ್ರವರಿಯಿಂದ ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಅವರು ಗಡಿದಾಟಿ ದೆಹಲಿ ಪ್ರವೇಶಿಸಲು ಹರಿಯಾಣ ಪೊಲೀಸರು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಇಂದು ಮೂರನೇ ಬಾರಿಗೆ ರೈತರು ತಡೆಯನ್ನು ಬೇಧಿಸಿ ಮುನ್ನಗ್ಗಲು ಯತ್ನಿಸಿದ್ದಾರೆ.

ಈ ಹಿಂದೆ ಡಿಸೆಂಬರ್ 6 ಮತ್ತು 8ರಂದು ರೈತರು ದೆಹಲಿಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದರು. ಆಗ ಹರಿಯಾಣದ ಭದ್ರತಾ ಸಿಬ್ಬಂದಿ ಅವಕಾಶ ನೀಡಿರಲಿಲ್ಲ. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾನೂನುಗಳ ವಿರುದ್ದದ ಸುದೀರ್ಘ ಹೋರಾಟದ ಬಳಿಕ ರೈತರು ಮತ್ತೊಂದು ಹೋರಾಟ ಕೈಗೊಂಡಿದ್ದಾರೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ತಮ್ಮೊಂದಿಗೆ ಮಾತುಕತೆ ನಡೆಸುವಂತೆ ರೈತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆ ತಡೆಯಲು ಹರಿಯಾಣದ ಅಂಬಾಲಾ ಜಿಲ್ಲಾಡಳಿತ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಕಾನೂನುಬಾಹಿರ ಸಭೆ ನಡೆಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಹರಿಯಾಣ ಸರ್ಕಾರ ಅಂಬಾಲಾದ 12 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್‌ಎಂಎಸ್‌ ಸೇವೆಗಳನ್ನು ಡಿಸೆಂಬರ್ 17 ರವರೆಗೆ ಸ್ಥಗಿತಗೊಳಿಸಿದೆ.

ರೈತ ಸಂಘಟನೆಗಳು ರಾಷ್ಟ್ರ ರಾಜಧಾನಿಯ ಆಡಳಿತದಿಂದ ಅನುಮತಿ ಪಡೆದ ನಂತರವೇ ದೆಹಲಿಗೆ ಮೆರವಣಿಗೆ ನಡೆಸಬಹುದು ಎಂದು ಅಂಬಾಲಾ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಇವೆಲ್ಲದದ ನಡುವೆ, ಖಾನೌರಿ ಗಡಿಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಇಂದಿಗೆ (ಶನಿವಾರ) 19 ನೇ ದಿನಕ್ಕೆ ಕಾಲಿಟ್ಟಿದೆ.

ದೀರ್ಘಕಾಲದ ಉಪವಾಸದಿಂದಾಗಿ ಅವರು ದುರ್ಬಲರಾಗಿದ್ದಾರೆ ಎಂದಿರುವ ವೈದ್ಯರು, ಈಗಾಗಲೇ ಆಸ್ಪತ್ರೆಗೆ ದಾಖಲಿಸಲು ಶಿಫಾರಸು ಮಾಡಿದ್ದಾರೆ.

ಪ್ರತಿಭಟನಾನಿರತ ರೈತರು ದಲ್ಲೆವಾಲ್ ಸುತ್ತಲೂ ಭದ್ರತಾ ವೃತ್ತ ರಚಿಸಿದ್ದಾರೆ. ಇದರಿಂದಾಗಿ ಸರ್ಕಾರದ ಅಧಿಕಾರಿಗಳು ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ.

ನವೆಂಬರ್ 26ರಂದು ಆಮರಣಾಂತ ಉಪವಾಸ ಆರಂಭಿಸುವ ಕೆಲವೇ ಗಂಟೆಗಳ ಮೊದಲು, ಪಂಜಾಬ್ ಪೊಲೀಸರು ದಲ್ಲೆವಾಲ್ ಅವರನ್ನು ಖಾನೌರಿ ಗಡಿಯಿಂದ ಬಲವಂತವಾಗಿ ಕರೆದೊಯ್ದಿದ್ದರು.

ಶುಕ್ರವಾರ(ಡಿ.13) ಎಸ್‌ಕೆಎಂ ನಾಯಕ ರಾಕೇಶ್ ಟಿಕಾಯತ್ ದಲ್ಲೆವಾಲ್ ಅವರನ್ನು ಭೇಟಿ ಮಾಡಿದ್ದು, ‘ಜಂಟಿ ಹೋರಾಟ’ಕ್ಕಾಗಿ ರೈತರ ಗುಂಪುಗಳ ಏಕತೆಗೆ ಕರೆ ನೀಡಿದ್ದಾರೆ.

ಬೆಳೆಗಳಿಗೆ ಎಂಎಸ್‌ಪಿ ನೀಡುವ ಕಾನೂನು ಖಾತರಿ, ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂಬುವುದು ಪ್ರತಿಭಟನಾ ನಿರತ ರೈತರ ಪ್ರಮುಖ ಬೇಡಿಕೆಗಳಾಗಿವೆ.

2013ರ ಭೂಸ್ವಾಧೀನ ಕಾಯ್ದೆಯ ಮರುಸ್ಥಾಪನೆ ಮತ್ತು 2020-21ರ ಹಿಂದಿನ ಆಂದೋಲನದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಸೇರಿವೆ.

ಇದನ್ನೂ ಓದಿ : ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...