Homeಚಳವಳಿಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

ಹರಿಯಾಣ: ಬಿಜೆಪಿ ಧ್ವಜಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ರೈತರು

- Advertisement -
- Advertisement -

ಹರಿಯಾಣ ರಾಜ್ಯದ ಸಿರ್ಸಾದ ಎಲ್ಲೆನಾಬಾದ್‌ನಲ್ಲಿ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ. ಬಿಜೆಪಿ ಗೋವಿಂದ್ ಕಂದಾ ಅವರಿಗೆ ಟಿಕೆಟ್ ನೀಡಿದೆ. ಆದರೆ, ಸಿರ್ಸಾದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ರಸ್ತೆಗಳಲ್ಲಿ ಪ್ರಚಾರಕ್ಕೆ ಹಾಕಿದ್ದ ಬಿಜೆಪಿ ಧ್ವಜಗಳನ್ನು ಕಿತ್ತು ಒಂದೆಡೆ ಹಾಕಿ ಬೆಂಕಿ ಹಚ್ಚಿದ್ದಾರೆ.

ಭಾರತೀಯ ಜನತಾ ಪಾರ್ಟಿ ಇಂದು ಗೋವಿಂದ್ ಕಂದಾ ಅವರಿಗೆ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿತ್ತು. ಹರಿಯಾಣದಲ್ಲಿ ಬಿಜೆಪಿ ನಾಯಕರ ಯಾವುದೇ ಕಾಯ್ರಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದಿರುವ ರೈತರು ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ಅಭ್ಯರ್ಥಿ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು.

ನಾಮಪತ್ರ ಸಲ್ಲಿಕೆಗಾಗಿ ರಸ್ತೆಯುದ್ದಕ್ಕೂ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ಕಿತ್ತು, ಒಂದು ಕಡೆ ಗುಡ್ಡೆ ಹಾಕಿದ ಪ್ರತಿಭಟನಾ ನಿರತ ರೈತರು ಆಕ್ರೋಶದಲ್ಲಿ ಬೆಂಕಿ ಹಾಕಿದ್ದಾರೆ. ಪ್ರತಿಭಟನೆಯನ್ನು ಮೊದಲೆ ಊಹಿಸಿದ್ದ ಸರ್ಕಾರ ಭಾರಿ ಬಿಗಿ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಿತ್ತು. ಪೊಲೀಸ್ ರಕ್ಷಣೆಯಲ್ಲಿ ಹೋಗಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೈತರ ಪರ ಟ್ವೀಟ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ವರುಣ್ ಗಾಂಧಿ, ಮೇನಕಾ ಗಾಂಧಿ ಔಟ್

“ನಾವು ಈ ಧ್ವಜಗಳನ್ನು ದ್ವೇಷಿಸುತ್ತೇವೆ. ಈ ಧ್ವಜಗಳ ಅಡಿಯಲ್ಲಿ ಅಧಿಕಾರಕ್ಕೆ ಬಂದವರು ನಮ್ಮವರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ್ದಾರೆ. ಹೀಗಾಗಿ ಇವುಗಳಿಗೆ ಬೆಂಕಿ ಹಾಕಿದ್ದೇವೆ” ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದ್ದಾರೆ.

ಲಖಿಂಪುರ್‌ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಹತ್ಯೆ ಮಾಡಲಾಗಿದೆ. ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಯುಪಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಸಮನ್ಸ್ ನೀಡಿದ್ದಾರೆ. ಆದರೆ, ಆರೋಪಿ ತಪ್ಪಿಸಿಕೊಂಡಿದ್ದಾರೆ.

“3 ಪೊಲೀಸ್ ತಂಡಗಳು ಕಾಣೆಯಾದ ಆರೋಪಿ ಆಶಿಶ್ ಮಿಶ್ರಾ ಅವರನ್ನು ಹುಡುಕುತ್ತಿವೆ. ಇಬ್ಬರನ್ನು ಬಂಧಿಸಲಾಗಿದೆ ಮತ್ತು ಮೂರು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆದರೆ ಯುಪಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವ ಕೊಳಕು ಆಟಗಳನ್ನು ನಿಲ್ಲಿಸಬೇಕು” ಎಂದು ಎಸ್‌ಕೆಎಂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

ವಿಡಿಯೋ ನೋಡಿ…


ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...